ಬಳ್ಳಾರಿ

ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿ:ಕೃಷ್ಣ ನಾಯ್ಕ

Published On :

ಹಗರಿಬೊಮ್ಮನಹಳ್ಳಿ: ಕಲಿಕೆಯ ಜೊತೆಯಲ್ಲಿಯೇ ಕ್ರೀಡೆಗಳಲ್ಲಿ ಭಾಗವಹಿಸುವುದರ ಮೂಲಕ ಉತ್ತಮ ಆಟಗಾರರಾಗಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ವಿಷಯ ಪರಿವೀಕ್ಷಕರಾದ ಕೃಷ್ಣನಾಯ್ಕ ಕರೆ ನೀಡಿದ್ದಾರೆ.
ಹಗರಿಬೊಮ್ಮನಹಳ್ಳಿ ಪಟ್ಟಣದ ರಾಮನಗರದ ಗಂ.ಭೀ. ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ  ನಡೆದ ಹಗರಿಬೊಮ್ಮನಹಳ್ಳಿ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಗೆಲುವಿನಷ್ಟೆ ಸೋಲನ್ನು ಕೂಡ ನಾವು ಸಮಾನವಾಗಿ ಸ್ವೀಕರಿಸುವ ಗುಣವನ್ನು ಶಾಲಾ ಹಂತದಿಂದಲೇ ಮೈಗೂಡಿಸಿಕೊಂಡಾಗ ಮಾತ್ರವೇ ನಾವೇ ಪ್ರಬುದ್ಧರಾಗಿ ಬೆಳೆಯಲು ಸಾಧ್ಯವಿದೆ. ಭೇದ-ಭಾವವಿಲ್ಲದೆ ಎಲ್ಲರೂ ಕ್ರೀಡೆಗಳಲ್ಲಿ ಭಾಗವಹಿಸಿ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಬೆಳಸಿಕೊಳ್ಳುವ ಮೂಲಕ ಸದೃಢ ಸಮಾಜವನ್ನು ಕಟ್ಟಲು ಸಿದ್ಧರಾಗಬೇಕೆಂದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಕೆವಿಎಂ ನಾಗಭೂಷಣ ಮಾತನಾಡಿ, ಇವತ್ತಿನ ದಿನಮಾನಗಳಲ್ಲಿ  ದೇಸಿ ಕ್ರೀಡೆಗಳ ಬಗ್ಗೆ ಜನರಲ್ಲಿ ಆಸಕ್ತಿ ಕುಂಠಿತವಾಗುತ್ತಿದೆ. ಬಹಳಷ್ಟು ಜನರು ನಮ್ಮ ದೇಸಿಯ ಕ್ರೀಡೆಗಳ ಬಗ್ಗೆ ಸಂಕುಚಿತ ಭಾವನೆಯನ್ನು ಬೆಳೆಸಿಕೊಂಡಿರುವುದಕ್ಕೆ ವಿಷಾದಿಸಿ, ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಕ್ರೀಡಾಸಕ್ತಿ ಬೆಳೆಸಿಕೊಂಡು ಉತ್ತಮ ಕ್ರೀಡಾಪಟುಗಳಾಗಿ  ಜಾಗತಿಕ ಮಟ್ಟದಲ್ಲಿ ದೇಶ ಗುರುತಿಸಿಕೊಳ್ಳುವಂತೆ ಮಾಡಬೇಕೆಂದರು.
ಉಪಪ್ರಾಂಶುಪಾಲ ಎಚ್. ಚಂದ್ರಶೇಖರ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ವಿ.ಎನ್. ಜವಾಯಿ ಕ್ರೀಡಾಪಟುಗಳಿಂದ ವಂದನೆ ಸ್ವೀಕರಿಸಿದರು. ಕಾಲೇಜಿನ ಪ್ರಾಚಾರ್ಯ ಕೆ. ರಾಮಕೃಷ್ಣ, ಸಿದ್ದೇಶ್ ಸಣ್ಣಗಿರಿ ಸ್ವಾಗತಿಸಿ, ಎಚ್. ಕೊಟ್ರೇಶ ನಿರೂಪಿಸಿದರು. ಜಿ.ಎಚ್. ರವೀಂದ್ರನಾಥ ವಂದಿಸಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.