ಬಳ್ಳಾರಿ

ಹುಲಿಕೆರೆ: ಗ್ರಾಮ ಸ್ವಚ್ಛತೆ

Published On :

ಕೂಡ್ಲಿಗಿ: ತಾಲೂಕಿನ ಹುಲಿಕೆರೆ ಶಾಲಾ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶಾಲಾಭಿವೃದ್ಧ ಸಮಿತಿ, ಗ್ರಾಪಂ ಸಹಭಾಗಿತ್ವದಲ್ಲಿ ಗ್ರಾಮದ ಸ್ವಚ್ಛತಾ ಕಾರ್ಯಕ್ರಮ ಜರುಗಿತು. ಶಾಲಾ ಅಭಿವೃದ್ಧಿ ಸಮಿತಿ  ಅಧ್ಯಕ್ಷೆ ಬಸಮ್ಮ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಲಯದ ಮೇಲ್ವಿಚಾರಕ ಧರ್ಮೇಂದ್ರ ಸ್ವಚ್ಛತೆ ಬಗ್ಗೆ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ, ಸಾವಯವ ಕೃಷಿಕ ಸಜ್ಜನ್ ಬಯಲು ಮಲ, ಮೂತ್ರ ವಿಸರ್ಜನೆಯಿಂದಾಗುವ ದುಷ್ಪರಿಣಾಮಗಳು, ಶೌಚಾಲಯಗಳ ಬಳಕೆ ಬಗ್ಗೆ ಮಾಹಿ ನೀಡಿದರು. ಸ್ವಸಹಾಯ ಸಂಘದ ಸದಸ್ಯರಿಂದ ಗ್ರಾಮ ಸ್ವಚ್ಛತೆ ಕಾರ್ಯ ಜರುಗಿತು. ಸೇವಾ ಪ್ರತಿನಿಧಿಗಳಾದ ಬೋಮ್ಮಕ್ಕ, ಕಮಲಮ್ಮ, ಗ್ರಾಪಂ, ಎಸ್‌ಡಿಎಂಸಿ, ಸ್ವಸಹಾಯ ಸಂಘದ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.