ಸುದ್ದಿ ಸಂಕ್ಷೇಪ
ನಾಳೆ ಪ್ರತಿಭಟನೆ
ಬಳ್ಳಾರಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ಆ. 25ರಿಂದ ಸೆ. 13ರ ವೆರೆಗೆ ಸಾಧು ಸಂತರು ಆಯೋಜಿಸಿದ್ದ 84 ಕೋಸಿ ಪರಿಕ್ರಮ ಪಾದಯಾತ್ರೆಗೆ ಉತ್ತರಪ್ರದೇಶ ಸರ್ಕಾರ ನಿಷೇಧ ಹೇರಿರುವ ಕ್ರಮವನ್ನು ಖಂಡಿಸಿ, ವಿಶ್ವಹಿಂದೂ ಪರಿಷತ್ ಜಿಲ್ಲಾ ಘಟಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆ. 26ರಂದು ಧರಣಿ ಹಮ್ಮಿಕೊಂಡಿದೆ ಎಂದು ಜಿಲ್ಲಾ ಕಾರ್ಯದರ್ಶಿ ಬಿ. ಬಸವರಾಜ್ ತಿಳಿಸಿದ್ದಾರೆ.
ಚಿನ್ನಾಭರಣ ಕಳವು
ಬಳ್ಳಾರಿ: ಮನೆಯ ಬೀಗ ಮುರಿದು ಒಳಗಿ ನುಗ್ಗಿದ ಕಳ್ಳರು ರು. 71 ಸಾವಿರ ಮೌಲ್ಯದ ಬಂಗಾರದ ಆಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಕುವೆಂಪು ನಗರದಲ್ಲಿ ನಡೆದಿದೆ. ಕುವೆಂಪು ನಗರದ ಕೆ. ರಾಮಚಂದ್ರಪ್ಪ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾಗ ಮನೆಯಲ್ಲಿದ್ದ ಕಬ್ಬಿಣದ ಗ್ರಿಲ್ ಬಾಗಿಲಿನ ಬೀಗದ ಪತ್ತವನ್ನು ಹಾಗೂ ಕಟ್ಟಿಗೆಯ ಬಾಗಿಲಿನ ಕೊಂಡಿಯ ಸ್ಕ್ರೂಗಳನ್ನು ತೆಗೆದು ಜಖಂಗೊಳಿಸಿ ಕಳ್ಳರು ಮನೆಯೊಳಗೆ ಪ್ರವೇಶಿಸಿ ಕಳ್ಳತನ ಮಾಡಿದ್ದಾರೆ. ಕೌಲ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮದ್ಯ ವಶ: ಮೂವರ ಬಂಧನ
ಬಳ್ಳಾರಿ: ಸಿಂಧಿಗೇರಿಯ ಸಾರ್ವಜನಿಕ ಸ್ಥಳದಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿ, ರು. 19,884 ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಬಳ್ಳಾರಿ ಗ್ರಾಮೀಣ ಡಿವೈಎಸ್ಪಿ ರುದ್ರಮುನಿ ಮಾರ್ಗದರ್ಶದಲ್ಲಿ ಪ್ರೊಬೆಷನರಿ ಡಿಎಸ್ಪಿ ನೇತೃತ್ವದಲ್ಲಿ ದಾಳಿ ಮಾಡಿರುವ ಪೊಲೀಸರು ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ನಾಯಕರ ಕೃಷ್ಣ, ವಿಜಯಕುಮಾರ್, ನಾಯಕರ ಮಲ್ಲಯ್ಯ ಅವರನ್ನು ಬಂಧಿಸಿ, ಅವರಿಂದ ರು. 19,884 ಮೌಲ್ಯದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡು, ದೂರು ದಾಖಲಿಸಿಕೊಂಡಿದ್ದಾರೆ.
ಜೂಜಾಟ ಅಡ್ಡೆ ಮೇಲೆ ದಾಳಿ: ರು. 10 ಸಾವಿರ ವಶ
ಬಳ್ಳಾರಿ: ಮಟಕಾ ಜೂಜಾಟ ಅಡ್ಡೆಯ ಮೇಲೆ ದಾಳಿ ಮಾಡಿ, ಆರೋಪಿಯಿಂದ ರು. 10,410 ಗಳನ್ನು ವಶಪಡಿಸಿಕೊಂಡಿರುವ ಘಟನೆ ನೆಲ್ಲೂಡಿ ಕೊಟ್ಟಾಲ ಗ್ರಾಮದಲ್ಲಿ ನಡೆದಿದೆ. ಪ್ರೊಬೆಷನರಿ ಡಿವೈಎಸ್ಪಿ ದಾಳಿ ಮಾಡಿದ್ದಾರೆ. ಆರೋಪಿ ಹಸೀನಾ ಅವರಿಂದ ರು. 10,410 ವಶಪಡಿಸಿಕೊಂಡಿದ್ದಾರೆ. ಕುರುಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

