ಬಳ್ಳಾರಿ

ವಿವಿಧೆಡೆ ಸಂಭ್ರಮದ ಸ್ವಾತಂತ್ರ್ಯೋತ್ಸವ

Published On :

ಬಳ್ಳಾರಿ: ಮಹಾನಗರ ಪಾಲಿಕೆ ಕಚೇರಿಯಲ್ಲಿ 67ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಾಸಕ ಅನಿಲ್ ಎಚ್. ಲಾಡ್ ಧ್ವಜಾರೋಹಣ ನೆರವೇರಿಸಿದರು. ಸಂದರ್ಭ ಪಾಲಿಕೆಯ ವಿವಿಧ ಸದಸ್ಯರು, ಆಯುಕ್ತ ಚಿಕ್ಕಣ್ಣ ಮತ್ತಿತರರಿದ್ದರು.
ಜಿಪಂ ಕಚೇರಿ: ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ 67ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಮಂಗಳಮ್ಮ ಗುಬಾಜಿ ಧ್ವಜಾರೋಹಣ ನೆರವೇರಿಸಿದರು. ಮಂಜುನಾಥ ನಾಯ್ಕ, ನಂದೀಶ್ ಇದ್ದರು.
ತಾಪಂ ಕಚೇರಿ: ತಾಲೂಕು ಪಂಚಾಯಿತಿ ಕಚೇರಿಯಲ್ಲಿ 67ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲೂಕು ಪಂಚಾಯ್ತಿ ಅಧ್ಯಕ್ಷ ಗಾದಿಲಿಂಗಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ತಾಲೂಕು ಪಂಚಾಯ್ತಿ ಉಪಾಧ್ಯಕ್ಷರಾದ ಮರೆಮ್ಮ, ಕಾರ್ಯನಿರ್ವಾಹಕ ಅಧಿಕಾರಿ ಜಾನಕಿರಾಮ, ವ್ಯವಸ್ಥಾಪಕ ಬಸವರಾಜ ಹಿರೇಮಠ ಮತ್ತಿತರರಿದ್ದರು.

ಸಡಗರದಿಂದ ಸ್ವಾತಂತ್ರ್ಯ ದಿನಾಚರಣೆ
ಹಗರಿಬೊಮ್ಮನಹಳ್ಳಿ: ಪಟ್ಟಣದ ರಾಮನಗರದ ಗಂ.ಭೀ.ಸರ್ಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಗುರುವಾರ ಮುಂಜಾನೆ ತಾಲೂಕು ಆಡಳಿತದ ವತಿಯಿಂದ 67ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಾವಿರಾರು ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ನಾಗರೀಕರ ಸಮ್ಮುಖದಲ್ಲಿ ಅತ್ಯಂತ ಸಡಗರ, ಸಂಭ್ರಮದೊಂದಿಗೆ ಆಚರಿಸಲಾಯಿತು. ಪ್ರಭಾರಿ ತಹಸೀಲ್ದಾರ್ ಇಜಾಜ್ ಬೇಗ್ ರಾಷ್ಟ್ರಧ್ವಜಾರೋಹಣ ನೇರವೇರಿಸಿ, ದೇಶದ ಐಕ್ಯತೆ, ಸಮಗ್ರತೆಗಾಗಿ ಎಲ್ಲರೂ ಶ್ರಮಿಸೋಣ. ಪ್ರತಿಯೊಬ್ಬರ ಮನದಲ್ಲೂ ರಾಷ್ಟ್ರಭಕ್ತಿ, ಪ್ರೇಮ ಉಜ್ವಲವಾಗಿ ಬೆಳೆಸಿಕೊಳ್ಳುವ ಮೂಲಕ ಭಾರತ ದೇಶವನ್ನು ಸದೃಢ ರಾಷ್ಟ್ರವನ್ನಾಗಿ ಕಟ್ಟಲು ಶಕ್ತಿಮೀರಿ ದುಡಿಯೋಣ ಎಂದು ಕರೆ ನೀಡಿದರು. ಇದಕ್ಕೂ ಮುನ್ನ ಪೊಲೀಸ್, ಗೃಹ ರಕ್ಷಕದಳ, ಅಗ್ನಿಶಾಮಕದಳ, ಸ್ಕೌಟ್ಸ್, ಗೈಡ್ಸ್ ಪಡೆಗಳಿಂದ ಹಾಗೂ ವಿವಿಧ ಶಾಲೆಗಳ ಮಕ್ಕಳಿಂದ ಆಕರ್ಷಕ ಪಥಸಂಚಲನಾ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವವರನ್ನು ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಪರೀಕ್ಷೆಗಳಲ್ಲಿ ತಾಲೂಕಿಗೆ ಪ್ರಥಮ ಸ್ಥಾನಿಯರನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು. ನಂತರ  ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕ್ಷೇತ್ರದ ಶಾಸಕ ಎಸ್. ಭೀಮಾನಾಯ್ಕ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರಂಭದಲ್ಲಿ ಮಾಜಿ ಶಾಸಕ ಸಿರಾಜ್ ಶೇಖ್, ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ, ಜಿಪಂ ಸದಸ್ಯರಾದ ಹೇಮವ್ವ ಕೃಷ್ಣನಾಯ್ಕ, ರೋಗಾಣಿ ಹುಲುಗಪ್ಪ, ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿಪೂರ್ಯನಾಯ್ಕ, ಉಪಾಧ್ಯಕ್ಷೆ ನಾಗರತ್ನ ವೆಂಕಟೇಶ್, ಸದಸ್ಯರಾದ ಭಾರತಮ್ಮ ಬೆಲ್ಲದ್, ಗಂಗಮ್ಮ ಹನುಮಂತಪ್ಪ, ಉಪ್ಪಾರ ಬಾಲಪ್ಪ, ಉಮೇಶ, ಶಿವಕುಮಾರ, ಮುಖಂಡರಾದ ಜಿ. ಮಂಜುನಾಥ, ಹೂಗಾರ ಮಲ್ಲಣ್ಣ, ವೈ. ಮಲ್ಲಿಕಾರ್ಜುನ, ಹೆಗ್ಡಾಳ ಶ್ರೀನಿವಾಸ, ಕೆಪಿಮಠದ್, ಎಚ್.ಎಂ. ಚೋಳರಾಜ್, ಉಡೇದ್ ಗುರುಬಸವರಾಜ, ಚಿಂತ್ರಪಳ್ಳಿ ಗ್ರಾಪಂ ಅಧ್ಯಕ್ಷ ಆನಂದ್, ಕಡ್ಲಬಾಳು ಗ್ರಾಪಂ ಅಧ್ಯಕ್ಷೆ ಬಡಲಡಿಕಿ ಮಂಜುಳಾಕೃಷ್ಣಪ್ಪ, ಕಸಾಪ ಅಧ್ಯಕ್ಷ ಎಂಪಿಎಂ ಮಂಜುನಾಥ, ವಿವಿಧ ಇಲಾಖೆ ಮುಖ್ಯಸ್ಥರು ಇದ್ದರು. ಕ್ಷೇತ್ರಶಿಕ್ಷಣಾಧಿಕಾರಿ ಕೆ. ರಾಮನಗೌಡ ಸ್ವಾಗತಿಸಿದರು. ಪರಮೇಶ್ವರ ಸೋಪ್ಪಿಮಠ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.