ಸಾಮಾನ್ಯರಿಗೂ ಅವಕಾಶ ಕಲ್ಪಿಸಿದ ಅರಸು
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಆ. 21
ಹಿಂದುಳಿದ ಸಾಮಾನ್ಯ ಜನರಿಗೆ ರಾಜಕೀಯ ಅಧಿಕಾರದ ಅವಕಾಶವನ್ನು ದೇವರಾಜ ಅರಸು ಕಲ್ಪಿಸಿಕೊಟ್ಟಿದ್ದರಿಂದ ಜನಸಾಮಾನ್ಯರು ಸಹ ರಾಜಕೀಯವಾಗಿ ಸ್ಥಾನಮಾನ ಪಡೆಯಲು ಸಾಧ್ಯವಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಧ್ಯಯನಾಂಗ ಪ್ರಾಧ್ಯಾಪಕ ಡಾ. ಶ್ರೀಧರ ಹೇಳಿದರು.
ನಗರದಲ್ಲಿ ಮಂಗಳವಾರ ಡಿ. ದೇವರಾಜ ಅರಸು ಅವರ 98ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿ, ದೇವರಾಜ್ ಅರಸು ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಆಡಳಿತ ನಡೆಸುವ ಮೂಲಕ ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿಗಾಗಿ ನಿರಂತರ ಶ್ರಮಿಸುವ ಮೂಲಕ ಭೂ ಸುಧಾರಣೆ ಜಾರಿಗೆ ತಂದಿದ್ದರಿಂದ ಕಳೆ ವರ್ಗದ ಜನರು ಸಹ ಜಮೀನು ಪಡೆಯಲು ಸಾಧ್ಯವಾಯಿತು. ಕೆಳ ವರ್ಗದ ಸಾಕಷ್ಟು ಜನರು ಜೀತ ಪದ್ಧತಿಯಿಂದ ಜೀವನ ಸಾಗಿಸುತ್ತಿದ್ದರು. ದೇವರಾಜ್ ಅರಸು ಅವರು ಅಧಿಕಾರಕ್ಕೆ ಬಂದ ತಕ್ಷಣ ಜೀತ ಪದ್ಧತಿ ರದ್ದುಪಡಿಸಿ ಎಲ್ಲರಿಗೂ ಸಮಾನ ಸ್ಥಾನಮಾನ ಸಿಗುವಂತೆ ವ್ಯವಸ್ಥೆ ರೂಪಿಸಿದರು ಎಂದರು.
ರಾಜ್ಯದಲ್ಲಿ ದಾಖಲೆ ರೂಪದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣ ಮಾಡಿ ಪ್ರಾದೇಶಿಕ ಅಸಮಾನತೆ ನಿವಾರಿಸಲು ಪ್ರಯತ್ನಿಸಿದರು ಎಂದು ವಿವರಿಸಿದರು.
ಸಹಾಯಕ ಆಯುಕ್ತ ಡಾ. ಡಿ.ಆರ್. ಅಶೋಕ್ ಕಾರ್ಯಕ್ರಮ ಉದ್ಘಾಟಿಸಿದರು. ತಾಪಂ ಸದಸ್ಯ ಸಿ.ಡಿ. ಮಹದೇವ, ಯು. ಸೋಮಪ್ಪ, ಭೀಮಾನಾಯ್ಕ, ರಹಮತ್ ಗೌಡ ಹಾಗೂ ಕಾಂಗ್ರೆಸ್ ಮುಖಂಡ ಅಯ್ಯಾಳಿ ಮೂರ್ತಿ, ನಗರಸಭೆ ಪೌರಾಯುಕ್ತ ಕೆ. ರಂಗಸ್ವಾಮಿ, ಬಿಇಒ ಪಿ. ಸುನಂದಾ, ಜಿಪಂ ಎಂಜಿನಿಯರಿಂಗ್ ವಿಭಾಗದ ಎಇಇ ವೆಂಕಟರಾಜ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎಲ್.ಡಿ. ಜೋಷಿ, ಶೇಖರ್ ಹೊರಪೇಟೆ ಉಪಸ್ಥತರಿದ್ದರು.
ಸಮಾರಂಭಕ್ಕೂ ಮುನ್ನ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದಿಂದ ಎಂ.ಪಿ. ಪ್ರಕಾಶ್ ಕಲಾಮಂದಿರದ ವರೆಗೆ ದೇವರಾಜು ಅರಸು ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ತಹಸೀಲ್ದಾರ್ ರಮೇಶ್ ಕೋನರಡ್ಡಿ ಸ್ವಾಗತಿಸಿದರು. ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ವೈ. ಯಮುನೇಶ್ ಪ್ರಾಸ್ತಾವಿಕ ಮಾತನಾಡಿದರು. ಬಸವರಾಜ ಬೆಣ್ಣಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

