ಬಳ್ಳಾರಿ

ಕಾರ್ಣಿಕ ನುಡಿಯುವ ಗೊರವಯ್ಯನ ಚಿಕಿತ್ಸೆಗೆ ನೆರವು: ಪರಮೇಶ್ವರನಾಯ್ಕ

Published On :

ಹೂವಿನಹಡಗಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಸುಕ್ಷೇತ್ರ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಕಾರ್ಣಿಕ ನುಡಿಯುವ ಗೊರವಯ್ಯ ಮಾಲತೇಶ ಮಲ್ಲಪ್ಪ ಕಾರ್ಣಿಕ ಅವರಿಗೆ ಕಾರ್ಮಿಕ ಸಚಿವ ಪರಮೇಶ್ವರನಾಯ್ಕ ನೆರವು ಘೋಷಣೆ ಮಾಡಿದ್ದಾರೆ. ಗೊರವಯ್ಯ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ 20 ವರ್ಷಗಳಿಂದ ಕಾರ್ಣಿಕ ನುಡಿಯುವ ಧಾರ್ಮಿಕ ಆಚರಣೆ ನಡೆಸಿಕೊಂಡು ಬಂದಿದ್ದಾರೆ. 10-15 ದಿನಗಳಿಂದ ಪಾರ್ಶ್ವವಾಯು ಹಾಗೂ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿರುವ ಗೊರವಯ್ಯನ ಕುಟುಂಬಕ್ಕೆ ಇದೀಗ ಸಚಿವರಿಂದ ನೆರವಿನ ಭರವಸೆ ಸಿಕ್ಕಿದೆ. ಗುರುವಾರ ಮೈಲಾರದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಚಿವ ಪರಮೇಶ್ವರನಾಯ್ಕ, ಆಸ್ಪತ್ರೆ ಸೇರಿರುವ ಗೊರವಯ್ಯನಿಗೆ ದೇವಸ್ಥಾನ ಆಡಳಿತ ಮಂಡಳಿಯ ಕಾಯ್ದಿಟ್ಟ ನಿಧಿಯಲ್ಲಿ 25 ಸಾವಿರ ನೀಡುವಂತೆ ಆದೇಶಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.