ಬಳ್ಳಾರಿ

ಸಾಹಿತಿಯೊಂದಿಗೆ ಸಂವಾದ 17ರಂದು

Published On :

ಬಳ್ಳಾರಿ: ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕವು ಸಾಹಿತಿಯೊಂದಿಗೆ ಸಂವಾದ- 12 ಕಾರ್ಯಕ್ರಮವನ್ನು ಆ. 17ರಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ನಲ್ಲಿ ಏರ್ಪಡಿಸಿದೆ. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಗಂಗಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಸಂವಾದ ಸಾಹಿತಿಯಾಗಿ ಜರಗನಹಳ್ಳಿ ಶಿವಶಂಕರ ಪಾಲ್ಗೊಳ್ಳಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಸಿರಿಗೇರಿ ಎರ್ರಿಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಯಮಿ ಸಾಹುಕಾರ ಸತೀಶ್‌ಬಾಬು ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.
ಸನ್ಮಾನ ಕಾರ್ಯಕ್ರಮ ಮುಂದೂಡಿಕೆ
ಹಗರಿಬೊಮ್ಮನಹಳ್ಳಿ: ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ, ವಿಧಾನಪರಿಷತ್ ಉಪ ಚುನಾವಣೆ ಹಿನ್ನೆಲ್ಲೆಯಲ್ಲಿ ಆ. 16ರಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಚಿವ ಹಾಗೂ ಕಾಂಗ್ರೆಸ್ ಶಾಸಕರ ಸನ್ಮಾನ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಮಾರೆಣ್ಣ ತಿಳಿಸಿದ್ದಾರೆ. ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಸಚಿವರು ಭಾಗಿಯಾಗಿದ್ದರಿಂದ ನಿಗದಿತ ಸಮಾರಂಭ ಮುಂದೂಡಲಾಗಿದೆ. ಉಪ ಚುನಾವಣೆ ಬಳಿಕ ಮತ್ತೊಮ್ಮೆ ಸಚಿವರೊಂದಿಗೆ ಚರ್ಚಿಸಿ ಸಮಾರಂಭದ ದಿನಾಂಕ ನಿಗದಿಪಡಿಸಲಾಗುವುದು. ಸಮಾರಂಭವನ್ನು ಮುಂದೂಡಿದ್ದರಿಂದ ಪಕ್ಷದ ಕಾರ್ಯಕರ್ತರು ಸಹಕರಿಸಬೇಕೆಂದು ಕೋರಿದ್ದಾರೆ.
ವಿವಾಹಕ್ಕೆ ಪರವಾನಗಿ
ಬಳ್ಳಾರಿ: ಶ್ರೀರಾಮುಲು ನೇತೃತ್ವದಲ್ಲಿ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮ ಸಿದ್ಧತೆಗೆ ಸ್ಥಳೀಯ ಶಾಸಕರಿಂದ ಪರವಾನಗಿ ಪಡೆದಿಲ್ಲ ಎನ್ನುವ ಕಾರಣಕ್ಕೆ ಶನಿವಾರ ಮತ್ತು ಭಾನುವಾರ ಸಿದ್ಧತಾ ಕಾರ್ಯ ಸ್ಥಗಿತಗೊಂಡಿತ್ತು. ಸೋಮವಾರದಿಂದ ಕೆಲಸ ಆರಂಭವಾಗಿದೆ. ಸಾಮೂಹಿಕ ವಿವಾಹಕ್ಕೆ ಮುನ್ಸಿಪಲ್ ಕಾಲೇಜಿನಿಂದ ಹಾಗೂ ಸ್ಥಳೀಯ ಶಾಸಕರಿಂದಲೂ ಪರವಾನಗಿ ಪಡೆಯಬೇಕಿತ್ತು. ಆದರೆ ಶಾಸಕರಿಂದ ಪರವಾನಗಿ ಪಡೆಯದೇ ಮದುವೆಗೆ ಸಿದ್ಧತೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಶನಿವಾರದಿಂದ ಸಿದ್ಧತಾ ಕಾರ್ಯ ಸ್ಥಗಿತಗೊಂಡಿತ್ತು. ಆದರೆ ನಂತರ ಪರವಾನಗಿ ನೀಡಿದ ಹಿನ್ನೆಲೆಯಲ್ಲಿ ಸೋಮವಾರದಿಂದ ಕೆಲಸ ಆರಂಭವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.