ಬಳ್ಳಾರಿ

ಶಿಕ್ಷಕರ ದಿನ ಅದ್ಧೂರಿ ಆಚರಣೆಗೆ ನಿರ್ಧಾರ

Published On :

ಹಗರಿಬೊಮ್ಮನಹಳ್ಳಿ: ಈ ಸಾಲಿನ ಶಿಕ್ಷಕರ ದಿನವನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲು ಶನಿವಾರ ಹಗರಿಬೊಮ್ಮನಹಳ್ಳಿ ತಾಪಂ ಮಹಾತ್ಮಾ ಗಾಂಧಿ ಸಭಾಂಗಣದಲ್ಲಿ ಜರುಗಿದ ಶಿಕ್ಷಕರ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಶಿಕ್ಷಕರ ದಿನಾಚರಣೆ ಸಮಿತಿ ಅಧ್ಯಕ್ಷರು ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಿ. ಗೋಪ್ಯಾನಾಯ್ಕ  ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮ ಜಿಲ್ಲೆಗೆ ಮಾದರಿಯಾಗುವ ರೀತಿಯಲ್ಲಿ ಆಚರಿಸಲು ಒಮ್ಮತದಿಂದ ನಿರ್ಧರಿಸಲಾಯಿತು.
ಸೆಪ್ಟೆಂಬರ್ ಐದರಂದು ತಾಲೂಕು ಕಚೇರಿ ಆವರಣದಿಂದ ಡಾ. ರಾಧಾಕೃಷ್ಣನ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ಸಮಾರಂಭ ಜರುಗುವ ಪಟ್ಟಣದ ಗುರುಭವನದವರೆಗೂ ನಡೆಸಲು, ನಿವೃತ್ತ ಹಾಗೂ ಉತ್ತಮ ಶಿಕ್ಷಕರಿಗೆ ಸನ್ಮಾನಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಪೂರ್ಯನಾಯ್ಕ ಅಧ್ಯಕ್ಷತೆಯಲ್ಲಿ ಸ್ಥಳಿಯ ಶಾಸಕ ಎಸ್. ಭೀಮಾನಾಯ್ಕ ದಿನಾಚರಣೆಯನ್ನು ಉದ್ಘಾಟಿಸಲಿದ್ದಾರೆ. ಜಿಪಂ, ತಾಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ಸಂಘ, ಸಂಸ್ಥೆಯ ಪದಾಧಿಕಾರಿಗಳನ್ನು ಮುಖ್ಯ ಅತಿಥಿಯಾಗಿ, ಉಪನ್ಯಾಸ ನೀಡಲು ಹೊಸಪೇಟೆ ವಿಜಯನಗರ ಕಾಲೇಜಿನ ಪ್ರಾಧ್ಯಾಪಕರಾದ ಶಿವಾನಂದ ಅವರನ್ನು ಆಹ್ವಾನಿಸಲು ಸಭೆ ತಾಪಂ ಇಒ, ಬಿಇಒ ಅವರಿಗೆ ಅಧಿಕಾರ ನೀಡಿತು.
ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಪೂರ್ಯನಾಯ್ಕ, ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ, ತಾಪಂ ಉಪಾಧ್ಯಕ್ಷೆ ನಾಗರತ್ನಾ ವೆಂಕಟೇಶ್, ಸದಸ್ಯ ಉಪ್ಪಾರಬಾಲಪ್ಪ, ಜಿಪಂ ಮಾಜಿ ಸದಸ್ಯ ಅಕ್ಕಿತೋಟೇಶ್, ಜೆಡಿಎಸ್ ಅಧ್ಯಕ್ಷ  ವೈ. ಮಲ್ಲಿಕಾರ್ಜುನ, ಮುಖಂಡ ಸಿನಿಮಾ ಮಂಜಣ್ಣ, ತಾಪಂ ಮಾಜಿ ಸದಸ್ಯ ಆರ್. ವೆಂಕಟೇಶ್, ಸಾಹಿತಿ ಹಿ.ಮ. ಗುರುಬಸವರಾಜ, ಬಿಇಒ ಕೆ. ರಾಮನಗೌಡ, ಕ್ಷೇತ್ರಸಮನ್ವಾಧಿಕಾರಿ ತೇನ್‌ಸಿಂಗನಾಯ್ಕ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಂ. ಜ್ಞಾನೇಶ್ವರ, ಸದಸ್ಯ ಶಂಭುಲಿಂಗಪ್ಪ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಜಿ. ಪ್ರಭುಗೌಡ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೊಟ್ರದೇವರು, ಬಡಿ ್ತಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಗದೀಶ್, ಶಿಕ್ಷಕರ ಸಂಘದ ಕೊಟ್ರಗೌಡ, ರಂಗನಾಥ ಹವಾಲ್ದಾರ್, ಬಿ. ಕೊಟ್ರಪ್ಪ ಇತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.