ಸುದ್ದಿ ಸಂಕ್ಷೇಪ
ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಕ್ಕಳಿಗೆ 2013-14ನೇ ಸಾಲಿನ ಶೌರ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಉಪನಿರ್ದೇಶಕ ಬಿ.ಎಸ್. ಕಲಾದಗಿ ತಿಳಿಸಿದ್ದಾರೆ. ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ, ಸಾಹಸ ತೋರಿದ 6-15 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಪ್ರಶಸ್ತಿ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆಯಂದು ನೀಡಲಾಗುವುದು. ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಆ. 31ರೊಳಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಳ್ಳಾರಿ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ-08392-266219ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಅಭಿವೃದ್ಧಿ ಸಮಿತಿ ಅಸ್ತಿತ್ವಕ್ಕೆ
ಕೊಟ್ಟೂರು: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರಾಗಿ ಶಾಸಕ ಎಸ್. ಭೀಮಾನಾಯ್ಕ, ಕಾರ್ಯಾಧ್ಯಕ್ಷರಾಗಿ ಕೆ.ಎನ್. ಕೊಟ್ರೇಶ್, ಸದಸ್ಯರಾಗಿ ಶೆರೆಗಾರ ವೆಂಕಟೇಶ್, ನೀಲಮ್ಮ ಜವಳಿ, ಪಪಂ ಸದಸ್ಯರಾದ ಸುಮಾ ಮಂಜುನಾಥಗೌಡ, ಅನಿಲ್ ಹೊಸಮನಿ, ಬಿ. ಕೊಟ್ರೇಶ್, ಡಂಬಳ ಮಹೇಂದ್ರಕುಮಾರ್, ಐ. ದಾರುಕೇಶ್ ಇವರು ಆಯ್ಕೆಯಾಗಿದ್ದಾರೆ. ಈ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿ ಪ್ರಾಚಾರ್ಯ ಟಿ. ಶಿವಮೂರ್ತಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ಪ್ರೌಢಶಾಲಾ ವಿಭಾಗ: ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ಸಹ ರಚಿಸಲಾಗಿದೆ. ಅಧ್ಯಕ್ಷರಾಗಿ ಶಾಸಕ ಎಸ್. ಭೀಮಾನಾಯ್ಕ, ಕಾರ್ಯಾಧ್ಯಕ್ಷರಾಗಿ ಬೂದಿ ಶಿವಕುಮಾರ್, ಸದಸ್ಯರಾಗಿ ಎನ್. ಗೋಪಿ, ಜವಳಿ ರಾಜಶೇಖರ, ಎಂ. ಪ್ರಕಾಶ್, ಫಕ್ಕೀರಪ್ಪ, ಕೆ. ಕರಿಬಸವನಗೌಡ, ಬಿ. ಶಂಕರ್, ಶಫಿಸಾಬ್, ಮರುಳಸಿದ್ದಪ್ಪ, ಬಿ. ಸತೀಶ್, ಆರ್.ಎಂ. ಗುರುಬಸವರಾಜ, ಸದಸ್ಯ ಕಾರ್ಯದರ್ಶಿಯಾಗಿ ಮುಖ್ಯೋಪಾಧ್ಯಾಯ ಸಿ.ಬಸವರಾಜ್ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಆಯ್ಕೆ ಪಟ್ಟಿ ಪ್ರಕಟ
ಬಳ್ಳಾರಿ: ಶಿಶು ಅಭಿವೃದ್ಧಿ ಯೋಜನೆ ಬಳ್ಳಾರಿ ನಗರ ಹಾಗೂ ಗ್ರಾಮಾಂತರದಲ್ಲಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆಯಾ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಬಳ್ಳಾರಿ(ನಗರ) ವ್ಯಾಪ್ತಿಯಲ್ಲಿ 1 ಅಂಗನವಾಡಿ ಕಾರ್ಯಕರ್ತೆ ಮತ್ತು 12 ಸಹಾಯಕಿಯರ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 7 ಅಂಗನವಾಡಿ ಕಾರ್ಯಕರ್ತೆ ಮತ್ತು 14 ಸಹಾಯಕಿಯರ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿ ಕುರಿತು ಆಕ್ಷೇಪಣೆ ಸಲ್ಲಿಸುವವರು ಸೂಕ್ತ ದಾಖಲಾತಿಗಳೊಂದಿಗೆ ಲಿಖಿತವಾಗಿ ಆ. 23ರೊಳಗಾಗಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

