ಕ್ರೀಡೆಗಳಿಂದ ವಿದ್ಯಾರ್ಥಿಗಳು ವಿಮುಖ: ಉದಯ ಜನ್ನು
ಕೂಡ್ಲಿಗಿ: ಕ್ರೀಡೆಗಳಿಂದ ವಿದ್ಯಾರ್ಥಿಗಳು ವಿಮುಖರಾಗುತ್ತಿದ್ದು, ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ಮುಖ್ಯಪಾತ್ರ ವಹಿಸುವ ಕ್ರೀಡೆಗಳ ಬಗ್ಗೆ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕಾಗಿದೆ ಎಂದು ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ ಜನ್ನು ಅಭಿಪ್ರಾಯಿಸಿದರು.
ಅವರು ಪಟ್ಟಣದ ಲಕ್ಷ್ಮಿ ವೆಂಕಟೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಕೂಡ್ಲಿಗಿ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆಗಳಿಂದ ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗುತ್ತಿದ್ದು, ಉತ್ತಮ ವ್ಯಕ್ತಿತ್ವ ಹಾಗೂ ನಾಯಕತ್ವ ಗುಣ ಪಡೆಯಲು ಕ್ರೀಡೆಯಿಂದ ಸಾಧ್ಯ. ಆದರೆ ಇಂದು ಪಠ್ಯಕ್ಕೆ ನೀಡುವ ಮಹತ್ವ ಕ್ರೀಡೆಗಳಿಗೆ ನೀಡದಿರುವುದು ವಿಪರ್ಯಾಸ ಎಂದರು.
ಬಿಇಒ ಮಂಜುನಾಥ ಮಾತನಾಡಿ, ಕ್ರೀಡೆಗಳು ಎಲ್ಲರ ಬದುಕಿನ ಜೀವಾಳವಾಗಿದ್ದು, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸಬೇಕು. ಪಾರಂಪರಿಕ ಕ್ರೀಡೆಗಳನ್ನು ಮುಂದುವರೆಸಿಕೊಂಡು ಹೋಗಬೇಕಾದ ಮಹತ್ತರ ಹೊಣೆಗಾರಿಕೆ ಇದೆ ಎಂದು ತಿಳಿಸಿದರು.
ಸಂಸ್ಥೆಯ ಅಧ್ಯಕ್ಷೆ ಚಂದ್ರಿಕಾಬಾಯಿ, ಭೀಮೇಶ್, ಕರವೇ ತಾಲೂಕು ಅಧ್ಯಕ್ಷ ಕಾಟೇರ್ ಹಾಲೇಶ್, ಸಂಸ್ಥೆಯ ಆಡಳಿತಾಧಿಕಾರಿ ಬಿ. ನಾಗರಾಜ, ಪ್ರಾಚಾರ್ಯ ಸಿದ್ದರಾಮ ಹಿರೇಮಠ, ಯುವರಾಜ, ಟಿ. ಕೊತ್ಲಮ್ಮ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮಂಜುನಾಥ, ದೈಹಿಕ ಶಿಕ್ಷಕ ಡಿ. ನಾಗರಾಜ, ಪಪಂ ಸದಸ್ಯ ರಜನಿಕಾಂತ್, ಜಯರಾಂ ನಾಯಕ ಇದ್ದರು. ಪಿಯು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪುಷ್ಪಾವತಿ ಪ್ರಾರ್ಥಿಸಿದರು, ಉಪನ್ಯಾಸಕ ತಳವಾರ ಉಮೇಶ್ ಸ್ವಾಗತಿಸಿದರು, ಪ್ರಶಿಕ್ಷಣಾರ್ಥಿ ನಾಗರತ್ನ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

