ಬಳ್ಳಾರಿ

ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಆ. 12
ನಗರದ ವೀರಶೈವ ಮಹಾವಿದ್ಯಾಲಯದ ಆವರಣದಲ್ಲಿ ವಿಶ್ವವಿದ್ಯಾಲಯದ ಧನಸಹಾಯ ಆಯೋಗ (ಯುಜಿಸಿ)ದ ಅಡಿಯಲ್ಲಿ ಉನ್ನತ ಶಿಕ್ಷಣಕ್ಕೆ ಅಗತ್ಯವಿರುವ ಮೂಲ ಸೌಲಭ್ಯಗಳ ನಿರ್ಮಾಣದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು  ಪ್ರಾಚಾರ್ಯರ ವಸತಿಗೃಹ, ನವೀಕರಿಸಿದ ವಿವಿಧ ಪ್ರಯೋಗಾಲಯಗಳು ಮತ್ತು ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಸೋಮವಾರ ಜರುಗಿತು.
ಅಖಿಲ ಭಾರತ ವೀರಶೈವ ಮಹಾಸಭೆಯ ರಾಜ್ಯಾಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಎನ್. ತಿಪ್ಪಣ್ಣ ಅವರು ಒಳಾಂಗಣ ಕ್ರೀಡಾಂಗಣದ ಶಂಕುಸ್ಥಾಪನೆ ನೆರವೇರಿಸಿದರು. ಅನಂತರ ಮಾತನಾಡಿ, ಆಡಳಿತ ಮಂಡಳಿ ನೀಡುವ ಎಲ್ಲ ಸೌಕರ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ತಮ್ಮ ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳುವುದರ ಜತೆಗೆ ಹೆಚ್ಚಿನ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಬೇಕು ಮತ್ತು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತೆ ಕರೆ ನೀಡಿದರು.
ಮಾಜಿ ಸಂಸದ ಕೆ.ಸಿ. ಕೊಂಡಯ್ಯ ಅವರು ಪ್ರಾಚಾರ್ಯರ ವಸತಿಗೃಹ ಮತ್ತು ನವೀಕರಿಸಿದ ವಿವಿಧ ತರಗತಿ ಕೊಠಡಿಗಳ ಪ್ರಯೋಗಾಲಯಗಳನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಅನಂತರ ಮಾತನಾಡಿದ ಅವರು, ಉನ್ನತ ಶಿಕ್ಷಣ ಮತ್ತು ಸಂಶೋಧನೆ ಬಗ್ಗೆ ಸರ್ಕಾರವು ಅಪಾರ ಕಾಳಜಿ ಹೊಂದಿದ್ದು, ಪ್ರಸಕ್ತ ಆಯವ್ಯಯದಲ್ಲಿ ವಿಶಿಷ್ಟ ಸ್ಥಾನ ನೀಡಲಾಗಿದೆ ಎಂದರು.
ಸಂಸ್ಥೆಗಳಿಗೆ ನೀಡುವ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಂಡು ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಖಾಸಗಿ ಸಂಸ್ಥೆಗಳು ಪ್ರಧಾನ ಪಾತ್ರವಹಿಸುತ್ತಿವೆ ಎಂದು ಶ್ಲಾಘಿಸಿದರು.
ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ವೀವಿ ಸಂಘದ ಉಪಾಧ್ಯಕ್ಷ ಎಂ. ಮಹೇಶ್ವರಸ್ವಾಮಿ, ಕಾರ್ಯದರ್ಶಿ ಗುರುಸಿದ್ದಸ್ವಾಮಿ, ಸಹಕಾರ್ಯದರ್ಶಿ ಜೆ.ಎಸ್. ನೇಪಾಕ್ಷಪ್ಪ, ಕೋಶಾಧಿಕಾರಿ ಸಂಗನಕಲ್ಲು ಹೀಮಂತರಾಜ, ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಜಾನೇಕುಂಟೆ ಸಣ್ಣ ಬಸವರಾಜ, ಸದಸ್ಯರಾದ ಎಂ. ಶರಣಬಸವನಗೌಡ, ಎಸ್.ಎಂ. ಪ್ರಭುಸ್ವಾಮಿ, ಆರ್. ಬಸವರಾಜ, ಕೆ. ಬಸವನಗೌಡ, ಪ್ರಾಚಾರ್ಯ ಪ್ರೊ. ಪಿ. ಬಸವರಾಜ, ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಚಾರ್ಯ ಎನ್. ರವಿಪ್ರಕಾಶ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.