ಬಳ್ಳಾರಿ

ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಿ

Published On :

ಕೂಡ್ಲಿಗಿ: ಬಾಲ್ಯಾವಸ್ಥೆಯಲ್ಲೇ ಮಕ್ಕಳು ವೈಜ್ಞಾನಿಕ ಮನೋಭಾವನೆ ಬೆಳಸಿಕೊಳ್ಳುವುದರಿಂದ ಮಕ್ಕಳ ಬೌದ್ಧಿಕ ಮಟ್ಟ ವೃದ್ಧಿಗೆ ಉತ್ತಮ ಸಹಕಾರಿಯಾಗುತ್ತದೆ ಎಂದು ಡಯಟ್ ಉಪನ್ಯಾಸಕ ರಂಗಪ್ಪ ತಿಳಿಸಿದರು.
ಪಟ್ಟಣದ ಬಿಆರ್‌ಸಿ ಕೇಂದ್ರದಲ್ಲಿ ಶುಕ್ರವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಿಜ್ಞಾನ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿ, ವಿಜ್ಞಾನಿ ಡಾ. ಅಬ್ದುಲ್ ಕಲಾಂ ಅವರ ದೂರದೃಷ್ಟಿಯಂತೆ ವಿಜ್ಞಾನ ಬೆಳೆದಂತೆ ದೇಶದ ಪ್ರಗತಿಗೆ ಪೂರಕ ಎಂಬ ಆಶಯದೊಂದಿಗೆ ಸರ್ಕಾರ ಈಗ ವಿದ್ಯಾರ್ಥಿಗಳಿಗೆ ವಿಜ್ಞಾನ ಆವಿಷ್ಕಾರದ ವಿವಿಧ ಮಜಲುಗಳನ್ನು ಬೆಳೆಸಲು ಮುಂದಾಗಿದೆ ಎಂದರು.
ಶಿಕ್ಷಕರು ಪ್ರತಿಭಾವಂತರನ್ನು ಗುರುತಿಸುವ ಹೊಣೆಗಾರಿಕೆಯಿದೆ. ಇದರಿಂದ ಮಕ್ಕಳ ಭವಿಷ್ಯ ರೂಪುಗೊಳ್ಳುತ್ತದೆ. ತಾಲೂಕು ಮಟ್ಟದ ವಿಚಾರಗೋಷ್ಠಿಯಲ್ಲಿ ಉತ್ತಮ ಅಂಕಗಳಿಸಿದ ಇಬ್ಬರನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಅಣ್ಣಪ್ಪಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ತೀರ್ಪುಗಾರರಾಗಿ ಉಪನ್ಯಾಸಕ ಚನ್ನವೀರಗೌಡ, ಮಹಾಂತೇಶ್, ರಾಜಭಕ್ಷಿ ಆಗಮಿಸಿದ್ದರು. ಇಸಿಒ ಬಸವರಾಜ್, ಪಿ. ಶಿವರಾಜ್, ಬಿಆರ್‌ಪಿ ಚಾಂದ್‌ಪೀರ್, ಸಿಆರ್‌ಪಿ ಷಣ್ಮುಖಪ್ಪ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು. ತಾಲೂಕಿನ 22ಕ್ಕೂ ಹೆಚ್ಚು ಪ್ರೌಢಶಾಲೆ ವಿದ್ಯಾರ್ಥಿಗಳು ಗೋಷ್ಠಿಯಲ್ಲಿ ಜಲ ಸಹಕಾರ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಪ್ರಬಂಧ ಮಂಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.