ಬಳ್ಳಾರಿ

ಧಾರ್ಮಿಕ ಕಾರ್ಯಕ್ರಮದಿಂದ ಸಮಾಜದಲ್ಲಿ ಶಾಂತಿ

Published On :

ಕನ್ನಡಪ್ರಭ ವಾರ್ತೆ, ಕಂಪ್ಲಿ, ಆ. 8
ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚಾದಂತೆ ಜನರಲ್ಲಿ ತಾಳ್ಮೆ ಮನೋಭಾವನೆ, ಶುದ್ಧ ಮನಸ್ಥಿತಿ ಹೆಚ್ಚಾಗಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಲು ಸಾಧ್ಯವಾಗುತ್ತದೆ ಎಂದು ಬುಕ್ಕಸಾಗರ ಕರಿಸಿದ್ದೇಶ್ವರ ವಿಶ್ವಾರಾಧ್ಯ ಶಿವಾಚಾರ್ಯರು ತಿಳಿಸಿದ್ದಾರೆ.
ಇಲ್ಲಿನ ಸಾಂಗತ್ರಯ ಸಂಸ್ಕೃತ, ವೈದಿಕ, ಜ್ಯೋತಿಷ್ಯ ಪಾಠ ಶಾಲೆಯಲ್ಲಿ ಶ್ರಾವಣ ಮಾಸದ ಮತ್ತು 51ನೇ ಸಂವತ್ಸರಗಳ ಪುರಾಣದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಅಂಗವಾಗಿ ಬುಧವಾರದಿಂದ ಶುಕ್ರವಾರದ ವರೆಗೆ ಪ್ರತಿ ಸಂಜೆ ಹಮ್ಮಿಕೊಂಡಿರುವ ಅಲ್ಲೀಪುರ ಶ್ರೀ ಮಹಾದೇವ ತಾತನವರ ಲೀಲಾಮೃತ ಪುರಾಣ ಕಾರ್ಯಕ್ರಮದ ಷಟಸ್ಥಲ ಧ್ವಜಾರೋಹಣ ನೆರವೇರಿಸಿ ಅವರು ಆಶೀರ್ವಚ ನೀಡಿ, ಧರ್ಮ ಜಾಗೃತಿಗೊಳಿಸುವಂತಹ ಪುರಾಣ, ಕೀರ್ತನ ಸೇರಿದಂತೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳನ್ನು ಹೆಚ್ಚು ನಡೆಸಲು ಜನರು ಮುಂದಾಗಬೇಕೆಂದು ತಿಳಿಸಿದರು.
ಸಾಂಗತ್ರಯ ಸಂಸ್ಕೃತ, ವೈದಿಕ, ಜ್ಯೋತಿಷ್ಯ ಪಾಠ ಶಾಲೆ ಪ್ರಾಚಾರ್ಯ ಎಂ.ಎಸ್. ಶಶಿಧರಶಾಸ್ತ್ರಿ ಮಾತನಾಡಿ, ಧಾರ್ಮಿಕ ಕಾರ್ಯಕ್ರಮಗಳು ಮನುಷ್ಯನ ಮನಸ್ಸನ್ನು ಉತ್ತಮ ದಾರಿಯಲ್ಲಿ ನಡೆಯುವಂತೆ ಮಾಡುತ್ತವೆ. ಪುರಾಣ, ಪ್ರವಚನಗಳು ಸಾಮಾಜಿಕ ಜಾಗೃತಿ ಮೂಡಿಸಲು ನೆರವಾಗುತ್ತವೆ, ಶ್ರಾವಣ ಮಾಸದಲ್ಲಿ ದೇವರ ದರ್ಶನದೊಂದಿಗೆ, ಕೀರ್ತನ ಶ್ರವಣ ಮಾಡಬೇಕು, ವೀರಶೈವವರು ಅಷ್ಟಾವರಣ, ಪಂಚಾಚಾರ ಹಾಗೂ ಷಟಸ್ಥಲಗಳನ್ನು ಅಳವಡಿಸಕೊಳ್ಳಬೇಕೆಂದು ತಿಳಿಸಿದರು.
ಸಾಂಗತ್ರಯ ಸಂಸ್ಕೃತ, ವೈದಿಕ, ಜ್ಯೋತಿಷ್ಯ ಪಾಠ ಶಾಲೆ ಅಧ್ಯಕ್ಷ ಜವಳಿ ಚನ್ನಬಸಪ್ಪ, ವರಲಕ್ಷ್ಮಿ ಕ್ರೆಡಿಟ್ ಸಹಕಾರ ಬ್ಯಾಂಕ್ ಅಧ್ಯಕ್ಷ ಎಚ್. ಗವಿಸಿದ್ದಪ್ಪ, ಹೊಸಮಠ ಅಧ್ಯಕ್ಷ ಕೆ.ಎಂ. ಹೇಮಯ್ಯಸ್ವಾಮಿ, ಪೇಟೆ ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಡಿ. ವೀರಪ್ಪ, ವೀರಶೈವ ಸಂಘದ ಮಾಜಿ ಅಧ್ಯಕ್ಷರಾದ ಎಸ್.ಎಸ್.ಎಂ. ಚನ್ನಯ್ಯಸ್ವಾಮಿ, ವಾಲಿ ಕೊಟ್ರಪ್ಪ, ವೀರಶೈವ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.