ಬಳ್ಳಾರಿ

ವಲಯ ಮಟ್ಟದ ಕ್ರೀಡಾಕೂಟ

Published On :

ಮುನಿರಾಬಾದ್: ಇಲ್ಲಿನ ವಿಜಯನಗರ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಸೋಮವಾರ ವಲಯ ಮಟ್ಟದ ಪ್ರೌಢಶಾಲೆಯ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕೊಪ್ಪಳ ಜಿಪಂ ಅಧ್ಯಕ್ಷ ಟಿ. ಜನಾರ್ದನ ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೇಹ ಸದೃಢಗೊಳ್ಳುತ್ತದೆ. ಇದರಿಂದ ಸದೃಢ ಸಮಾಜ ನಿರ್ಮಾಣವಾಗುತ್ತದೆ ಎಂದರು. ತಾಪಂ ಅಧ್ಯಕ್ಷ ದೇವಣ್ಣ ಮೇಕಾಳೆ, ಮುನಿರಾಬಾದ್ ಗ್ರಾಪಂ ಅಧ್ಯಕ್ಷೆ ರಾಧಿಕಾ ರವಿ, ಉಪಾಧ್ಯಕ್ಷ ಸಾದಿಕ್ ಮೆಹಮೂದ್, ಮಾಜಿ ಅಧ್ಯಕ್ಷ ಬಾಲಚಂದ್ರ, ಎಸ್ಸಿ, ಎಸ್ಟಿ ಘಟಕದ ರಾಜ್ಯ ಸಂಚಾಲಕ ಭರಮಪ್ಪ ಬೆಲ್ಲದ್, ತಾಪಂ ಸದಸ್ಯೆ ಭಾನು ಚಾಂದ್ ಸಾಬ್, ಮುನಿರಾಬಾದ್ ಯೋಜನಾ ಶಾಖೆ ನೌಕರರ ಸಂಘದ ಅಧ್ಯಕ್ಷ ಸವದತ್ತಿ, ವಿಜಯನಗರ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಸೊನ್ನದ ಈಶಪ್ಪ, ಕಾಲೇಜಿನ ಪ್ರಾಚಾರ್ಯ ಬಸವರಾಜ, ಗ್ರಾಪಂ ಸದಸ್ಯೆ ಪಾರ್ವತಿ ಬೆಲ್ಲದ, ಯಂಕೋಬಿ ದಾಸರ್, ಶಂಕ್ರಪ್ಪ ದೊಡ್ಡಮನಿ ಹಾಗೂ ಗೌಸ್ ಉಪಸ್ಥಿತರಿದ್ದರು. ಮುನಿರಾಬಾದ್, ಹುಲಿಗೆ, ಹಿಟ್ನಾಳ, ಅಗಳ್ಕೇರಾ, ಹೊಸಳ್ಳಿ, ಹಾಗೂ ಹೊಸಲಿಂಗಾಪುರ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇಸ್ಪೀಟ್: 7 ಬಂಧನ
ಬಳ್ಳಾರಿ: ಹಂಪಿಯ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿ, 7 ಜನರನ್ನು ಬಂಧಿಸಿ, ರು. 4500 ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಹಂಪಿಯ ಪೊಲೀಸರು ದಾಳಿ ಮಾಡಿದ್ದಾರೆ. ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಟ್ಟೆ ನೋವು ತಾಳದೇ ಗೃಹಿಣಿ ಆತ್ಮಹತ್ಯೆ
ಮುನಿರಾಬಾದ್: ಹೊಟ್ಟೆ ನೋವು ತಾಳಲಾರದೇ ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ಹುಲಿಗಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತಳನ್ನು ಸುನೀತಾ (22) ಎಂದು ಗುರುತಿಸಲಾಗಿದ್ದು, ಈಕೆ ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು ಎನ್ನಲಾಗಿದೆ.  ಸುನೀತಾಮಾನಸಿಕವಾಗಿ ಅಸ್ವಸ್ಥೆಯಾಗಿದ್ದು, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.