ಪರಿಸರ ಸಂರಕ್ಷಣೆಗೆ ಕರೆ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಆ. 11
ಪ್ರತಿಯೊಬ್ಬರು ಪರಿಸರವನ್ನು ಸಂರಕ್ಷಿಸಿದಾಗ ಮಾತ್ರ ಉತ್ತಮ ಪರಿಸರ ನಿರ್ಮಾಣವಾಗಲು ಸಾಧ್ಯ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಕುರಿ ಶಿವಮೂರ್ತಿ ಹೇಳಿದರು.
ತಾಲೂಕಿನ ಹನುಮನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಬಿ.ಎಂ.ಎಂ. ಕಾರ್ಖಾನೆಯವರು ಹಮ್ಮಿಕೊಂಡಿದ್ದ ಹಸಿರುಕರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕೆ ನೀಡುವಷ್ಟು ಮಹತ್ವವನ್ನು ನಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆನೂ ಹೆಚ್ಚು ಕಾಳಜಿವಹಿಸಬೇಕು. ಕಾರ್ಖಾನೆಯವರು ತಮ್ಮ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸ್ಯಗಳನ್ನು ಬೆಳೆಸುವ ಮಹತ್ವದ ಯೋಜನೆಯನ್ನು ರೂಪಿಸಿಕೊಂಡಿರುವುದರಿಂದ ಬಿಎಂಎಂ ಕಾರ್ಖಾನೆಯ ಪಕ್ಕದಲ್ಲಿರುವ ಹನುಮನಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ನೂರಾರು ಸಸಿಗಳನ್ನು ನೆಟ್ಟು ಬೆಳೆಸುವ ಮಹತ್ವದ ಕಾರ್ಯಕ್ಕೆ ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ ಸಂಗತಿಯಾಗಿದೆ ಎಂದರು.
ಶಾಲಾ ಆವರಣದಲ್ಲಿ ಗಿಡಗಳನ್ನು ಬೆಳೆಸುವುದರಿಂದ ಶುದ್ಧವಾದ ಗಾಳಿ ಮತ್ತು ಶಾಲಾ ಆವರಣ ತಂಪಾಗಿರುವ ಮೂಲಕ ಹಚ್ಚ ಹಸುರಿನಿಂದ ಕಂಗೊಳಿಸುತ್ತದೆ. ಮರ-ಗಿಡಗಳಿಂದ ಹೆಚ್ಚಾಗಿ ಮಳೆಯನ್ನು ನಿರೀಕ್ಷಿಸಬಹುದು. ಗಿಡ-ಮರಗಳನ್ನು ಬೆಳೆಸುವುದರಿಂದ ಉತ್ತಮ ವಾತಾವರಣ ನಿರ್ಮಾಣವಾಗುವ ಮೂಲಕ ವಿದ್ಯಾರ್ಥಿಗಳಿಗೆ ಗಿಡ-ಮರಗಳನ್ನು ಪರಿಚಯಿಸಿದಂತಾಗುತ್ತದೆ ಎಂದು ಅವರು ಹೇಳಿದರು.
ಬಿ.ಎಂ.ಎಂ. ಕಾರ್ಖಾನೆಯ ಪರಿಸರ ಅಧಿಕಾರಿ ರವಿಕುಮಾರ್ ಮಾತನಾಡಿ, ಬಿಎಂಎಂ ಕಾರ್ಖಾನೆಯವರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿದ್ದು, ಕಂಪನಿಯ ವತಿಯಿಂದ ಈ ಭಾಗದ ಅನೇಕ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ವಿದ್ಯಾರ್ಥಿಗಳು ತಮ್ಮ ಶಾಲಾ ಆವರಣದಲ್ಲಿ ನೆಟ್ಟ ಸಸಿಗಳನ್ನು ತಾತ್ಸಾರ ಮಾಡದೇ ಬೆಳೆಸುವ ಮೂಲಕ ಗ್ರಾಮವನವನ್ನಾಗಿ ನಿರ್ಮಿಸಬೇಕು ಎಂದು ಅವರು ತಿಳಿಸಿದರು.
ಸ್ಥಳೀಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೆ. ವೆಂಕಟೇಶ್, ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕದ ಅಧ್ಯಕ್ಷ ಮಜ್ಗಿ ನಾಗರಾಜ, ಬಿಎಂಎಂ ಕಂಪನಿಯ ಉಪ ಪರಿಸರ ಅಧಿಕಾರಿ ಮಾಲತೇಶ್, ಎಸ್‌ಡಿಎಂಸಿ ಸದಸ್ಯರಾದ ಎನ್. ಗಣೇಶ್, ಸ್ಥಳೀಯರಾದ ಜಿ. ವಿಶ್ವಮೂರ್ತಿ, ಜಿ.ಎನ್. ರುದ್ರೇಶ್, ಎಂ. ಮಹೇಶ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

