ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಮನವಿ
ಬಳ್ಳಾರಿ: ತಾಲೂಕಿನ ಮೋಕ ಗ್ರಾಮದಲ್ಲಿ ಒತ್ತುವರಿಯಾಗಿರುವ ರಸ್ತೆಗಳನ್ನು ತೆರವುಗೊಳಿಸಿ, ಅಗಲೀಕರಣಗೊಳಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಇತ್ತೀಚೆಗೆ ಮನವಿ ಸಲ್ಲಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಗ್ರಾಮದ ದಸ್ತಗಿರಿಸಾಬ್, ಗ್ರಾಮದಲ್ಲಿ ಪುರಾತನ ಕಾಲದಿಂದಲೂ ಇರುವ ಮುಖ್ಯರಸ್ತೆ, ಖಬರಸ್ಥಾನಕ್ಕೆ ಹೋಗುವ ರಸ್ತೆಗಳು ಸಂಪೂರ್ಣ ಒತ್ತುವರಿಯಾಗಿವೆ. ಸಾರ್ವಜನಿಕರು, ಎತ್ತಿನಗಾಡಿ ಮತ್ತು ಲಘುವಾಹನಗಳ ಸಂಚಾರಕ್ಕಾಗಿ ಬಿಟ್ಟಿದ್ದ ಸುಮಾರು 40 ಅಡಿ ಇದ್ದ ಖಬರ್ಸ್ಥಾನ ರಸ್ತೆಯನ್ನು ಪಕ್ಕದ ನಿವಾಸಿಗಳು ಸುಮಾರು 40 ಅಡಿ ಕಬಳಿಸಿದ್ದು, ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.
ಸಾರ್ವಜನಿಕರು ಸಂಚರಿಸಲು ತೊಂದರೆ ಪಡುತ್ತಿದ್ದಾರೆ. ಅಲ್ಲದೇ, ಇನ್ನು ಕೆಲವೇ ದಿನಗಳಲ್ಲಿ ಪವಿತ್ರ ರಂಜಾನ್ ಹಬ್ಬವಿದ್ದು, ಪ್ರತಿಯೊಬ್ಬ ಮುಸಲ್ಮಾನರೂ ಇದೇ ರಸ್ತೆಯಲ್ಲಿ ಸಂಚರಿಸುವರು. ಅಲ್ಲದೇ, ಸಮಾಜದ ಯಾರಾದರೂ ಮೃತಪಟ್ಟರೆ, ಈ ರಸ್ತೆ ಮೂಲಕವೇ ಖಬರಸ್ಥಾನಕ್ಕೆ ತೆರಳಿ ಶವ ಸಂಸ್ಕಾರ ಮಾಡಬೇಕಿದ್ದು, ತೊಂದರೆಯಾಗುತ್ತಿದೆ. ಹೀಗಾಗಿ ಒತ್ತುವರಿ ರಸ್ತೆ ತೆರವುಗೊಳಿಸಿ, ಅಗಲೀಕರಣಗೊಳಿಸಬೇಕೆಂದು ಗ್ರಾಮಸ್ಥರ ಒತ್ತಾಯವಾಗಿದೆ ಎಂದು ದಸ್ತಗಿರಿಸಾಬ್ ಮನವಿಯಲ್ಲಿ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

