ಬಳ್ಳಾರಿ

ಇಸ್ಪೀಟ್ ಜೂಜಾಟ: ಬಂಧನ

Published On :

ಬಳ್ಳಾರಿ: ಸಾರ್ವಜನಿಕ ರಸ್ತೆಯಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಅಡ್ಡೆಯ ಮೇಲೆ ಸಿರುಗುಪ್ಪ ಪೊಲೀಸರು ದಾಳಿ ಮಾಡಿ, ಆರೋಪಿತರಿಂದ ರು. 6560  ವಶಪಡಿಸಿಕೊಂಡಿರುವ ಘಟನೆ ಸಿರುಗುಪ್ಪ ಪಟ್ಟಣದಲ್ಲಿ ಬುಧವಾರ ನಡೆದಿದೆ.
ಸಿರುಗುಪ್ಪ ಪಟ್ಟಣದ ಬಳ್ಳಾರಿ ರಸ್ತೆಯ ಮಯೂರ ಲಾರಿ ಟ್ರಾನ್ಸ್‌ಪೋರ್ಟ್ ಹಿಂದೆ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಹರ್ ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿರುಗುಪ್ಪ ಪೊಲೀಸರು ದಾಳಿ ಮಾಡಿ, ಆರೋಪಿತರನ್ನು ಬಂಧಿಸಿ, ಅವರಿಂದ ರು. 6560, ಇಸ್ಪೇಟ್ ಎಲೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಈ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿರುಗುಪ್ಪ ಬಳಿ ಲಾರಿ ಡಿಕ್ಕಿ: ಪಾದಚಾರಿ ಸಾವು
ಬಳ್ಳಾರಿ: ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಿರುಗುಪ್ಪ ಪಟ್ಟಣದ ಆದೋನಿ ರಸ್ತೆಯಲ್ಲಿ ನಡೆದಿದೆ. ಕೆ. ಪ್ರಹ್ಲಾದ ಮೃತನು. ಈತನು ಆ. 21ರಂದು ರಾತ್ರಿ ಸಿರುಗುಪ್ಪ ಪಟ್ಟಣ ಆದೋನಿ ರಸ್ತೆಯಲ್ಲಿ ಸದಾಶಿವನಗರದಲ್ಲಿರುವ ತನ್ನ ಮನೆಯ ಕಡೆಗೆ ಹೋಗುವ ಆದೋನಿ ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕೆ. ಪ್ರಹ್ಲಾದ್ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ. ಈ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಟ್ಕಾ: ಇಬ್ಬರ ಬಂಧನ
ಬಳ್ಳಾರಿ: ಮಟ್ಕಾ ಜೂಜಾಟದ ಅಡ್ಡೆಯ ಮೇಲೆ ದಾಳಿ ಮಾಡಿ, ರು. 22,100  ನಗದು, ಇಬ್ಬರನ್ನು ಬಂಧಿಸಿರುವ ಘಟನೆ ಕುರುಗೋಡು ಪಟ್ಟಣದಲ್ಲಿ ಗುರುವಾರ ನಡೆದಿದೆ.
ಕುರುಗೋಡು ಪಟ್ಟಣದ ಶ್ರೀ ದೊಡ್ಡಬಸವೇಶ್ವರ ದೇವಸ್ಥಾನದ ಸಮೀಪದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ರು. 22,100 ನಗದು, ಮಟ್ಕಾ ಪಟ್ಟಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತಾಗಿ ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.