ಕ್ಷೀರಭಾಗ್ಯ ಯೋಜನೆಗೆ ಚಾಲನೆ
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ಪಟ್ಟಣದ 24ನೇ ವಾರ್ಡ್ನ 22ನೇ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಿರುಗುಪ್ಪ ಶಾಸಕ ಬಿ.ಎಂ. ನಾಗರಾಜ ಅವರು ಹಾಲು ವಿತರಿಸುವ ಮೂಲಕ ಕ್ಷೀರ ಭಾಗ್ಯ ಯೋಜನೆಗೆ ಚಾಲನೆ ನೀಡಿದರು.
ಅನಂತರ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಆಯಾ ಪುರಸಭೆ ಸದಸ್ಯರ ಸಮ್ಮುಖದಲ್ಲಿ ಹಾಲು ವಿತರಿಸಲಾಯಿತು.
ಸಿರುಗುಪ್ಪ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೈಯದ್ಚಂದ್ ಪಾಷಾ ಈ ಸಂದರ್ಭ ಮಾತನಾಡಿ, ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ದೃಷ್ಟಿಯಿಂದ 6 ತಿಂಗಳಿಂದ 6 ವರ್ಷದೊಳಗಿನ ಎಲ್ಲ ಅಂಗನವಾಡಿ ಕೇಂದ್ರ ಮಕ್ಕಳಿಗೆ ಹಾಲು ವಿತರಿಸಲಾಗುತ್ತಿದೆ. ಪ್ರತಿ ಮಗುವಿಗೆ 15ಗ್ರಾಂನಂತೆ ವಾರದಲ್ಲಿ 3 ದಿನ ವಿತರಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ವೃತ್ತ ಮೇಲ್ವಿಚಾರಕಿ ಗಂಗವ್ವ ಬಿ. ಉಳವಣ್ಣನವರ, ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.
ಕಾಂಗ್ರೆಸ್ ಸದಸ್ಯತ್ವಕ್ಕೆ ಆಹ್ವಾನ
ಬಳ್ಳಾರಿ: ಯುವ ಕಾಂಗ್ರೆಸ್ ಸಮಿತಿಯಲ್ಲಿ ಸದಸ್ಯತ್ವ ಅಭಿಯಾನ ಪ್ರಾರಂಭವಾಗಿದ್ದು, ಸದಸ್ಯರಾಗಲು ಆಸಕ್ತಿಯುಳ್ಳ 18ರಿಂದ 35 ವರ್ಷದೊಳಗಿನ ಯುವಕರು ಸದಸ್ಯತ್ವ ಪಡೆಯಲು ಸೂಚಿಸಲಾಗಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಯುವ ಕಾಂಗ್ರೆಸ್ ಸಮಿತಿ ಬಳ್ಳಾರಿ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಜೆ.ವಿ. ಮಂಜುನಾಥ ಮತ್ತು ಬಿ.ಎಂ. ಪಾಟೀಲ್ ಅವರು, ಸದಸ್ಯರಾಗಲು ಸೆಪ್ಟೆಂಬರ್ 5 ಕೊನೆಯ ದಿನವಾಗಿದೆ. ಸದಸ್ಯರಾಗುವವರು ಹೆಚ್ಚಿನ ಮಾಹಿತಿಗಾಗಿ ಸ್ನೇಹ ಸಂಪುಟ, ಡಬಲ್ ರಸ್ತೆ, ಸೀತಾರಾಮ ಕಾಂಪ್ಲೆಕ್ಸ್ ನೆಲಮಳಿಗೆ, ಬಳ್ಳಾರಿ. ಕೆ.ಎಂ. ಧನಂಜಯ ಮೊ.ಸಂ-7795199939, ಬಾಪೂಜಿ ನಗರ ರಾಜು-9886273157, ವೆಬ್ಸೈಟ್ ಢಿಢಿಢಿ.್ಝಣ್ಛ.್ಝಟಿ, ಡ್ಡಠಠ್ಟ್ಠಡ್ಝಿಣ್ಛ.್ಝಟಿಗೆ ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

