ಬಳ್ಳಾರಿ

ಹೊಸಪೇಟೆ: ಇಂದಿನಿಂದ ಜೆಡಿಎಸ್ ಪ್ರಚಾರ

Published On :

ಹೊಸಪೇಟೆ: ಆರೋಗ್ಯ ಸ್ಥಿತಿ ಸರಿಯಿಲ್ಲದ ಕಾರಣ ವಿಜಯನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕ್ಷೇತ್ರದಲ್ಲಿ ಇದುವರೆಗೂ ಪ್ರಚಾರ ಕೈಗೊಂಡಿರಲಿಲ್ಲ. ಏ. 28ರಿಂದ ಪ್ರಚಾರ ನಡೆಸಿ ಮತಯಾಚನೆ ನಡೆಸುವೆ ಎಂದು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ. ಬಸವರಾಜ್ ಹೇಳಿದರು.
ಅವರು ನಗರದ ಜೆಡಿಎಸ್ ಕಚೇರಿಯಲ್ಲಿ ಶನಿವಾರ ರಾತ್ರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾನುವಾರದಿಂದ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಉತ್ಸುಕನಾಗಿ ಪ್ರಚಾರದಲ್ಲಿ ತೊಡಗಿಕೊಳ್ಳುವೆ. ಈಗ ಆರೋಗ್ಯದಲ್ಲಿ ಸ್ಪಲ್ಪಮಟ್ಟಿಗೆ ಸುಧಾರಣೆ ಆಗುತ್ತಿರುವುದರಿಂದ ಪ್ರಚಾರದಲ್ಲಿ ಭಾಗವಹಿಸುವೆ. ಇದುವರೆಗೂ ಪ್ರಚಾರದಲ್ಲಿ ಕಾಣಿಸಿಕೊಳ್ಳದೇ ಇರುವುದರಿಂದ ನನ್ನ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಬೇರೆ ಪಕ್ಷದವರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಪ್ರಚಾರದಲ್ಲಿ ಭಾಗವಹಿಸಿಲಿಲ್ಲ ಎನ್ನುವ ಆರೋಪಗಳು ಇವೆ. ಎಲ್ಲ ಆರೋಪಗಳು ಸುಳ್ಳಾಗಿದ್ದು, ಭಾನುವಾರದಿಂದ ಕ್ಷೇತ್ರದಲ್ಲಿ ಪ್ರಚಾರ ನಡೆಸುವೆ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ಮುಖಂಡರಾದ ಕೆ. ಕೊಟ್ರೇಶ್, ಗೌಳಿ ನಾಗರಾಜ್, ದೇವಪ್ರಿಯ, ಹುಲುಗಣ್ಣ, ಕೆ. ಷಾನವಾಜ್, ಬ್ಯಾಲಾಳ್ ಸಣ್ಣೆಪ್ಪ, ಕೆ. ಕೃಷ್ಣ, ರಾಘವೇಂದ್ರ ಕಟ್ಟಿಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.