ಬಳ್ಳಾರಿ: ಸಾಂಸ್ಕೃತಿಕ ಸಂಘಟನೆ ಉದ್ಘಾಟನೆ
ಬಳ್ಳಾರಿ: ವಿದ್ಯಾರ್ಥಿಗಳು ತಮ್ಮಲ್ಲಿನ ಪ್ರತಿಭೆ ಪ್ರದರ್ಶಿಸಲು ದೊರೆತ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಂಡು, ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ನಿವೃತ್ತ ಪ್ರಾಚಾರ್ಯ ಎಸ್. ಸೋಮಶೇಖರ್ ತಿಳಿಸಿದರು. ನಗರದ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ 2013-14ನೇ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಸಂಘಟನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ಸಂಘ-ಸಂಸ್ಥೆಗಳ ಅವಶ್ಯಕತೆಯಿದೆ. ವಿದ್ಯಾರ್ಥಿಗಳು ತಮ್ಮಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ವೀ.ವಿ. ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯ ಚಟುವಟಿಕೆಯಲ್ಲಿ ಮಾತ್ರವಲ್ಲದೆ, ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬೇಕು ಎಂದರು. ಇದೇ ಸಂದರ್ಭ ಕಾಲೇಜಿನ ವಿವಿಧ ಸಂಘಟನೆಗಳ ಉಪಾಧ್ಯಕ್ಷ, ಕಾರ್ಯದರ್ಶಿ, ಸಹಕಾರ್ಯದರ್ಶಿಗಳನ್ನು ಸಭಿಕರಿಗೆ ಪರಿಚಯಿಸಲಾಯಿತು. ನಿವೃತ್ತ ಪ್ರಾಚಾರ್ಯ ಎಸ್. ಸೋಮಶೇಖರ್ರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎ.ಎಸ್.ಎಂ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಕೆ. ತೇಜಸ್ ಮೂರ್ತಿ, ಪಿಯು ಕಾಲೇಜಿನ ಪ್ರಾಚಾರ್ಯ ಎಸ್. ಆನಂದ್, ಆಡಳಿತ ಮಂಡಳಿ ಸದಸ್ಯರಾದ ಡಾ. ರೇಣುಕಾ ಮಂಜುನಾಥ, ಅಂಗಡಿ ಶಶಿಕಲಾ, ಗಡಿಗಿ ಸ್ವರ್ಣಲತಾ ಇದ್ದರು. ಪ್ರಕೃತಿ ಕಶ್ಯಪ್ ತಂಡ ನಾಡಗೀತೆ ಹಾಡಿದರು. ಪ್ರೀತಿಕಾ ಸ್ವಾಗತಿಸಿದರು. ಜೆ. ಅಸ್ಮಾ ಅತಿಥಿಗಳನ್ನು ಪರಿಚಯಿಸಿದರು. ಲಾವಣ್ಯ ನಿರೂಪಿಸಿದರು. ಅಯ್ಮಾನ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

