ಅರಸು ಯೋಜನೆದೇಶಕ್ಕೆ ಮಾದರಿ: ಅಶೋಕ್
ಹೊಸಪೇಟೆ: ದೇವರಾಜ ಅರಸು ಅವರು ರೂಪಿಸಿದ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಸಹಾಯಕ ಆಯುಕ್ತ ಡಾ.ಡಿ.ಆರ್. ಅಶೋಕ್ ಹೇಳಿದರು.
ಅವರು ನಗರದ ಎಂ.ಪಿ. ಪ್ರಕಾಶ್ ಕಲಾಮಂದಿರದಲ್ಲಿ ಬಳ್ಳಾರಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದಿಂದ ದಿ. ದೇವರಾಜ ಅರಸು ಅವರ 98ನೇ ಜನ್ಮದಿನಾಚರಣೆ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿ, ಅರಸು ಅವರು ಭೂ ಸುಧಾರಣೆ ಕಾಯ್ದೆ ಜಾರಿಗೊಳಿಸುವ ಮೂಲಕ ಉಳುವವನೇ ಭೂಒಡೆಯ ಯೋಜನೆ ಮೂಲಕ ಲಕ್ಷಾಂತರ ರೈತರನ್ನು ಜಮೀನ್ದಾರ ಪಾಳೆಗಾರಿಕೆ ಪದ್ಧತಿಯ ಸಂಕೋಲೆಗಳಿಂದ ವಿಮುಕ್ತಿಗೊಳಿಸಿದರು. ಶೋಷಿತರ ಸಮಗ್ರ ಅಭಿವೃದ್ಧಿಯ ಹರಿಕಾರ, ನೊಂದವರ ನಂದಾದೀಪ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹೋರಾಡಿದ ಅದಮ್ಯ ಚೇತನವಾಗಿ ದೇಶಕ್ಕೆ ಮಾದರಿಯಾದರು ಎಂದರು.
ಕನಕ ಗುರುಪೀಠ ಮಹಾಸಂಸ್ಥಾನದ ಶ್ರೀ ಸಿದ್ದರಮಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ವೈ. ಯಮುನೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಶಿವಮೂರ್ತಿ ಮಾತನಾಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್. ಕೊಟ್ರೇಶ್, ನಗರಸಭಾ ಸದಸ್ಯರಾದ ರೂಪೇಶ್‌ಕುಮಾರ್, ನಾಗಲಕ್ಷ್ಮಿ, ಬೋಡಾ ರಾಮಪ್ಪ, ಕೆ.ಎಂ. ಹಾಲಪ್ಪ, ಗೌಳಿ ಕುಮಾರ್, ಸಂದೀಪ್ ಸಿಂಗ್, ಬಸವರಾಜ ನಾಲತ್ವಾಡ ಸೇರಿದಂತೆ ಇತರರು ಭಾಗವಹಿಸಿದ್ದರು. ಕೆ. ಮಲ್ಲೇಶಪ್ಪ ಸ್ವಾಗತಿಸಿದರು. ಶೇಖರ್ ಹೊರಪೇಟೆ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

