ಸಾಮಾಜಿಕ ನ್ಯಾಯಕ್ಕೆ ಕಾಂಗ್ರೆಸ್ ಬದ್ಧ: ರೆಹಮಾನ್ಖಾನ್
ಹೊಸಪೇಟೆ: ದೇಶದಲ್ಲಿ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವುದು ಕಾಂಗ್ರೆಸ್ ಪಕ್ಷ ಮಾತ್ರ. ಸಮಾಜಿಕ ನ್ಯಾಯ ಬೇರೆ ಯಾವ ಪಕ್ಷಗಳಲ್ಲಿಯೂ ಇಲ್ಲ ಎಂದು ಕೇಂದ್ರ ಸಚಿವ ಕೆ. ರೆಹಮಾನ್ಖಾನ್ ಹೇಳಿದರು.
ನಗರದಲ್ಲಿ ಶನಿವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಕಾಂಗ್ರೆಸ್ ಸಾಮಾಜಿಕ ನ್ಯಾಯಕ್ಕೆ ಹೆಚ್ಚು ಆಧ್ಯತೆ ನೀಡುತ್ತಿರುವುದರಿಂದ ದೇಶದಲ್ಲಿ ಪಕ್ಷವನ್ನು ಪ್ರತಿಯೊಬ್ಬರು ಬೆಂಬಲಿಸುತ್ತಿದ್ದಾರೆ. ದೇಶ ಮತ್ತು ರಾಜ್ಯದಲ್ಲಿ ಅನೇಕ ಬಾರಿ ಕಾಂಗ್ರೆಸ್ ಸರ್ಕಾರಗಳು ಅಧಿಕಾರಕ್ಕೆ ಬಂದು ಉತ್ತಮ ಆಡಳಿತ ನೀಡಿವೆ. ದೇಶದ ಜನತೆ ಕಾಂಗ್ರೆಸ್ ಸರ್ಕಾರ ಮಾತ್ರ ಉತ್ತಮ ಆಡಳಿತ ನೀಡುತ್ತದೆ ಎಂಬುದನ್ನು ಅರಿತುಕೊಂಡಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಅಧಿಕಾರ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.
ಸಾಮಾಜಿಕ ನ್ಯಾಯ ಪಾಲನೆಯಲ್ಲಿ ಕೆಲ ಕ್ಷೇತ್ರಗಳಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ತಪ್ಪಿರಬಹುದು. ಆದರೆ ಕೆಲವು ಕಡೆ ಗೆಲ್ಲುವ ಅಭ್ಯರ್ಥಿಗಳಿಗೂ ಟಿಕೆಟ್ ಕೈ ತಪ್ಪಿರುವ ಬಗ್ಗೆ ಕಾರ್ಯಕರ್ತರಿಂದ ಕೇಳಿ ಬರುತ್ತಿದೆ. ಇದೆಲ್ಲವುಗಳ ಮಧ್ಯೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಗಾಳಿ ಬಿಸಿದ್ದು, ಅನ್ಯ ಪಕ್ಷದವರಿಗೆ ಎದೆಬಡಿತ ಉಂಟಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದ ಖಚಿತ ಎಂದು ವಿಶ್ವಾಸವ್ಯಕ್ತಪಡಿಸಿದರು.
ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್. ಅಬ್ದುಲ್ ವಹಾಬ್, ಕಾಂಗ್ರೆಸ್ ಮುಖಂಡರಾದ ಬಿ.ಕಾಂ. ಮಾಬುಸಾಹೇಬ್, ಕೆ. ಬಡಾವಲಿ, ಎಚ್.ಎನ್. ಎಫ್. ಮಹಮ್ಮದ್ ಇಮಾಮ್ ನಿಯಾಜಿ, ಫಾಹೀಂ ಭಾಷ, ಖದೀರ್ ಭಾಷ, ಗುಜ್ಜಲ್ ಶಿವರಾಮಪ್ಪ, ಟಿ. ಚಿದಾನಂದ, ಅಯ್ಯಾಳಿ ಮೂರ್ತಿ, ಭಾಗ್ಯಲಕ್ಷ್ಮಿ ಭರಾಡೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

