ಬಳ್ಳಾರಿ

ಉದ್ಯಮಿಗಳಿಂದ ಮಾದರಿ ಶೌಚ ನಿರ್ಮಾಣ

Published On :

ಹೂವಿನಹಡಗಲಿ: ರಾಜ್ಯ ಕೈಗಾರಿಕೆ ಉದ್ಯಮಿಗಳ ಸಹಕಾರದೊಂದಿಗೆ ಮಾದರಿ ಶೌಚಾಲಯಗಳನ್ನು ತಾಲೂಕಿನ ಉಪನಾಯಕನಹಳ್ಳಿಯಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಭರವಸೆ ನೀಡಿದರು.
ತಾಲೂಕಿನ ಉಪನಾಯಕನಹಳ್ಳಿಯಲ್ಲಿ ನೂತನ ಪ್ರೌಢಶಾಲೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಉತ್ತಮ ಗುಣಮಟ್ಟದ 50 ಶೌಚಾಲಯಗಳ ನಿರ್ಮಾಣಕ್ಕೆ ಮೊದಲ ಗ್ರಾಮವನ್ನಾಗಿ ಉಪನಾಯಕನಹಳ್ಳಿಯನ್ನು ಆಯ್ಕೆ ಮಾಡಲಾಗಿದೆ ಎಂದ ಅವರು, ಗ್ರಾಮದಲ್ಲಿ ಉತ್ತಮ ವಾತಾವರಣ ಹಾಗೂ ಆರೋಗ್ಯದಿಂದ ಇರಲು ಪ್ರತಿಯೊಬ್ಬರೂ ಶೌಚಾಲಯಗಳನ್ನು ನಿರ್ಮಾಣ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಶೌಚಾಲಯ ನಿರ್ಮಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಬ್ಬ ಫಲಾನುಭವಿಗೆ ರು. 9,200 ಸಹಾಯಧನ ನೀಡುತ್ತಿದೆ. ಇದರ ಸದುಪಯೋಗ ಪಡೆದು ಮಹಿಳೆಯರು ಹೆಚ್ಚಾಗಿ ಶೌಚಾಲಯ ನಿರ್ಮಾಣದ ಕಡೆಗೆ ಗಮನ ಹರಿಸಬೇಕು. ರಾಷ್ಟ್ರೀಯ ಮಾಧ್ಯಮಿಕ ಅಭಿಯಾನ ಯೋಜನೆಯಡಿ ಪ್ರೌಢಶಾಲೆ ಕೊಠಡಿಗಳ ನಿರ್ಮಾಣಕ್ಕಾಗಿ ರು. 50 ಲಕ್ಷ ಬಿಡುಗಡೆಯಾಗಿದೆ. ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿಯನ್ನು ಮಾಡಬೇ ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಶುದ್ಧ ಕುಡಿವ ನೀರು: ಉಪನಾಯಕನಹಳ್ಳಿ ಮಾದರಿ ಗ್ರಾಮವನ್ನಾಗಿ ಮಾಡಲು ತಾವು ಪಣತೊಟ್ಟಿದ್ದು, ಗದಗಿನ ಕೆ.ಎಚ್. ಪಾಟೀಲ್ ಪ್ರತಿಷ್ಠಾನದಿಂದ ಗ್ರಾಮದ ಜನತೆಗೆ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಮುಂಬರುವ 2 ತಿಂಗಳಲ್ಲೇ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು. 12 ಗ್ರಾಮಗಳ ಸಂಯುಕ್ತ ಕುಡಿಯುವ ನೀರಿನ ಯೋಜನೆಗಾಗಿ ರು. 878 ಲಕ್ಷ ಬಿಡುಗಡೆಗೆ ಕ್ರಮ ಕೈಗೊಂಡು ಶೀಘ್ರದಲ್ಲೆ ಕಾಮಗಾರಿ ಆರಂಭಿಸಲಾಗುವುದು ಎಂದರು.
ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಮಾತನಾಡಿದರು. ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಐಗೋಳ ಚಿದಾನಂದ, ಎಂ. ಪರಮೇಶ್ವರಪ್ಪ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹರವಿ ಪ್ರಕಾಶ, ತಾಪಂ ಉಪಾಧ್ಯಕ್ಷೆ ಪ್ರೇಮಾ, ಎಪಿಎಂಸಿ ಅಧ್ಯಕ್ಷ ವಾರದ ಗೌಸ್, ಗ್ರಾಪಂ ಅಧ್ಯಕ್ಷ ಸಂಖ್ಯಾನಾಯ್ಕ, ತಾಪಂ ಸದಸ್ಯೆ ಹೊನ್ನಮ್ಮ, ತಹಸೀಲ್ದಾರ್ ಎ.ಬಿ. ವಿಜಯಕುಮಾರ, ಬಿಇಒ ಬಿ. ವಿಜಯಕುಮಾರ, ತಾಪಂ ಇಒ ಸಿದ್ದೇಶ್ವರ, ಗ್ರಾಪಂ ಸದಸ್ಯ ಬೆನ್ನೂರು ರುದ್ರಪ್ಪ, ಪುರದ ಮಂಜುನಾಥ ಇದ್ದರು.
ಶಾಲೆಗಾಗಿ ನಿವೇಶನ ದಾನ ಮಾಡಿರುವ ಪುರದ ವಿರೂಪಾಕ್ಷಪ್ಪ, ಅಂಗಡಿ ಚಿನ್ನಪ್ಪ ಇವರನ್ನು ಸಚಿವರು ಸನ್ಮಾನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.