ಬಳ್ಳಾರಿ

ಪಠ್ಯೇತರ ಚಟುವಟಿಕೆಯಿಂದ ಪ್ರತಿಭೆ ಬೆಳವಣಿಗೆ

Published On :

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಆ. 8
ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಸರ್ವತೋಮುಖವಾಗಿ ಬೆಳವಣಿಗೆಯಾಗಲು ಸಾಧ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಅಬ್ದುಲ್ ರಶೀದ್ ಹೇಳಿದರು.
ತಾಲೂಕಿನ ಕಮಲಾಪುರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾಕಷ್ಟು ವಿದ್ಯಾರ್ಥಿಗಳು ಪದವೀಧರರಾಗುತ್ತಾರೆ, ಆದರೆ ಸಂಸ್ಕೃತಿ ಹಾಗೂ ಸಂಸ್ಕಾರಕ್ಕೆ ವಿಮುಖರಾಗುವುದು ವಿಷಾದನೀಯ ಸಂಗತಿಯಾಗಿದೆ. ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆದುಕೊಳ್ಳುವ ಜತೆಗೆ ಉತ್ತಮ ಸಂಸ್ಕಾರ ಪಡೆದುಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳು ಇತ್ತೀಚಿಗೆ ಆತ್ಮಸ್ಥೈರ್ಯ ಕಳೆದುಕೊಳ್ಳುತ್ತಿರುವುದು ಸರಿಯಲ್ಲ. ಸತತ ಪ್ರಯತ್ನ, ಶ್ರದ್ಧೆ, ನಿಷ್ಠೆಯನ್ನು ಮೈಗೂಡಿಸಿಕೊಂಡು ವಿದ್ಯಾಭ್ಯಾಸದಲ್ಲಿ ತೊಡಗಿಕೊಂಡಾಗ ಗುರಿ ತಲುಪಲು ಸಾಧ್ಯವಾಗಲಿದೆ ಎಂದರು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಪಿ. ಮಹಾದೇವಯ್ಯ ಮುಖ್ಯ ಅತಿಥಿಗಳಾಗಿ ಮಾತನಾಡಿ, ವಿದ್ಯಾರ್ಥಿಗಳು ಪ್ರತಿಭಾವಂತರಾಗಿ ಬೆಳೆಯುವ ಮೂಲಕ ಸಮಾಜಕ್ಕೆ ಉತ್ತಮ ಸೇವೆಯನ್ನು ನೀಡಲು ಮುಂದಾಗಬೇಕು ಎಂದು ಹೇಳಿದರು.
ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಎಲ್.ಬಿ. ಕೃಷ್ಣಾನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ನಿಸಾರ್ ಅಹ್ಮದ್ ಸ್ವಾಗತಿಸಿದರು. ಶಿವಕುಮಾರ ಮಠದ್ ಪ್ರಾಸ್ತಾವಿಕ ಮಾತನಾಡಿದರು. ತನುಜಾ ವರದಿ ವಾಚಿಸಿದರು. ಡಾ. ದಯಾನಂದ ಕಿನ್ನಾಳ್ ನಿರೂಪಿಸಿದರು. ಶೇಖರ್ ವಂದಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಸ್ಥೆಗೆ ಅತಿಹೆಚ್ಚು ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಎಚ್. ಮುಸ್ತಫ, ಎಂ. ಶಿಲ್ಪಾ, ಬುಡ್ಡೆ ಮಂಜುನಾಥ, ಅಕಿತ ಎಲ್., ಸ್ಮಿತಾ ಎಚ್., ಅನುಷಾ ಎ. ಹಾಗೂ ರೇಖಾ ಇವರಿಗೆ ಸ್ಥಳೀಯ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸೈಯದ್ ಸಮಿವುಲ್ಲಾ ನಗದು ಪುರಸ್ಕಾರ ನೀಡಿದರು. ವಿದ್ಯಾರ್ಥಿಗಳಾದ ಕವಿತಾ, ಕಟ್ಟೆ ಬಸವ, ಶ್ರೀದೇವಿ, ಸ್ವರ್ಣಲತಾ, ಸುಮಲತಾ, ರಾಘವಿ, ನೇತ್ರಾವತಿ, ಹಾಗೂ ಶ್ರೀನಿವಾಸ ಸಭೆಯಲ್ಲಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.