ಹುತಾತ್ಮನಲ್ಲ ಹೇಳಿಕೆಗೆ ಎಸ್‌ಯುಸಿಐ ಖಂಡನೆ
ಬಳ್ಳಾರಿ: ದೇಶದ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಶಹೀದ್ ಭಗತ್‌ಸಿಂಗ್ ಅವರನ್ನು ಹುತಾತ್ಮರಲ್ಲ ಎಂಬ ಕೇಂದ್ರದ ಯುಪಿಎ ಸರ್ಕಾರದ ಹೇಳಿಕೆಯನ್ನು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಸ್‌ಯುಸಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ಸೋಮಶೇಖರ್ ಅವರು, ಭಗತ್‌ಸಿಂಗ್‌ರಂತಹ ಮಹಾನ್ ವ್ಯಕ್ತಿಗಳ ತತ್ವ ಆದರ್ಶಗಳು ಇಂದಿಗೂ ಎಲ್ಲರಿಗೂ ಆದರ್ಶವಾಗಿವೆ. ಅನ್ಯಾಯಗಳ ವಿರುದ್ಧ ಹೋರಾಡಲು ಹುರಿದುಂಬಿಸುತ್ತಿವೆ. ಅಂತಹ ಮಹಾನ್ ವ್ಯಕ್ತಿಗಳ ಕುರಿತು ಅಪಹಾಸ್ಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಮೂರ್ಖತನದಿಂದ ಕೂಡಿದೆ. ಯುಪಿಎ ಸರ್ಕಾರ ನೀಡಿರುವ ಹೇಳಿಕೆ ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ಹೋರಾಟಗಾರರ ಕುರಿತು ಇರುವ ಕಾಳಜಿ ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.
ಇಂತಹ ಹೇಳಿಕೆ ನೀಡುವವರ ವಿರುದ್ಧ ಜನರೂ ಸಹ ಹೋರಾಟಕ್ಕೆ ಮುಂದಾಗಬೇಕು. ಬಂಡವಾಳಶಾಹಿ ಆಳ್ವಿಕರ ಈ ಅತ್ಯಂತ ನಿಂದಾರ್ಹವಾದ ಮತ್ತು ಅತ್ಯಾಸಹ್ಯಕರ ಹೇಳಿಕೆಯನ್ನು ಎಸ್‌ಯುಸಿಐ ಖಂಡಿಸುತ್ತದೆ. ಜತೆಗೆ ಈ ಮಹಾನ್ ರಾಷ್ಟ್ರೀಯ ನಾಯಕರಿಗೆ ಅಪಚಾರವೆಸಗುವ ಉದ್ಧಟತನದ ಕಾರ್ಯಕ್ಕೆ ಕಾರಣರಾದವರನ್ನು ನಿದರ್ಶನೀಯ ಶಿಕ್ಷೆಗೆ ಗುರಿಪಡಿಸಬೇಕೆಂದು ಸೋಮಶೇಖರ್ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

