ಬಳ್ಳಾರಿ

ಯಾತ್ರಿ ನಿವಾಸಕ್ಕೆ ಹಣ ಮಂಜೂರು: ಸಂತಸ

Published On :

ಹೊಸಪೇಟೆ: ಶಾಸಕ ಆನಂದ್ ಸಿಂಗ್ ಪ್ರವಾಸೋದ್ಯಮ ಸಚಿವರಾಗಿದ್ದಾಗ ಯಾತ್ರಿ ನಿವಾಸಕ್ಕೆ ಮಂಜೂರಾತಿ ಪಡೆದಿದ್ದು, ಈಗ ಹಣ ಬಿಡುಗಡೆಯಾಗಿ ಕಾಮಗಾರಿ ಆರಂಭಗೊಳ್ಳುತ್ತಿರುವುದು ಸಂತಸದ ಸಂಗತಿ ಎಂದು ಸ್ಥಳೀಯ ಬಿಜೆಪಿ ಮುಖಂಡ ಅಶೋಕ್ ಜೀರೆ ಹೇಳಿದರು.
ನಗರದ ವಡಕರಾಯ ದೇವಸ್ಥಾನದ ಬಳಿ ನಡೆದ ಯಾತ್ರಿ ನಿವಾಸದ ಭೂಮಿಪೂಜೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿ, ಆನಂದ್ ಸಿಂಗ್ ಸಚಿವರಾಗಿ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ. ಮತ್ತೆ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಗೊಂಡಿರುವುದು ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಹಿಂದಿನ ಆಡಳಿತಾವಧಿಯಲ್ಲಿ ಅರ್ಧಕ್ಕೆ ನಿಂತಿರುವ ಅಭಿವೃದ್ಧಿ ಕಾರ್ಯಗಳು ಈಗ ಪೂರ್ಣಗೊಳ್ಳುವ ಭರವಸೆ ಇದೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಪಡಿಸುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡಲು ಶಾಸಕ ಆನಂದ್ ಸಿಂಗ್ ಮುಂದಾಗಿದ್ದಾರೆ ಎಂದು ತಿಳಿಸಿದರು.
ಸಂದೀಪ್ ಸಿಂಗ್ ಭೂಮಿಪೂಜೆ ನೆರವೇರಿಸಿದರು. ಅಪ್ಪಾರಾವ್, ಗುಜ್ಜಲ ಹನುಮೇಶ್, ಅಪ್ಪಣ್ಣ, ಭೂಸೇನಾ ನಿಗಮದ ಅಧಿಕಾರಿ ವೈಕುಂಠಪತಿ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.