ಸುದ್ದಿ ಸಂಕ್ಷೇಪ
ಇಂದು ವಿದ್ಯುತ್ ವ್ಯತ್ಯಯ
ಹೂವಿನಹಡಗಲಿ: ತಾಲೂಕಿನ ಇಟ್ಟಿಗಿ 220 ಕೆ.ವಿ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆ. 28ರಂದು ಅರ್ಧ ವಾರ್ಷಿಕ ನಿರ್ವಹಣಾ ಕಾಮಗಾರಿ ಕೆಲಸ ನಿರ್ವಹಿಸುತ್ತಿರುವುದರಿಂದ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ತಾಲೂಕಿನ ಮೈಲಾರ ವಿದ್ಯುತ್ ವಿತರಣಾ ಕೇಂದ್ರ ಹೊರತುಪಡಿಸಿ ತಾಲೂಕಿನಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ, ಕಾರಣ ಗ್ರಾಹಕರು ಸಹಕರಿಸಬೇಕೆಂದು ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಟ್ಲಾನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಇಂದು ಕೃಷ್ಣ ಜನ್ಮಾಷ್ಟಮಿ
ಬಳ್ಳಾರಿ: ಶ್ರೀಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಇಸ್ಕಾನ್ ಆಶ್ರಯದಲ್ಲಿ ಹರೇ ಕೃಷ್ಣ ಭಕ್ತವೃಂದ ವತಿಯಿಂದ ಆ. 28ರಂದು ಇಲ್ಲಿನ ಗಾಂಧಿನಗರದ ವಾಸವಿ ಸಮಿತಿಯ ವಟ್ಟಂಸ್ಮಿತಾ ಸಭಾಂಗಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಇಸ್ಕಾನ್ನ ಹರಿಕೃಷ್ಣ ತಿಳಿಸಿದರು. ಅಂದು ಬೆಳಗ್ಗೆ 9ರಿಂದ 12ರ ವರೆಗೆ ಶ್ರೀಕೃಷ್ಣ ದರ್ಶನ, 11ರಿಂದ 1ರ ವರೆಗೆ ಒಂದರಿಂದ 6ನೇ ತರಗತಿಯ ಮಕ್ಕಳಿಗಾಗಿ ಹಾಗೂ ಮಧ್ಯಾಹ್ನ 2ರಿಂದ 4 ಗಂಟೆವರೆಗೆ ಏಳರಿಂದ ಹತ್ತನೇ ತರಗತಿ ಮಕ್ಕಳಿಗಾಗಿ ಸಾಂಪ್ರದಾಯಿಕ ವಸ್ತ್ರಧಾರಣೆ ಸ್ಪರ್ಧೆ ಏರ್ಪಡಿಸಲಾಗಿದೆ. ಸಂಜೆ 6ರಿಂದ 7ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಂತರ ಅಭಿಷೇಕ, 8.30ಕ್ಕೆ ತೊಟ್ಟಿಲು ಸೇವೆ ನಡೆಯಲಿದೆ ಎಂದರು. ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ನಡೆಯುವ ಕಾರ್ಯಕ್ರಮಗಳಲ್ಲಿ ಭಕ್ತಾಧಿಗಳು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಅವರು ಕೋರಿದರು.
ನಾಳೆ ಉದ್ಘಾಟನೆ
ಹೊಸಪೇಟೆ: ಹೊಸೂರಮ್ಮ ದೇವಿ ಕಲ್ಯಾಣ ಮಂಟಪ ಉದ್ಘಾಟನೆ ಸಮಾರಂಭ ಆ. 29ರಂದು ನಡೆಯಲಿದೆ. ಕಲ್ಯಾಣ ಮಂಟಪದ ನಾಮಫಲಕ ಅನಾವರಣವನ್ನು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದಪುರಿ ಸ್ವಾಮೀಜಿ ನಡೆಸಿಕೊಡುವರು. ಶಾಸಕ ಬಿ.ಎಸ್. ಆನಂದ್ ಸಿಂಗ್ ಅಧ್ಯಕ್ಷತೆ ವಹಿಸುವರು. ವಿವಿಧ ಮಠಾಧೀಶರು, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್. ರಾಘವೇಂದ್ರಚಾರ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಂ.ಎಚ್. ಪ್ರಕಾಶರಾವ್ ಸೇರಿದಂತೆ ಇತರರು ಭಾಗವಹಿಸುವರೆಂದು ಸಮಿತಿ ಸದಸ್ಯ ಗುಂಡಿ ಪ್ರಶಾಂತ ತಿಳಿಸಿದ್ದಾರೆ.
ನಾಳೆ ಸಭೆ
ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ಸಭೆಯನ್ನು ನಗರದಲ್ಲಿ ಆ. 29ರಂದು ಆಯೋಜಿಸಲಾಗಿದೆ. ಕೃಷಿ ಸಹಕಾರ ಬ್ಯಾಂಕ್ನ ಹಾಲ್ನಲ್ಲಿ ಅಂದು ಮಧ್ಯಾಹ್ನ 3 ಗಂಟೆಗೆ ಈ ಸಭೆ ಆಯೋಜಿತವಾಗಿದೆ. ಈ ಸಭೆಗೆ ಬಂದು ಸಮಾವೇಶ ಯಶಸ್ವಿಗೊಳಿಸಬೇಕೆಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿಸಾಟಿ ಮಹೇಶ್ ಮತ್ತು ಅತಿಥಿ ಉಪನ್ಯಾಸಕರ ವೇದಿಕೆ ಮುಖಂಡ ಮಲ್ಲಿಕಾರ್ಜುನ ಮಾನ್ಪಡೆ ಪತ್ರಿಕಾ ಹೇಳಿಕೆಯಲ್ಲಿ ಕೋರಿದ್ದಾರೆ.
ಜಾಗೃತಿ ಶಿಬಿರ ಇಂದು
ಬಳ್ಳಾರಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆ. 28ರಂದು ಬೆಳಗ್ಗೆ 10.30ಕ್ಕೆ ಕುವೆಂಪು ನಗರದಲ್ಲಿ ಪರಿಸರ ಮಿತ್ರ ಶಾಲಾ ಕಾರ್ಯಕ್ರಮದ ಉದ್ಘಾಟನೆ, ವಿಶ್ವ ಪರಿಸರ ದಿನಾಚರಣೆಯ ಆಶಯಗಳು ಮತ್ತು ಪರಿಸರ ಸ್ನೇಹಿ ಗಣೇಶ ಚತುರ್ಥಿ ಕುರಿತು ಜಾಗೃತಿ ಶಿಬಿರ ಆಯೋಜಿಸಿದೆ.
ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂಡೂರು ಪರಿಸರ ಶಿಕ್ಷಣ ಮತ್ತು ಅಭಿವೃದ್ಧಿ ಸಂಸ್ಥೆ, ಗೌತಮ ಬುದ್ಧ ಸ್ಮಾರಕ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ನಾರಾಯಣ ಗೌಡ ಶಿಬಿರ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

