ಬಳ್ಳಾರಿ

ಸುದ್ದಿ ಸಂಕ್ಷೇಪ

Published On :

ತಾತ್ಕಾಲಿಕ ಪಟ್ಟಿ ಪ್ರಕಟ
ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ ಎಂದು ಕೂಡ್ಲಿಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. ಈ ಪಟ್ಟಿ ಕುರಿತು ಆಕ್ಷೇಪಣೆ ಸಲ್ಲಿಸುವವರು ಅಗತ್ಯ ದಾಖಲಾತಿಗಳೊಂದಿಗೆ ಲಿಖಿತವಾಗಿ ಆ. 23ರೊಳಗಾಗಿ ಕೂಡ್ಲಿಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ-ಸಂ-08391-220240ನ್ನು ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಘಟಕ ಉದ್ಘಾಟನೆ
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಎಚ್. ಹೊಸಳ್ಳಿ ಗ್ರಾಮದಲ್ಲಿ ಅಖಿಲ ಭಾರತ ಯುವ ಜನ ಫೆಡರೇಷನ್‌ನ ಗ್ರಾಮ ಘಟಕದ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಎಐವೈಎಫ್ ಜಿಲ್ಲಾಧ್ಯಕ್ಷ ಸಂಗನಕಲ್ಲು ಕಟ್ಟೆಬಸಪ್ಪ ಗ್ರಾಮ ಘಟಕ ಉದ್ಘಾಟಿಸಿ, ನಂತರ ಮಾತನಾಡಿದರು. ಈ ಸಂದರ್ಭದಲ್ಲಿ ಫೆಡರೇಷನ್ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಕೆ. ರವಿ, ಎ.ಕೆ. ಕೃಷ್ಣಮೂರ್ತಿ, ಪ್ರಭು, ಅಂಜಿನಿ, ಬಸವರಾಜ, ಶಂಕರ್, ಎಚ್. ದುರುಗಪ್ಪ ಹಾಗೂ ಗ್ರಾಮದ ಮುಖಂಡರು ಸೇರಿದಂತೆ ಇತರರು ಇದ್ದರು. ಇದೇ ಸಂದರ್ಭದಲ್ಲಿ ಎಚ್. ಹೊಸಳ್ಳಿ ಗ್ರಾಮ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಎಐವೈಎಫ್‌ನ ಎಚ್. ಹೊಸಳ್ಳಿ ಗ್ರಾಮ ಘಟಕದ ಗೌರವಾಧ್ಯಕ್ಷರಾಗಿ ಟಿ. ಮಲ್ಲಯ್ಯ, ಅಧ್ಯಕ್ಷರಾಗಿ ಬಿ. ಶೇಖಣ್ಣ, ಉಪಾಧ್ಯಕ್ಷರಾಗಿ ಎ. ಶ್ರೀಶೈಲ, ಕಾರ್ಯದರ್ಶಿಯಾಗಿ ಜೆ. ರಾಮಯ್ಯ, ಸಂಘಟನಾ ಕಾರ್ಯದರ್ಶಿಯಾಗಿ ಬಿ. ದ್ಯಾವಣ್ಣ, ಸಹ ಕಾರ್ಯದರ್ಶಿಯಾಗಿ ಎಚ್. ಶ್ಯಾಮಿಯಾಲ, ಖಜಾಂಚಿಯಾಗಿ ಸಿದ್ದಪ್ಪ, ಉಪಖಜಾಂಚಿಯಾಗಿ ವಂಡ್ರಯ್ಯ ಅವರನ್ನು ಆಯ್ಕೆ ಮಾಡಲಾಯಿತು.
ಕಲಶ ಪ್ರತಿಷ್ಠಾಪನೆ
ಮುನಿರಾಬಾದ್: ಇಲ್ಲಿನ ಕೆಇಬಿ ಕ್ಲಬ್ ಕಾಲೋನಿಯಲ್ಲಿನ ಬಲಮುರಿ ಗಣೇಶ ದೇವಸ್ಥಾನದಲ್ಲಿ ಸೋಮವಾರ ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಪ್ಪಳ ಗವಿಮಠದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ಎಲ್ಲ ರೀತಿಯ ಸೌಕರ್ಯಗಳಿದ್ದರೂ ಮನುಷ್ಯನಿಗೆ ನೆಮ್ಮದಿಯಿಂದ ಬದಕಲು ಆಗುತ್ತಿಲ್ಲ. ಹೀಗಾಗಿ, ಮನುಷ್ಯ ಶಾಂತಿ ಹುಡುಕ ತೊಡಗಿದ್ದಾನೆ. ಗೌತಮ ಬುದ್ಧನು ಶಾಂತಿಗಾಗಿ ತನ್ನ ಸಾಮ್ರಾಜ್ಯವನ್ನೇ ತ್ಯಾಗ ಮಾಡಿದನು. ಆದರೂ ಆತನಿಗೆ ಶಾಂತಿ ದೊರೆಯಲಿಲ್ಲ. ಸಾವಿರಾರು ವರ್ಷದ ತಪಸ್ಸಿನ ಫಲದಿಂದ ಮನುಷ್ಯನ ಜನ್ಮ ಲಭ್ಯವಾಗಿದೆ ಎಂದರು. ಕೆಪಿಟಿಸಿಎಲ್ ಅಧೀಕ್ಷಕ ಅಭಿಯಂತ, ದೇವಸ್ಥಾನ ಸಮಿತಿ ಅಧ್ಯಕ್ಷ ನಾಗರಾಜನ್, ಗ್ರಾಪಂ ಅಧ್ಯಕ್ಷೆ ರಾಧಿಕಾ ರವಿ, ರಾಜ್ಯ ಎಸ್ಸಿ, ಎಸ್ಟಿ ಘಟಕ ಸಂಚಾಲಕ ಭರಮಪ್ಪ ಬೆಲ್ಲದ್, ಚಾಂದಸಾಬ್, ಬಾಲಚಂದ್ರ, ಗೌಸ್, ಶಂಕ್ರಪ್ಪ ದೊಡ್ಡಮನಿ ಇದ್ದರು. ನಾಯಕ್ ಅವರನ್ನು ಸನ್ಮಾನಿಸಲಾಯಿತು. ಋತ್ವಿಕರಾದ ಕೀರ್ತಿನಾಥ ಕುರ್ತಕೋಟಿ, ಅನೀಲ್ ಜೋಷಿ ಶಾಂತಿಹೋಮ, ನವಗ್ರಹ, ಗಣಪತಿ ಹೋಮ ನೆರವೇರಿಸಿದರು. ದೇವಸ್ಥಾನದಿಂದ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.