ಕ್ರಿಕೆಟ್ ಟೂರ್ನಿಗೆ ಚಾಲನೆ
ಹೊಸಪೇಟೆ: ಪ್ರತಿಯೊಬ್ಬರೂ ಕ್ರೀಡೆ, ವ್ಯಾಯಾಮ ಹಾಗೂ ಯೋಗದಲ್ಲಿ ತೊಡಗಿಕೊಂಡಾಗ ಮಾತ್ರ ಕ್ರಿಯಾಶೀಲ ವ್ಯಕ್ತಿಗಳಾಗಿ ಮತ್ತು ಆರೋಗ್ಯವಂತರಾಗಿ ಬೆಳೆಯಲು ಸಾಧ್ಯ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಸ್. ಭೀಮಾನಾಯ್ಕ ಹೇಳಿದರು. ತಾಲೂಕಿನ ಗೊಲ್ಲರಹಳ್ಳಿ ಗ್ರಾಮದ ಸರ್ವೋ ಸೂರ್ಯೋದಯ ಕ್ರಿಕೆಟರ್ಸ್ ತಂಡದವರು ನಾಗರಪಂಚಮಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಸ್ಟಂಪರ್ ಬಾಲ್ ಕ್ರಿಕೆಟ್ ಟೂರ್ನ್‌ಮೆಂಟ್‌ಗೆ ಚಾಲನೆ ನೀಡಿ ಮಾತನಾಡಿದರು. ಕ್ರೀಡೆಗಳು ಮಾನವನ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗಿದ್ದು, ಮಾನಸಿಕವಾಗಿ ಮತ್ತು ದೈಹಿಕವಾಗಿ ಸಮರ್ಥರಾಗಲು ಕ್ರೀಡೆಗಳು ಸಹಕಾರಿಯಾಗಿವೆ ಎಂದರು. ಎಪಿಎಂಸಿ ಮಾಜಿ ಅಧ್ಯಕ್ಷ ಕುರಿ ಶಿವಮೂರ್ತಿ ಮಾತನಾಡಿ, ಯುವಕರು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಜೀವನ ಸಾಗಿಸುವ ಮೂಲಕ ಉತ್ತಮ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಬೇಕು ಎಂದರು. ಜಿ. ನಾಗಲಾಪುರ ತಾಪಂ ಸದಸ್ಯ ಎಚ್. ಲಕ್ಷ್ಮಣ, ರೋಗಣಿ ಹುಲುಗಪ್ಪ, ಸೋಮಪ್ಪ, ಕೆ. ದುರುಗಪ್ಪ, ದುರುಗಮ್ಮ, ಬ್ಯಾಲಕುಂದಿ ಶ್ರೀನಿವಾಸ್, ವಿ. ನಾಗರಾಜ, ದಳವಾಯಿ ಸೋಮಣ್ಣ, ಎರ್ರಿಸ್ವಾಮಿ. ಎಂ, ಹೇಮ್ಲಾನಾಯ್ಕ ಕಟ್ಟಿಮನಿ, ಗೊಲ್ಲರಹಳ್ಳಿ ವೆಂಕಟೇಶ್, ಜಿ. ಮಲ್ಲಪ್ಪ, ಬ್ಯಾಲಕುಂದಿ ರಮೇಶ್, ಡಿ. ಭೀಮಪ್ಪ, ಅಡವಿ ಬಸಪ್ಪ, ತುಂಬಪ್ಪ, ರೆಡ್ಡಿಮಾಬು ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

