108 ಸಿಬ್ಬಂದಿ ಹೋರಾಟ ಬೆಂಬಲಿಸಿ ಪ್ರತಿಭಟನೆ
ಬಳ್ಳಾರಿ: ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆರೋಗ್ಯ ಕವಚ ಸಿಬ್ಬಂದಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲಿಸಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ನಗರದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿತು.
ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು. ಕರವೇ ಜಿಲ್ಲಾಧ್ಯಕ್ಷ ಎಸ್.ಸುರೇಶ್ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಆಂಧ್ರದ ಜಿವಿಕೆ ಸಂಸ್ಥೆಯು ಆರೋಗ್ಯ ಕವಚ ಯೋಜನೆಯಡಿಯಲ್ಲಿ ಸಿಬ್ಬಂದಿ ನೇಮಕ ಮಾಡಿಕೊಂಡು ಅವರಿಗೆ ವಿನಾಕಾರಣ ಕಿರುಕುಳ ನೀಡುತ್ತಿದೆ. ಕೆಲವರನ್ನು ಕರ್ತವ್ಯದಿಂದ ತೆಗೆದು ಹಾಕಿರುವುದು, ಕೆಲವರಿಗೆ ಸಮಯಕ್ಕೆ ಸರಿಯಾಗಿ ವೇತನ ನೀಡಲಾರದೇ ಸತಾಯಿಸುತ್ತಿರುವುದು ಖಂಡನೀಯ. ರಾಜ್ಯ ಸರ್ಕಾರವು ಮಧ್ಯ ಪ್ರವೇಶಿಸಿ ಆರೋಗ್ಯ ಕವಚ ಯೋಜನೆ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಮನವೊಲಿಸಿ ಅವರ ಎಲ್ಲ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು. ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಕೆ.ಎಸ್ ಅಶೋಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಮೂರ್ತಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಜಿ. ರಾಜಶೇಖರ್, ನಗರ ಘಟಕದ ಕಾರ್ಯಾಧ್ಯಕ್ಷ ಬಿ.ರಮೇಶ್, ನಗರ ಸಂಚಾಲಕ ನರೇಂದ್ರ, ಸಂಡೂರು ತಾಲೂಕು ಘಟಕದ ಅಧ್ಯಕ್ಷ ಪಿ.ರಾಜು, ಪದಾಧಿಕಾರಿಗಳಾದ ಕೆ.ಶಂಕರ ನಂದಿಹಾಳ್, ಚರಕುಂಟೆ ಗ್ರಾಮ ಘಟಕದ ಅಧ್ಯಕ್ಷ ಜಯಣ್ಣ, ಬೊಬ್ಬಾಕುಂಟೆ ಗ್ರಾಮ ಘಟಕದ ಅಧ್ಯಕ್ಷ ಕೃಷ್ಣ, ದಿವಾಕರ, ರಾಜು, ರಾಮು, ಸುಧಾ, ರಾಘವೇಂದ್ರ ಕಾಲೋನಿಯ ನಾಗೇಂದ್ರ, ಮೇಘ, ಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

