ಬಳ್ಳಾರಿ

ಮಹಿಳೆ ಆತ್ಮಹತ್ಯೆ

Published On :

ಬಳ್ಳಾರಿ: ಜೀವನದಲ್ಲಿ ಜಿಗುಪ್ಸೆಗೊಂಡು ಗೃಹಿಣಿಯೋರ್ವಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎರ್ರಿತಾತಾ ಕಾಲೋನಿಯಲ್ಲಿ ನಡೆದಿದೆ. ಮೃತಳು ಕಾಲೋನಿಯ ಶ್ಯಾಮಲಾ (55). ಈಕೆ ತನಗೆ ಮಕ್ಕಳಾಗಿಲ್ಲ ಎಂದು ಜೀವನದಲ್ಲಿ ಜಿಗುಪ್ಸೆಗೊಂಡು ಭಾನುವಾರ ಸಂಜೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಸೋಮವಾರ ಸಾವನ್ನಪ್ಪಿದ್ದಾಳೆ. ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ ಡಿಕ್ಕಿ: ಬೈಕ್ ಸವಾರ ಸಾವು
ಬಳ್ಳಾರಿ: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಸಂಡೂರು ತಾಲೂಕಿನ ಬೂದುಗಣವಿ ಬಳಿ ನಡೆದಿದೆ. ಮೃತನನ್ನು ತಾಲೂಕಿನ ವಿಠಲಾಪುರದ ಎಚ್. ರಾಮಲಿಂಗಪ್ಪ (22). ಈತನು ವಿಠಲಾಪುರಕ್ಕೆ ಬೈಕ್‌ನಲ್ಲಿ ಹೋಗುತ್ತಿರುವಾಗ ಎದುರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಕೂಡಲೇ ಈತನನ್ನು ಸಂಜೀವಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಹೆಚ್ಚಿನ ಚಿಕಿತ್ಸೆಗೆ ವಿಮ್ಸ್‌ಗೆ ಸಾಗಿಸುತ್ತಿರುವಾಗ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾನೆ. ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.