ಬಳ್ಳಾರಿ

ರು. 3 ಕೋಟಿ ವೆಚ್ಚದಲ್ಲಿ ಕಸೂತಿ ತರಬೇತಿ ಕೇಂದ್ರ

Published On :

ಬಳ್ಳಾರಿ: ಜಿಲ್ಲೆಯ ಹೂವಿನ ಹಡಗಲಿ ಸೇರಿದಂತೆ ರಾಜ್ಯದ 5 ಕಡೆ ರು. 3 ಕೋಟಿ ವೆಚ್ಚದಲ್ಲಿ ಸಾಂಪ್ರದಾಯಿಕ ಕಸೂತಿ ಕಲೆ ಸಿದ್ಧ ಉಡುಪು ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಕಾರ್ಮಿಕ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯಕ್ ತಿಳಿಸಿದ್ದಾರೆ.
ಗುರುವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದರು.
ತರಬೇತಿ ಕೇಂದ್ರವನ್ನು ರಾಜ್ಯದ ಗುಲ್ಬರ್ಗಾ, ದಾವಣಗೆರೆ ಜಿಲ್ಲೆಯ ಸರುಗೊಂಡನಕೊಪ್ಪ, ಬಿಜಾಪುರದಲ್ಲಿ ನಿರ್ಮಿಸಲಾಗುತ್ತಿದ್ದು, ಗದಗ ಜಿಲ್ಲೆಯಲ್ಲಿ ಕೇಂದ್ರ ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸಿದೆ ಎಂದರು.
ಬಳ್ಳಾರಿ, ಮೈಸೂರು ಸೇರಿದಂತೆ ರಾಜ್ಯದ ಐದು ಕಡೆಯಲ್ಲಿ ಕರ್ನಾಟಕ ವಿವಿಧ ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ರು. 40 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು. ಸಾಂಪ್ರದಾಯಿಕ ಕಲೆ ಸಿದ್ಧ ಉಡುಪು ತರಬೇತಿ ಕೇಂದ್ರದಿಂದ ಲಂಬಾಣಿ ಮಹಿಳೆಯರಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದರು.
ಕಾರ್ಮಿಕ ನ್ಯಾಯಾಲಯ ಆರಂಭ: ರು. 5 ಕೋಟಿ ವೆಚ್ಚದಲ್ಲಿ ಕಾರ್ಮಿಕರ ಮಕ್ಕಳಿಗಾಗಿ ಬಳ್ಳಾರಿಯಲ್ಲಿ ಕಾರ್ಮಿಕ ವಸತಿ ಶಾಲೆ ನಿರ್ಮಿಸಲಾಗುತ್ತಿದೆ. ರಾಜ್ಯದ 5 ಕಡೆಗಳಲ್ಲಿ ವಸತಿ ಶಾಲೆ ಆರಂಭಿಸಲು ನಿರ್ಧರಿಸಲಾಗಿದ್ದು, ಅದರಲ್ಲಿ ಒಂದು ಬಳ್ಳಾರಿಯಲ್ಲಿ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಕಾರ್ಮಿಕ ಇಲಾಖೆಯಿಂದ ಈಗಾಗಲೇ ರು. 52.52 ಕೋಟಿ ಬಿಡುಗಡೆಗೊಳಿಸಲಾಗಿದೆ.  ಇನ್ನು ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ಮೂಲಕ ಬಾಲಕಾರ್ಮಿಕ ಕಲ್ಯಾಣಕ್ಕೆ ಮುಂದಾಗಿದೆ. ಇನ್ನು ಬಳ್ಳಾರಿಯಲ್ಲಿಯೇ ಕಾರ್ಮಿಕ ನ್ಯಾಯಾಲಯ ಆರಂಭಿಸಲು ಚಿಂತನೆ ನಡೆಸಲಾಗುತ್ತದೆ ಎಂದರು.
ಕೆಐಎಡಿಬಿ ಸೇರಿದಂತೆ ಕೈಗಾರಿಕೆಗಳು ಕೈಗಾರಿಕೆ ಅಭಿವೃದ್ಧಿ ಉದ್ದೇಶ ಎಂಬುದನ್ನು ಮುಂದಿಟ್ಟುಕೊಂಡು ರೈತರ ಭೂಮಿ ಕಿತ್ತುಕೊಳ್ಳುವುದು ಅವಕಾಶ ನೀಡುವುದಿಲ್ಲ. ಜಿಲ್ಲೆಯಲ್ಲಿ ಹಿಂದೆ ಇಂಥ ಪ್ರಕರಣಗಳು ನಡೆದಿರಬಹುದು. ಆದರೆ ಅದಕ್ಕೆ ಈಗ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ೤ ಚೇತನ್‌ಸಿಂಗ್ ರಾಥೋರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ್ ನಾಯಕ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.