ಜಿಲ್ಲೆಯಾದ್ಯಂತ ರಂಜಾನ್ ಸಂಭ್ರಮ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಆ. 9
ಜಿಲ್ಲೆಯಲ್ಲಿ ಶುಕ್ರವಾರ ರಂಜಾನ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸಾವಿರಾರು ಮುಸ್ಲಿಂ ಬಾಂಧವರು, ನಗರದ ಈದ್ಗಾ ಮೈದಾನಕ್ಕೆ ಶುಕ್ರವಾರ ಬೆಳಗ್ಗೆ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.
ವೃದ್ಧರು ಸೇರಿದಂತೆ ಚಿಕ್ಕಮಕ್ಕಳು ಈದ್ಗಾ ಮೈದಾನಕ್ಕೆ ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು, ಪ್ರಾರ್ಥನೆ ಮುಗಿದ ಅನಂತರ ಮುಸ್ಲಿಂ ಸಹೋದರರು ಪರಸ್ಪರ ಒಬ್ಬರಿಗೊಬ್ಬರು ರಂಜಾನ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ನಗರದ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಮಸೀದಿ ಸೇರಿದಂತೆ ನಗರದ ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು.
ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮಾಜಿ ಸಚಿವ, ಬಿಎಸ್ಆರ್ ಸಂಸ್ಥಾಪಕ ಬಿ. ಶ್ರೀರಾಮುಲು, ಕಾಂಗ್ರೆಸ್ ಮುಖಂಡ ಹೊತ್ತೂರ್ ಮೊಹ್ಮದ್ ಇಕ್ಬಾಲ್, ಪಾಲಿಕೆ ಸದಸ್ಯರಾದ ಬೆಣಕಲ್ ಬಸವರಾಜ್, ಗೋವಿಂದರಾಜಲು, ಎಂ. ವಿವೇಕಾನಂದ, ಮುಖಂಡರಾದ ಮಹಿಪಾಲ್, ಪಾಲಿಕೆ ಮಾಜಿ ಸದಸ್ಯ ಕೆ.ಎಸ್. ದಿವಾಕರ್, ಗ್ರಾಮೀಣ ಠಾಣೆ ಸಿಪಿಐ ಸುಲೇಮಾನ್ ತಹಸೀಲ್ದಾರ್, ಇತರೆ ಸಂಘಟನೆಗಳ ಮುಖಂಡರು ಮುಸ್ಲಿಂ ಸಹೋದರರೊಂದಿಗೆ ಬೆರೆಯುವ ಮೂಲಕ ರಂಜಾನ್ ಹಬ್ಬದ ಶುಭಾಶಯ ಕೋರಿದರು.
ಪ್ರಾರ್ಥನೆ ಸಲ್ಲಿಸಿದ ಅನಂತರ ಸುದ್ದಿಗಾರರೊಂದಿಗೆ ಬಿಎಸ್ಆರ್ ಪಕ್ಷದ ಸಂಸ್ಥಾಪಕ ಬಿ. ಶ್ರೀರಾಮುಲು ಮಾತನಾಡಿ, ಅಂದು ಸಚಿವ ಜನಾರ್ದನ ರೆಡ್ಡಿ ಅವರು ಹಾಕಿರುವ ಯೋಜನೆಗಳನ್ನು ನಿಭಾಯಿಸಬೇಕೆ ಹೊರತು, ಇಂದಿನ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಬಜೆಟ್ನಲ್ಲಿ ಯಾವುದೇ ಯೋಜನೆಯನ್ನು ಜಿಲ್ಲೆ ತರಲು ಸಾಧ್ಯವಾಗಿಲ್ಲ, ಜಿಲ್ಲೆಯ ಅಭಿವೃದ್ಧಿಗೆ ಅಂದು ಜನಾರ್ದನ ರೆಡ್ಡಿ ಅವರು ಹಲವು ವಿಶೇಷ, ಸಾಕಷ್ಟು ಅನುದಾನವನ್ನು ತಂದಿದ್ದು, ಜಿಲ್ಲೆಯಲ್ಲಿ ಇಷ್ಟೊಂದು ಅಭಿವೃದ್ಧಿ ಕಾಮಗಾರಿಗಳು ನಡೆಯಲು ಕಾರಣರಾಗಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯ ಉಸ್ತುವಾರಿ ಸಚಿವರು ಯಾವೊಂದು ಅಭಿವೃದ್ಧಿ ಕೆಲಸಗಳಿಗೆ ಅನುದಾನ ತಂದಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಅನಂತರ ನೀಡಿರುವ ಎಲ್ಲ ಭರವಸೆಗಳು, ಜನರ ನಿರೀಕ್ಷೆಗಳು ಹುಸಿಯಾಗಿವೆ.
ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇಲ್ಲ ಎಂಬುದು ತಿಳಿಯುತ್ತಿದೆ. ಮುಖ್ಯಮಂತ್ರಿಗಳು ನೀಡಿರುವ ಭರವಸೆಯಂತೆ ಒಂದು ಕಾಮಗಾರಿಯು ನಡೆದಿಲ್ಲ ಎಂದು ತಿಳಿಸಿದರು.
ಮುಂಬರುವ ಲೋಕಸಭೆಯ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ, ಚುನಾವಣೆಯಲ್ಲಿ ಬಿಎಸ್ಆರ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಆರ್ನ ನಾಲ್ಕು ಶಾಸಕರು ಗೆದ್ದಿದ್ದೇವೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ. ಹಲವು ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇದ್ದು, ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದರು.
ಮುಂಬರುವ ಲೋಕಸಭೆಯ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ.ಬಿಎಸ್ಆರ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಆರ್ನ ನಾಲ್ಕು ಶಾಸಕರು ಗೆದ್ದಿದ್ದೇವೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ. ಹಲವು ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇದೆ.
- ಬಿ. ಶ್ರೀರಾಮುಲು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

