ಬಳ್ಳಾರಿ

ಭದ್ರಾ ಜಲಾಶಯ: ಒಳಹರಿವು ಹೆಚ್ಚಳ

Published On :

ಬಳ್ಳಾರಿ: ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ನೀರಿನ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದೆ. 32,010 ಕ್ಯುಸೆಕ್‌ನಷ್ಟು ಒಳಹರಿವಿದ್ದು, ಒಳಹರಿವಿನ ಪ್ರಮಾಣ ಹೀಗೆ ಮುಂದುವರೆದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪುವ ನಿರೀಕ್ಷೆಯಿದೆ.  ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ನದಿಗೆ ಬಿಡಲಾಗುವುದು.  ನದಿ ದಂಡೆಯುದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಬಿ.ಎನ್ ಫಣಿರಾಜು ತಿಳಿಸಿದ್ದಾರೆ.
ಜೂಜಾಟ: 9 ಜನರ ಬಂಧನ
ಬಳ್ಳಾರಿ: ಇಲ್ಲಿನ ಕೋಲಾಚಲಂ ಕಾಂಪೌಂಡಿನಲ್ಲಿರುವ ಸಂಗೀತ ಕಾಂಪ್ಲೆಕ್ಸ್‌ನಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ಗಾಂಧಿನಗರ ಪೊಲೀಸರು ದಾಳಿ ಮಾಡಿ 9 ಜನರನ್ನು ಬಂಧಿಸಿ, ಅವರಿಂದ ರು. 1490 ನಗದು, 6 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸಿಪಿಐ, ಪಿಎಸ್‌ಐ ಹಾಗೂ ಸಿಬ್ಬಂದಿ ದಾಳಿ ಮಾಡಿದ್ದಾರೆ. ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೃಹಿಣಿ ಆತ್ಮಹತ್ಯೆ
ಬಳ್ಳಾರಿ: ಹೊಟ್ಟೆನೋವಿನ ಬಾಧೆ ತಾಳಲಾರದೆ ಗೃಹಿಣಿಯೋರ್ವಳು ಕ್ರಿಮಿನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ನಡೆದಿದೆ. ಮೃತಳು ಸೋಮಲಾಪುರ ಗ್ರಾಮದ ನಾಗಮ್ಮ (35). ಬುಧವಾರ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿದ್ದಾಳೆ. ಗುರುವಾರ ಬೆಳಗ್ಗೆ ವಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ರಿಮಿನಾಶಕ ಆಕಸ್ಮಿಕ ಸೇವನೆ: ರೈತ ಸಾವು
ಬಳ್ಳಾರಿ: ಜಮೀನಿಗೆ ಕ್ರಿಮಿನಾಶಕ ಸಿಂಪಡಿಸಲು ಹೋದ ರೈತ, ಸರಿಯಾಗಿ ಕೈ ತೊಳೆದುಕೊಳ್ಳದೆ ಊಟ ಮಾಡಿದ್ದರಿಂದ ಕ್ರಿಮಿನಾಶಕ ದೇಹದೊಳಗೆ ಸೇರಿಕೊಂಡು ಮೃತಪಟ್ಟಿರುವ ಘಟನೆ ತಾಲೂಕಿನ ಬಸರಕೋಡ ಗ್ರಾಮದಲ್ಲಿ ನಡೆದಿದೆ. ಮೃತನು ಕುಮಾರ್(22). ಈತನು ಜು. 23ರಂದು ಜಮೀನಿಗೆ ಕ್ರಿಮಿನಾಶಕ ಸಿಂಪಡಿಸಲು ಹೋಗಿದ್ದಾನೆ. ಸರಿಯಾಗಿ ಕೈ ತೊಳೆದುಕೊಳ್ಳದೆ ಊಟ ಮಾಡಿದ ಪರಿಣಾಮವಾಗಿ ಅಸ್ವಸ್ಥಗೊಂಡಿದ್ದರಿಂದ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಕುರಿತಾಗಿ ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.