ಬಳ್ಳಾರಿ

ಮುಂಬೈ ಗ್ಯಾಂಗ್‌ರೇಪ್: ಎಐಡಿವೈಒ ಪ್ರತಿಭಟನೆ

Published On :

ಬಳ್ಳಾರಿ: ಮುಂಬೈ ಮಹಾನಗರಿಯಲ್ಲಿ ಆಂಗ್ಲ ಪತ್ರಿಕೆಯ ಛಾಯಾಗ್ರಾಹಕಿ ಮೇಲೆ ದುಷ್ಕರ್ಮಿಗಳು ನಡೆಸಿದ ಅತ್ಯಾಚಾರ ಪ್ರಕರಣ ಖಂಡಿಸಿ ಎಐಡಿವೈಒ ಕಾರ್ಯಕರ್ತರು, ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಎಐಡಿವೈಒ ಸಂಘಟನೆಯ ನೂರಾರು ಕಾರ್ಯಕರ್ತರು ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಕೆಲಕಾಲ ರಸ್ತೆತಡೆ ನಡೆಸಿ, ನಂತರ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪತ್ರಕರ್ತೆಯ ಮೇಲೆ ದೌರ್ಜನ್ಯ, ಅತ್ಯಾಚಾರ ನಡೆಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು. ಮಾಧ್ಯಮ ಪ್ರತಿನಿಧಿಗಳಿಗೆ ಅದರಲ್ಲಿಯೂ ಮಹಿಳಾ ಪತ್ರಕರ್ತರಿಗೆ ಸೂಕ್ತ ರಕ್ಷಣೆ, ಭದ್ರತೆ ಒದಗಿಸಬೇಕು. ದೇಶದಲ್ಲಿ ಇತ್ತೀಚೆಗೆ ಮಹಿಳೆಯರ ಮೇಲೆ ಅತ್ಯಾಚಾರ, ಹಲ್ಲೆ, ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಇವುಗಳನ್ನು ತಡೆಗಟ್ಟಲು ಸೂಕ್ತ ಕಾಯ್ದೆ-ಕಾನೂನು ರೂಪಿಸಬೇಕು ಹಾಗೂ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಗಂಭೀರವಾಗಿ ಪರಿಗಣಿಸಲಿ
ಕೇಂದ್ರ ಸರ್ಕಾರ ಮುಂಬೈನಲ್ಲಿ ಜರುಗಿರುವ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಐಡಿವೈಒ ರಾಜ್ಯ ಕಾರ್ಯದರ್ಶಿ ಡಾ.ಜಿ.ಎಸ್. ಕುಮಾರ್, ಜಿಲ್ಲಾಧ್ಯಕ್ಷ ರಾಧಾಕೃಷ್ಣ ಉಪಾಧ್ಯ, ಶಶಿಧರ ಕಳಿವೆಹಳ್ಳಿ ಸೇರಿದಂತೆ ಎಸ್‌ಯುಸಿಐ ಮುಖಂಡರಾದ ಕೆ. ಸೋಮಶೇಖರ್, ಚಂದ್ರಶೇಖರ್, ರಂಗಯ್ಯ, ಉಮೇಶ್, ಗೋವಿಂದ್ ಹಾಗೂ ಇತರರು ಇದ್ದರು. ನಂತರ ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.