ಬಳ್ಳಾರಿ

ಜಿಪಂ ಉಪ ಕಾರ್ಯದರ್ಶಿ ಮಹೇಶ್ವರಯ್ಯ ನಿಧನ

Published On :

ಬಳ್ಳಾರಿ: ಬಳ್ಳಾರಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ. ಮಹೇಶ್ವರಯ್ಯ ಅವರು ಮೆದುಳು ಸಂಬಂಧಿ ಕಾಯಿಲೆಯಿಂದ ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಶ್ರೀ ಬಾಲಗಂಗಾಧರನಾಥ ಸ್ವಾಮಿ ಗ್ಲೋಬಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರಿಗೆ 57 ವರ್ಷ ವಯಸ್ಸಾಗಿತ್ತು. ಇದಕ್ಕೂ ಮೊದಲು ದಾವಣಗೆರೆ ಜಿಪಂಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಇದ್ದಾರೆ.
ಮೆದುಳು ಸಂಬಂಧಿ ರೋಗದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಜು. 23ರಂದು ಆಸ್ಪತ್ರೆಗೆ ದಾಖಲಾಗಿದ್ದು, ಕೋಮಾದಲ್ಲಿದ್ದರು. 2004ರಿಂದ ಬಳ್ಳಾರಿ ಜಿಪಂನಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಹಿಂದೆ ಎರಡು ಬಾರಿಯೂ ಇಂತಹ ಮೆದುಳು ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಪಡೆದಿದ್ದರು. ಅಂತ್ಯಕ್ರಿಯೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ನಿಲುವಂಜಿ ಗ್ರಾಮದಲ್ಲಿ ಆ. 7ರಂದು ಬೆಳಗ್ಗೆ 11ಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಜಿಪಂ ಸಿಇಒ ಮಂಜುನಾಥ್ ನಾಯಕ್ ಸಂತಾಪ ಸೂಚಿಸಿ, ಅವರ ಸೇವೆಯನ್ನು ಸ್ಮರಿಸಿದ್ದಾರೆ. ಬಳ್ಳಾರಿಯ ಕಲ್ಯಾಣ ಸ್ವಾಮೀಜಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಬಿ. ಸಿದ್ದಲಿಂಗಪ್ಪ, ಯುವಜನ ಸೇವಾ ಕ್ರೀಡಾ ಇಲಾಖೆಯ ಮಲಕಪ್ಪ, ಶಿಕ್ಷಣ ಇಲಾಖೆಯ ಪಿ.ಎಂ. ಶಿವಕುಮಾರ್, ಟಿ.ಎಂ. ಸಿದ್ದಲಿಂಗಮೂರ್ತಿ, ಎಂ.ಸಿ. ಶಂಕರಮೂರ್ತಿ, ಬಿಸಿಎಂ ಇಲಾಖೆಯ ನಿವೃತ್ತ ಅಧಿಕಾರಿ ಕೆ.ಎ. ಶಂಕ್ರಯ್ಯಸ್ವಾಮಿ ಇತರರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.