ಹಂಪಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಿದ್ದು ಶ್ಲಾಘನೀಯ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಆ. 23
ಹಂಪಿ ಸಾಲು ಮಂಟಪದಲ್ಲಿ ವಾಸವಾಗಿರುವ ಜನರನ್ನು ತೆರವುಗೊಳಿಸಿ ಹಂಪಿ ಸಮೀಪದ ಕಡ್ಡಿರಾಂಪುರದ ಬಳಿ ಪುನರ್ವಸತಿ ಕಲ್ಪಿಸಲು ಶ್ರಮಿಸಿದ ಶಾಸಕ ಆನಂದ್ ಸಿಂಗ್ ಹಾಗೂ ಅಧಿಕಾರಿಗಳ ಕಾರ್ಯ ಶ್ಲಾಘನೀಯ ಎಂದು ಸ್ಥಳೀಯ ಬಿಜೆಪಿ ಮುಖಂಡ ಸಂತೋಷ ಸಿಂಗ್ ಹೇಳಿದರು.
ಹಂಪಿ ಸಮೀಪದ ಕಡ್ಡಿರಾಂಪುರ ಸಮೀಪದಲ್ಲಿ ಹಂಪಿ ನಿವಾಸಿಗಳಿಗೆ ಪುನರ್ವಸತಿ ಕೇಂದ್ರಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಹಂಪಿಯ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸುವ ಭೂಮಿಪೂಜೆಗೆ ಶಾಸಕ ಬಿ.ಎಸ್. ಆನಂದ್ ಸಿಂಗ್ ಅವರು ಕಾರ್ಯಕ್ರಮಕ್ಕೆ ಬರಬೇಕಿತ್ತು. ಆದರೆ, ಅವರಿಗೆ ತುರ್ತು ಕೆಲಸವಿರುವುದರಿಂದ ಬೆಂಗಳೂರಲ್ಲಿದ್ದಾರೆ. ಹಂಪಿ ಜನರ ಪುನರ್ವಸತಿಗಾಗಿ ಶಾಸಕ ಆನಂದ್ ಸಿಂಗ್ ಹಾಗೂ ಅಧಿಕಾರಿಗಳು ಸಾಕಷ್ಟು ಹೋರಾಟ ನಡೆಸಿದ್ದರಿಂದ ಹಂಪಿ ಜನರಿಗೆ ಒಂದು ಸುವ್ಯವಸ್ಥಿತವಾದ ವಸತಿ ಸೌಲಭ್ಯವನ್ನು ದೊರಕಿಸಿಕೊಟ್ಟಿದ್ದಾರೆ. 378 ಜನರಿಗೆ ಹಂಪಿ ಸಮೀಪದ ಕಡ್ಡಿರಾಂಪುರ ಸಮೀಪದಲ್ಲಿ ಪುನರ್ವಸತಿಗಾಗಿ ನಿವೇಶನ ದೊರಕಿಸಿಕೊಡಲಾಗಿದೆ ಎಂದು ಹೇಳಿದರು.
ಹಂಪಿ ಪುನರ್ವಸತಿ ಸಮಿತಿಯ ಅಧ್ಯಕ್ಷ ವಿರೂಪಾಕ್ಷಿ ಮಾತನಾಡಿ, ಶಾಸಕ ಆನಂದ್ ಸಿಂಗ್ ಅವರ ಅವಿರತ ಪ್ರಯತ್ನದಿಂದಾಗಿ ಹಂಪಿ ಜನರಿಗೆ ಪುನರ್ವಸತಿ ಸಾಧ್ಯವಾಗಿದೆ. ಶಾಸಕ ಆನಂದ್ ಸಿಂಗ್ ಅವರಿಗೆ ಹಂಪಿ ಜನರು ಸದಾ ಋಣಿಯಾಗಿದ್ದಾರೆ ಎಂದು ಹೇಳಿದರು.
ಹಂಪಿಯ ರಾಮಲಿಂಗಸ್ವಾಮಿ ಸಮಾರಂಭದ ಸಾನ್ನಿಧ್ಯ ವಹಿಸಿದ್ದರು. ತಾಪಂ ಸದಸ್ಯ ಭೀಮಾನಾಯ್ಕ, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಹಾಗೂ ಹಂಪಿ ಗ್ರಾಪಂ ಮಾಜಿ ಉಪಾಧ್ಯಕ್ಷ ಗೋವಿಂದರಾಜ್, ಸ್ಥಳೀಯ ಮುಖಂಡರಾದ ಆನಂದ್, ಷಣ್ಮುಖ ಸೇರಿದಂತೆ ಗ್ರಾಪಂ ಸದಸ್ಯರು, ಹಂಪಿಯ ಮುಖಂಡರು ಇದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

