ಪೋಟೋ ಜರ್ನಲಿಸ್ಟ್ ರೇಪ್: ಮೀಡಿಯಾ ಕ್ಲಬ್ ಖಂಡನೆ
ಕೊಪ್ಪಳ: ಮುಂಬೈನ ಪೋಟೋ ಜರ್ನಲಿಸ್ಟ್ ಮೇಲೆ ಐವರು ಅತ್ಯಾಚಾರ ಮಾಡಿದ್ದನ್ನು ಕೊಪ್ಪಳ ಮೀಡಿಯಾ ಕ್ಲಬ್ ಖಂಡಿಸಿದ್ದು, ಆರೋಪಿಗಳಿಗೆ ಉಗ್ರ ಶಿಕ್ಷೆ ನೀಡಲು ಒತ್ತಾಯಿಸಿ ಡಿಸಿ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು. ಜನದಟ್ಟಣೆಯ ಮುಂಬೈ ಮಹಾನಗರದಲ್ಲಿ ಮಹಿಳೆಯ ಮೇಲೆಯೇ ಅತ್ಯಾಚಾರ ನಡೆಸಿದ್ದು, ತೀವ್ರ ಖಂಡನೀಯ. ಇನ್ನು ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಆಕೆಯ ಆತ್ಮಹತ್ಯೆಯಿಂದ ಮುಚ್ಚಿಹೋಯಿತು. ವಿದೇಶಿ ಹೆಣ್ಣು ಮಕ್ಕಳ ಮೇಲೆಯೂ ಸಾಕಷ್ಟು ಅತ್ಯಾಚಾರ ನಡೆದಿದ್ದರಿಂದ ಭಾರತದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲದಂತಾಗಿದೆ. ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆ ನೀಡುವ ಹೊಸ ಕಾಯ್ದೆ ರೂಪಿಸಬೇಕೆಂದು ಆಗ್ರಹಿಸಿ, ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸುವ ಸಂದರ್ಭದಲ್ಲಿ ಪತ್ರಕರ್ತರು ಕಪ್ಪು ಪಟ್ಟಿ ಧರಿಸಿದ್ದರು. ವಿಠ್ಠಪ್ಪ ಗೋರಂಟ್ಲಿ ಮತ್ತಿತರರು ಮಾತನಾಡಿದರು. ಈ ಸಂದರ್ಭದಲ್ಲಿ ಪತ್ರಕರ್ತರು, ಛಾಯಾಗ್ರಾಹಕರು ಇದ್ದರು.
ಇಂದು ಪಲ್ಲಕ್ಕಿ ಮಹೋತ್ಸವ
ಕೊಪ್ಪಳ: ಕುಕನೂರು ಸಮೀಪದ ಸಿದ್ನೆಕೊಪ್ಪದ ಆರಾಧ್ಯದೇವ ಶ್ರೀ ಸಿದ್ಧಲಿಂಗೇಶ್ವರ ದೇವರಿಗೆ ಶ್ರಾವಣ ಮಾಸದ ಪ್ರತಿ ದಿನವೂ ರುದ್ರಾಭಿಷೇಕ ಮತ್ತು ಮಂಗಳಾರತಿ ಕಾರ್ಯಗಳು ಜರುಗುತ್ತಿವೆ. ಆ. 27ರಂದು ಅರುಣೋದಯದ ಪೂರ್ವದಲ್ಲಿ ಶ್ರೀ ಸಿದ್ಧಲಿಂಗೇಶ್ವರ ದೇವರನ್ನು ಕರೆತರುವುದು ಮತ್ತು ಪಲ್ಲಕ್ಕಿ ಮಹೋತ್ಸವ ಜರುಗುವುದು. ವಿಶೇಷ ರುದ್ರಾಭಿಷೇಕ ಹಾಗೂ ಮಂಗಳಾರತಿ ಕಾರ್ಯಕ್ರಮಗಳು ನಡೆದು ಮಧ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಗ್ರಾಮದ ಮುಖಂಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
29ರಂದು ವೇಷಭೂಷಣ ಸ್ಪರ್ಧೆ
ಗಂಗಾವತಿ: ನಗರದ ಶ್ರೀ ಸತ್ಯನಾರಾಯಣ ಪೇಟೆಯಲ್ಲಿರುವ ಸತ್ಯನಾರಾಯಣ ದೇವಸ್ಥಾನದಲ್ಲಿ ಆ. 29ರಂದು ಶ್ರೀ ಕೃಷ್ಣಾಷ್ಟಮಿ ನಿಮಿತ್ತ ಚಿಕ್ಕಮಕ್ಕಳಿಗಾಗಿ ರಾಧಾ-ಕೃಷ್ಣರ ವೇಷಭೂಷಣ ಸ್ಫರ್ಧೆ ಏರ್ಪಡಿಸಲಾಗಿದೆ. ಸಂಜೆ 5ರಿಂದ ಕಾರ್ಯಕ್ರಮ ಜರುಗಲಿದ್ದು, 7 ವರ್ಷದ ಬಾಲಕ ಬಾಲಕಿಯರು ಭಾಗವಹಿಸಬಹುದಾಗಿದೆ. ನಂತರ ಮೊಸರು ಗಡಿಗೆ ಒಡೆಯುವ ಸ್ಪರ್ಧೆ, ಕಂಬ ಹತ್ತುವ ಸ್ಪರ್ಧೆ ಹಾಗೂ ಸ್ತುತಿ ಹೇರೂರು ಅವರಿಂದ ಭರತ ನಾಟ್ಯ ಪ್ರದರ್ಶನ ಜರುಗಲಿದೆ. ಹೆಚ್ಚಿನ ಮಾಹಿತಿಗೆ ಮೊ. 9449744127ಗೆ ಸಂಪರ್ಕಿಸುವಂತೆ ಕೋರಿದ್ದಾರೆ.
ಗೃಹಿಣಿ ನೇಣಿಗೆ ಶರಣು
ಮುನಿರಾಬಾದ್: ಹೊಟ್ಟೆ ನೋವು ತಾಳಲಾರದೇ ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ಹುಲಿಗಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತಳನ್ನು ಸುನೀತಾ (22) ಎಂದು ಗುರುತಿಸಲಾಗಿದ್ದು, ಈಕೆ ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಸುನೀತಾಮಾನಸಿಕವಾಗಿ ಅಸ್ವಸ್ಥೆಯಾಗಿದ್ದು, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

