ಉಳಿತಾಯದಿಂದ ಸ್ವಾವಲಂಬಿ ಜೀವನ: ಶಶಿಧರ
ಕೂಡ್ಲಿಗಿ: ಮಹಿಳೆಯರು ಸ್ತ್ರೀ ಶಕ್ತಿ ಸಂಘಗಳಲ್ಲಿ ತೊಡಗಿಸಿಕೊಂಡು ಹಣ ಉಳಿತಾಯ ಮಾಡುತ್ತಿರುವುದು ಸ್ವಾವಲಂಬಿ ಜೀವನಕ್ಕೆ ಉಪಯುಕ್ತವಾಗಲಿದೆ ಎಂದು ಜಿಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಂ. ಶಶಿಧರ ಹೇಳಿದರು.
ಕೂಡ್ಲಿಗಿ ಸಮೀಪದ ಗುಂಡಿನಹೊಳೆ ಸುರಭಿ ಸಂಸ್ಥೆ ತರಬೇತಿ ಕೇಂದ್ರದಲ್ಲಿ ಬುಧವಾರ ಸುರಭಿ ಸಮಗ್ರ ಮಾನವ ಕಲ್ಯಾಣ ಅಭಿವೃದ್ಧಿ ಸಂಸ್ಥೆ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ 2 ದಿನಗಳ ಕೌಶಲ್ಯಾಧಾರಿತ ಉದ್ಯಮಶೀಲತಾ ಜಾಗೃತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಟೈಲರಿಂಗ್, ಹೈನುಗಾರಿಕೆ, ಊದುಬತ್ತಿ ತಯಾರಿಕೆಯಲ್ಲಿ ಪರಿಣಿತಿ ಪಡೆದು ಸ್ವ ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕ ಸಂಕಷ್ಟ ಹೋಗಲಾಡಿಸಬಹುದು. ಅದಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಅವುಗಳ ಸದುಪಯೋಗದಿಂದ ಜೀವನ ಮಟ್ಟ ಸುಧಾರಿಸಬಹುದು ಎಂದು ಅಭಿಪ್ರಾಯಿಸಿದರು.
ಗ್ರಾಮಗಳಲ್ಲಿ ಯೋಜನೆ ಜಾರಿ: ಜಿಲ್ಲಾ ಜಲಾನಯನ ಅಭಿವೃದ್ಧಿ ಅಧಿಕಾರಿ ಡಾ. ರಾಜಶೇಖರ್ ಮಾತನಾಡಿ, ಸಮಗ್ರ ಜಲ ನಿರ್ವಹಣೆ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೆರವಿನೊಂದಿಗೆ ತಾಲೂಕಿನ ಕಂದಗಲ್ಲು, ಮೊರಬ, ಬಡೇಲಡುಕು ಮತ್ತು ಚೌಡಾಪುರ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಯೋಜನೆ ಜಾರಿಗೊಂಡಿದೆ. ಮಣ್ಣು, ನೀರು ಸಂರಕ್ಷಣೆ, ಹೊಲಗಳಲ್ಲಿ ಬದು ನಿರ್ಮಾಣ ಮಾಡಲಾಗುವುದು. ಆಯ್ದ ಗ್ರಾಮಗಳಲ್ಲಿ 36 ಸ್ವಸಹಾಯ ಸಂಘಗಳನ್ನು ರಚನೆ ಮಾಡಲಾಗಿದೆ. ಕೃಷಿಯೇತರ ಚಟುವಟಿಕೆಯಲ್ಲಿ ತೊಡಗಿರುವ ಮಹಿಳೆಯರಿಗೆ ತರಬೇತಿ ನೀಡಲಾಗುವುದು ಎಂದರು.
ಪ್ರತಿ ಸಂಘಕ್ಕೆ ಸುಮಾರು ರು. 50 ಸಾವಿರ ಸುತ್ತು ನಿಧಿ ಕೊಡಲು ಯೋಜನೆ ರೂಪಿಸಲಾಗಿದೆ. ಇದರಿಂದ ಆ ಗ್ರಾಮಗಳ ಸಮಗ್ರ ಅಭಿವೃದ್ಧಿ ಜತೆಗೆ ಜಲ ಸಂರಕ್ಷಣೆ ಕಾರ್ಯ ನಡೆಯಬೇಕಿದೆ. ಅದಕ್ಕಾಗಿ ಸಾರ್ವಜನಿಕರ ಸಹಕಾರ ಮುಖ್ಯ ಎಂದರು.
ಜಿಪಂ ಸದಸ್ಯೆ ಮೀನಾಕ್ಷಮ್ಮ, ಸುರಭಿ ಸಂಸ್ಥೆ ಅಧ್ಯಕ್ಷ ಜಿ. ಉಮೇಶ್, ಜಲಾನಯನ ತಾಲೂಕು ಅಧಿಕಾರಿ ವಾಮದೇವ್ ಕೊಳ್ಳಿ, ಸಂಡೂರು ದಯಾನಂದ್, ಜಿ. ಎರ್ರಿಸ್ವಾಮಿ, ಮುಖಂಡ ಸಿ.ಜೆ. ಹಳ್ಳಿ ಕೃಷ್ಣನಾಯ್ಕ, ತೋಟಗಾರಿಕೆ ಜಿಲ್ಲಾ ನಿರ್ದೇಶಕ ನಾಗರಾಜ್, ಪಪಂ ಸದಸ್ಯ ಜಿ. ಶ್ರೀಧರ ಇದ್ದರು. ಸ್ವ ಸಹಾಯ ಮಹಿಳಾ ಗುಂಪುಗಳ ಸದಸ್ಯರಿಗೆ ತರಬೇತಿ ನೀಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

