ಬಳ್ಳಾರಿ

ಸರ್ಕಾರಿ ಪದವಿ ಕಾಲೇಜಿಗೆ ಪ್ರಸ್ತಾವನೆ

Published On :

ಹಗರಿಬೊಮ್ಮನಹಳ್ಳಿ: ಕ್ಷೇತ್ರ ವ್ಯಾಪ್ತಿಯ ಹಗರಿಬೊಮ್ಮನಹಳ್ಳಿ, ಕೊಟ್ಟೂರು ಹಾಗೂ ತಂಬ್ರಹಳ್ಳಿ ಪ್ರದೇಶಗಳಲ್ಲಿ ಸರ್ಕಾರಿ ಪದವಿ ಕಾಲೇಜುಗಳನ್ನು ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಅದಷ್ಟು ಬೇಗ ಈ ಮೂರು ಸ್ಥಳಗಳಿಗೆ ಡಿಗ್ರಿ ಕಾಲೇಜು ಮಂಜೂರಾಗುವ ಭರವಸೆ ಇದೆ ಎಂದು ಶಾಸಕ ಎಸ್. ಭೀಮಾನಾಯ್ಕ ಹೇಳಿದರು.
ಗುರುವಾರ ಮಧ್ಯಾಹ್ನ ಪಟ್ಟಣದ ಗುರುಭವನದಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕ್ಷೀರಭಾಗ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಉನ್ನತ ಶಿಕ್ಷಣದ ಸೌಲಭ್ಯಗಳನ್ನು ಸಮಗ್ರವಾಗಿ ಕಲ್ಪಿಸುವ ಮೂಲಕ ಶೈಕ್ಷಣಿಕ ವಲಯದ ಪ್ರಗತಿಗೆ ಶ್ರಮಿಸುವೆ. ಅಲ್ಲದೇ ಕ್ಷೇತ್ರದ ಎಲ್ಲ ಶಾಲಾ, ಕಾಲೇಜುಗಳ ಮೂಲ ಸಮಸ್ಯೆಗಳ ನಿವಾರಣೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಭರವಸೆ ನೀಡಿದರು.
ಬಡತನ ಮತ್ತು ಅಪೌಷ್ಟಿಕತೆ ಹೈದಾರಾಬಾದ್ ಕರ್ನಾಟಕ ವ್ಯಾಪ್ತಿಯ ಮಕ್ಕಳ ಕಲಿಕೆ ಮತ್ತು ಬೆಳವಣಿಗೆ ಮೇಲೆ ಗಂಭೀರ ಪರಿಣಾಮ ಬೀರಿದೆ. ಅಪೌಷ್ಟಿಕತೆ ಹೋಗಲಾಡಿಸಿ, ಮಕ್ಕಳನ್ನು ಕಲಿಕೆಯತ್ತ ಕರೆತರಲು ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಇದರ ಲಾಭವನ್ನು ಪಡೆದು ಮಕ್ಕಳನ್ನು ಉನ್ನತ ಶಿಕ್ಷಣವಂತರನ್ನಾಗಿಸಿ ಎಂದು ಪೋಷಕರಲ್ಲಿ ಮನವಿ ಮಾಡಿದರು.
ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಪೂರ್ಯನಾಯ್ಕ ಅಧ್ಯಕ್ಷತೆ ವಹಿಸಿದ್ದರು, ಸಾಮಾಜಿಕ ಕಾರ್ಯಕರ್ತ ಕುರಿ ಶಿವಮೂರ್ತಿ, ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ, ಜಿಪಂ ಸದಸ್ಯರಾದ ಕರಿಬಸವನಗೌಡ್ರ ರತ್ನಮ್ಮ, ರೋಗಾಣಿ ಹುಲುಗಪ್ಪ, ತಾಪಂ ಉಪಾಧ್ಯಕ್ಷೆ ನಾಗರತ್ನಾ ವೆಂಕಟೇಶ, ಉಪ್ಪಾರ ಬಾಲಪ್ಪ, ವೈ. ಮಲ್ಲಿಕಾರ್ಜುನ, ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ ಹುಡೇದ್ ಗುರುಬಸವರಾಜ, ಚಿಂತ್ರಪಳ್ಳಿ ಗ್ರಾಪಂ ಅಧ್ಯಕ್ಷ ಎಂ. ಆನಂದ್, ಹಗರಿಬೊಮ್ಮನಹಳ್ಳಿ ಗ್ರಾಪಂ ಅಧ್ಯಕ್ಷ ಜಿ.ಎಂ. ಶಿವಯ್ಯ, ಹಂಚಿನಮನಿ ಹನುಮಂತಪ್ಪ, ಅರಸಿಕೇರಿ ಹನುಮಂತಪ್ಪ, ತಾಪಂ ಇಒ ಗೋಪ್ಯಾನಾಯ್ಕ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.