ವಿದ್ಯಾರ್ಥಿಗಳ ಪ್ರಗತಿಗೆ ಕ್ರೀಡೆ ಪೂರಕ: ಶಶಿಕಿರಣ
ಕೂಡ್ಲಿಗಿ: ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಅಂತರ್ ಶಾಲಾ ಮಟ್ಟದ ವಾಲಿಬಾಲ್ ಹಾಗೂ ಚೆಸ್ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸ್ಪರ್ಧೆಯಲ್ಲಿ ನಗರದ ವಿವಿಧ ಶಾಲಾ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಚಾರ್ಯ ಎಸ್. ಶಶಿಕಿರಣ್ ಮಾತನಾಡಿ, ಕ್ರೀಡೆಗಳಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿ ಸಾಧ್ಯ. ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಅಧಿಕವಾಗುತ್ತಿದ್ದು, ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚು ಒತ್ತು ನೀಡಬೇಕು ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.
ಕೂಡ್ಲಿಗಿ ಚರ್ಚ್ ಸ್ಕೂಲ್ ಫಾದರ್ ಡಯಾಸ್ ಮಾತನಾಡಿ, ಕ್ರೀಡೆಗಳಿಂದ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತಿದ್ದು ಮಕ್ಕಳು ಕ್ರಿಯಾಶೀಲವಾಗಿ ಕಲಿಯಲು ಕ್ರೀಡೆಗಳು ಪೂರಕವಾಗಿದ್ದು ಸ್ಪರ್ಧಾತ್ಮಕ ಮನೋಭಾವ ಬೆಳೆಯಲೂ ಸಾಧ್ಯವಾಗುತ್ತದೆ ಎಂದರು.
ವಾಲಿಬಾಲ್ ವಿಭಾಗದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಚರ್ಚ್ ಸ್ಕೂಲ್ ಪಡೆದರೆ, ಚೆಸ್ನಲ್ಲಿ ಹಿರೇಮಠ ಕಾಲೇಜು ಪ್ರಥಮ ಸ್ಥಾನ ಪಡೆಯಿತು. ದ್ವಿತೀಯ ಸ್ಥಾನವನ್ನು ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯ ವಿದ್ಯಾರ್ಥಿಗಳು ಪಡೆದರು.
ಕೂಡ್ಲಿಗಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಶಿಕ್ಷಕಿ ಎಂ. ಶೋಭಾ, ಸರಸ್ವತಿ. ಸುಧಾ ಎ.ಸಿ., ಸವಿತಾ, ಯಶೋದಾ, ಪ್ರಗತಿ, ಲಕ್ಷ್ಮಣ, ಎ. ಶ್ಯಾಮಸುಂದರಗೌಡ, ಎಂ. ಮೋಕ್ಷದಾತ ಮುಂತಾದವರು ಇದ್ದರು. ದೈಹಿಕ ಶಿಕ್ಷಣ ಶಿಕ್ಷಕ ನಾಗರಾಜ ಬಡ್ಡಿ ಸ್ವಾಗತಿಸಿದರು. ಸತೀಶ್ಕುಮ್ಮಾರ ನಿರೂಪಿಸಿದರು. ಜಿ. ಶಿವರಾಜು ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

