ಸುದ್ದಿ ಸಂಕ್ಷೇಪ
ಇಂದು ವಾರ್ಷಿಕೋತ್ಸವ
ಬಳ್ಳಾರಿ: ಬಳ್ಳಾರಿಯ ಮದರ್ ಥೆರೇಸಾ ಸ್ಫೂರ್ತಿ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮ ಆ. 26ರಂದು ಬೆಳಗ್ಗೆ 10 ಗಂಟೆಗೆ ನಗರದ ರಾಘವ ಕಲಾಮಂದಿರದಲ್ಲಿ ಜರುಗಲಿದೆ. ಪ್ರಧಾನ ಜಿಲ್ಲಾ ನ್ಯಾಯಾಧೀಶ ಡಿ. ವಿಶ್ವೇಶ್ವರ ಭಟ್ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಚ್. ಶಾಂತಾ, 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಸ್. ಪಾಟೀಲ್ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ಡಾ. ಲಲಿತಾ ರಮಣ, ಎ.ಜಿ. ಶಿವಕುಮಾರ, ಬಿ.ಪುರುಷೋತ್ತಮ, ವಿಕಾಸ ಜೈನ್ ಭಾಗವಹಿಸುವರು. ಬಳ್ಳಾರಿಯ ಸ್ವಾಮಿ ವಿವೇಕಾನಂದ ಚಾರಿಟೆಬಲ್ ಟ್ರಸ್ಟ್ನ ಗೋಪಾಲ ರೆಡ್ಡಿ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಅಂಗವಿಕಲ ಮಕ್ಕಳಿಗೆ ಸೈಕಲ್ ವಿತರಣೆ, ಅನುಗ್ರಹ ಸಂಸ್ಥೆಯ ಮಕ್ಕಳಿಗೆ ಆಟಿಕೆಗಳ ವಿತರಣೆ, ಮಕ್ಕಳಿಗೆ ಫಿಜಿಯೋಥೆರಫಿ ಸಾಮಗ್ರಿಗಳ ವಿತರಣೆ, ಮಕ್ಕಳಿಗೆ ಆರೋಗ್ಯ ತಪಾಸಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.
29ರಂದು ಸಂದರ್ಶನ
ಬಳ್ಳಾರಿ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ (ಗ್ರಾಮಾಂತರ) ಕಚೇರಿಯು 2013-14ನೇ ಸಾಲಿನ ಉದ್ಯೋಗಿನಿ ಸಾಲ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಆ. 29ರಂದು ಬೆಳಗ್ಗೆ 10-30ಕ್ಕೆ ಇದೇ ಕಚೇರಿಯಲ್ಲಿ ಸಂದರ್ಶನ ನಡೆಸಲಿದೆ. ಆಸಕ್ತ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.
29ರಂದು ಕ್ರೀಡಾಕೂಟ
ಬಳ್ಳಾರಿ: ಭಾರತದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ಚಂದ್ ಅವರ ಜಯಂತಿ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಬಳ್ಳಾರಿ ತಾಲೂಕು ಮಟ್ಟದ ದಸರಾ ಮತ್ತು ಮಹಿಳಾ ಕ್ರೀಡಾಕೂಟವನ್ನು ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಆ. 29ರಂದು ಹಮ್ಮಿಕೊಳ್ಳಲಾಗಿದೆ ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ತಿಳಿಸಿದ್ದಾರೆ. ಆಸಕ್ತರು ಆಗಸ್ಟ್ 26ರೊಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಪ್ರವೇಶ ಪಡೆಯಬೇಕು. ಈ ಕ್ರೀಡಾಕೂಟದಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ಅಥ್ಲೆಟಿಕ್ಸ್, ಖೋಖೋ, ಕಬಡ್ಡಿ, ವಾಲಿಬಾಲ್, ಬಾಸ್ಕೆಟ್ ಬಾಲ್, ಫುಟ್ಬಾಲ್, ಶಟಲ್ ಬ್ಯಾಟ್ ಮಿಂಟನ್, ಹ್ಯಾಂಡ್ಬಾಲ್, ಥ್ರೋಬಾಲ್, ಹಾಕಿ, ಟೇಬಲ್ ಟೆನ್ನಿಸ್ ಈಜು ಮತ್ತಿತರ ಕ್ರೀಡೆಗಳಲ್ಲಿ ಸ್ಪರ್ಧೆ ಏರ್ಪಡಿಸಲಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸಿದವರಿಗೆ ಇಲಾಖೆಯಿಂದ ಯಾವುದೇ ಪ್ರವಾಸ ಭತ್ಯೆ ನೀಡಲಾಗುವುದಿಲ್ಲ. ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿಚ್ಛಿಸುವವರು ಹೆಚ್ಚಿನ ವಿವರಗಳಿಗಾಗಿ 08392-200441ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

