ಬಳ್ಳಾರಿ: ನಾಳೆ ಉದ್ಯೋಗ ಮೇಳ
ಬಳ್ಳಾರಿ: ಕೌಶಲ್ಯ ಆಯೋಗ, ಉದ್ಯೋಗ ಮತ್ತು ತರಬೇತಿ ಇಲಾಖೆ, ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳ ಸಹಯೋಗದಲ್ಲಿ ಆ. 3ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2ರ ವರೆಗೆ ಜಿಲ್ಲಾ ಮಟ್ಟದ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಮೆ. ಎಂಜಿನಿಯರಿಂಗ್ ಸರ್ವಿಸಸ್ ಇಂಟರ್ನ್ಯಾಷನಲ್, ಶ್ರೀ ರಾಘವೇಂದ್ರ ಡೆವಲಪರ್ಸ್, ಯುರೇಕಾ ಫೋರ್ಬ್ಸ್, ಗ್ರೀನ್ ಗೋಲ್ಡ್ ಸೆಕ್ಯುರಿಟೀಸ್ ಉದ್ಯೋಗದಾತರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಆಸಕ್ತರು ಸ್ವವಿವರಗಳೊಂದಿಗೆ ವಿದ್ಯಾರ್ಹತೆ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ-9844444958, 9036422052ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪಿ.ಎಸ್. ಹಟ್ಟೆಪ್ಪ ತಿಳಿಸಿದ್ದಾರೆ.
ಜಿಗುಪ್ಸೆ: ವ್ಯಕ್ತಿ ಆತ್ಮಹತ್ಯೆ
ಹೂವಿನಹಡಗಲಿ: ಪಟ್ಟಣದ ಪೊಲೀಸ್ ಠಾಣೆ ಎದುರಿನ ಮರಕ್ಕೆ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ. ಆತ್ಮಹತ್ಯೆಯಾದ ವ್ಯಕ್ತಿಯು ಪಟ್ಟಣದ ನಿವಾಸಿಯಾಗಿದ್ದು, ದಾದಾಪೀರ್ (65) ಎಂದು ತಿಳಿದು ಬಂದಿದೆ. ಅಂಗವಿಕಲನಾಗಿದ್ದ ದಾದಾಪೀರ್ ಈಚೆಗೆ ಕಾಯಿಲೆಗೆ ತುತ್ತಾಗಿರುವ ಹಿನ್ನೆಲೆಯಲ್ಲಿ ತನ್ನ ಕುಟುಂಬದಿಂದ ದೂರವಾಗಿದ್ದು, ಒಂಟಿತನ ಅನುಭವಿಸುತ್ತಿದ್ದನು ಎಂದು ಹೇಳಲಾಗುತ್ತಿದೆ. ಇದರಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆ ಎದುರಿಗಿರುವ ತನ್ನ ಮಗನ ಮಾಲಿಕತ್ವದ ದಾವಣಗೆರೆ ಆಟೋ ವರ್ಕ್ಸ್ ಪಕ್ಕದ ಮರದ ಕೊಂಬೆಗೆ ಗುರುವಾರ ಬೆಳಗಿನ ಜಾವ ನೇಣು ಹಾಕಿಕೊಂಡಿದ್ದಾನೆ. ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ
ಬಳ್ಳಾರಿ: ಮಹಿಳೆಯೋರ್ವಳನ್ನು ಯಾರೋ ದುಷ್ಕರ್ಮಿಗಳು ಕಲ್ಲಿನಿಂದ ತಲೆಯನ್ನು ಜಜ್ಜಿ ಕೊಲೆಗೈದಿರುವ ಘಟನೆ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಮೇಶ್ವರ ಗುಡ್ಡ ಸಂಗಮೇಶ್ವರ ದೇವಸ್ಥಾನದ ಸಮೀಪ ಬುಧವಾರ ನಡೆದಿದೆ.
ಕೊಲೆಯಾದ ಮಹಿಳೆ ಅಂದಾಜು 20ರಿಂದ 25 ವರ್ಷ ವಯಸ್ಸಿನವಳಾಗಿದ್ದು, ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು, 5 ಅಡಿ ಎತ್ತರವಿದ್ದು, ಈಕೆ ಯಾರೆಂಬುದು ತಿಳಿದುಬಂದಿಲ್ಲ. ಕಲ್ಲಿನಿಂದ ಮಹಿಳೆಯ ತಲೆ ಮತ್ತು ಮುಖಕ್ಕೆ ಬಲವಾಗಿ ಹೊಡೆದು ಗುರುತಿಸಲು ಸಾಧ್ಯವಾಗದಂತೆ ಕೊಲೆ ಮಾಡಲಾಗಿದೆ. ಅದೇ ಗ್ರಾಮದ ಸಂಗಪ್ಪ, ಕೆಂಚಪ್ಪ ಮತ್ತು ಇತರರು ಹೊಸಹಳ್ಳಿ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

