ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಿಂದ ಮುನ್ನಡೆಯಿರಿ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಆ. 25
ಅಂಗವಿಕಲರೆಂಬ ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಅಧ್ಯಕ್ಷೆ ಕೆ. ನೀಲಾ ಹೇಳಿದರು.
ನಗರದ ರೋಟರಿ ಸಭಾಂಗಣದಲ್ಲಿ ಶನಿವಾರ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಕೇಂದ್ರ, ರೋಟರಿ ಕ್ಲಬ್, ಇನ್ನರ್ ವ್ಹೀಲ್ ಕ್ಲಬ್, ವಾತ್ಸಲ್ಯ ಟ್ರಸ್ಟ್ ಹಾಗೂ ಕರ್ನಾಟಕ ರಾಜ್ಯ ಅಂಗವಿಕಲರ ಮತ್ತು ಪಾಲಕರ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ನಡೆದ ಅಂಗವಿಕಲರ ಚೇತನ ಮಹಿಳಾ ಸಮಸ್ಯೆಗಳು ಮತ್ತು ಪರಿಹಾರ ಕುರಿತು ಜಿಲ್ಲಾ ಮಟ್ಟದ ಮಹಿಳಾ ಅಂಗವಿಕಲರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಅಂಗವಿಕಲ ಮಹಿಳೆಯರು ಸ್ವಾವಲಂಬನೆಯಿಂದ ಜೀವನ ಸಾಗಿಸುವ ಯೋಜನೆಗಳನ್ನು ರೂಪಿಸುವ ಮೂಲಕ ಅಂಗವಿಕರಿಗೆ ಸಮಾಜದಲ್ಲಿ ಉತ್ತಮ ಸ್ಥಾನಮಾನ ಕಲ್ಪಿಸಿಕೊಡಬೇಕು. ಅಂಗವಿಕಲರಿಗೆ ವಿಶೇಷ ಯೋಜನೆಗಳನ್ನು ರೂಪಿಸುವ ಮೂಲಕ ಆರ್ಥಿಕ ಅಭಿವೃದ್ಧಿಗೆ ಪ್ರೇರೇಪಿಸಬೇಕು. ಅಂಗವಿಕಲರಿಗೆ ನ್ಯಾಯಯುತವಾಗಿ ಸರ್ಕಾರದಿಂದ ಸಿಗಬೇಕಾದ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದರು.
ಉಗ್ರ ಶಿಕ್ಷೆಯಾಗಲಿ
ಅಂಗವಿಕಲ ಮಹಿಳೆಯರು ಲಿಂಗ ತಾರತಮ್ಯ, ಅಂಗವಿಕಲತೆ ಸೇರಿದಂತೆ ಇತರೆ ಸಮಸ್ಯೆಗಳಿಂದ ಬಳಲುವಂತಾಗಿದೆ. ಸಮಾಜದಲ್ಲಿ ನಿತ್ಯವೂ ಮಹಿಳೆಯರ ಮೇಲೆ ಅನೇಕ ಅತ್ಯಾಚಾರಗಳು, ಹೆಣ್ಣು ಭ್ರೂಣ ಹತ್ಯೆ ಸೇರಿದಂತೆ ಇತರೆ ಘಟನೆಗಳು ಹೆಚ್ಚುತ್ತಿವೆ. ಸಮಾಜದಲ್ಲಿ ಪುರುಷರಗಿಂತ ಮೂರು ಪಟ್ಟು ದುಡಿಯುವ ಮಹಿಳೆಯನ್ನು ದುರ್ಬಲವಾಗಿ ನೋಡುವ ದೃಷ್ಟಿಕೋನ ಬದಲಾಗಬೇಕು. ಅಂಗವಿಕಲ ಮಹಿಳೆ ಮೇಲೆ ನಡೆಯುವ ಅತ್ಯಾಚಾರ, ದೌರ್ಜನ್ಯ ನಡೆಸುವವರಿಗೆ ತಕ್ಷಣ ಉಗ್ರ ಶಿಕ್ಷೆ ನೀಡಬೇಕು ಎಂದು ತಿಳಿಸಿದರು.
ರೋಟರಿ ಕ್ಲಬ್ ಅಧ್ಯಕ್ಷ ಎಚ್. ಶ್ರೀನಿವಾಸರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿ ವೈ. ಪೂರ್ಣಿಮಾ, ಇನ್ನರ್ ವ್ಹೀಲ್ ಅಧ್ಯಕ್ಷೆ ಡಾ. ಮಾಧವಿ ದೇವಿ, ಕಾರ್ಯದರ್ಶಿ ಮೇಘನಾ, ಹಂಪಿ ಕನ್ನಡ ವಿವಿ ಮಹಿಳಾ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಡಾ. ಶಿವಾನಂದ ವಿರಕ್ತಮಠ, ವಾತ್ಸಲ್ಯ ಟ್ರಸ್ಟ್ ಯೋಜನಾ ನಿರ್ದೇಶಕ ಸುರೇಶ್ ಕುಷ್ಟಗಿ ಭಾಗವಹಿಸಿದ್ದರು.
ಡಾ. ಶಿವಾನಂದ ವಿರಕ್ತಮಠ ಸ್ವಾಗತಿಸಿ, ಸುರೇಶ್ ಕುಷ್ಟಗಿ ಪ್ರಾಸ್ತಾವಿಕ ಮಾತನಾಡಿದರು. ರೋಟರಿ ಕ್ಲಬ್ ಕಾರ್ಯದರ್ಶಿ ಕೆ. ಸೈಯದ್ ಮಹಮದ್ ವಂದಿಸಿದರು. ರೋಟರಿ ಕ್ಲಬ್ನ ಎನ್. ಎಂ. ಅಗ್ನಿಹೋತ್ರಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

