ಕ್ರೀಡೆಗಳಿಂದ ಕ್ರಿಯಾಶೀಲ ವ್ಯಕ್ತಿತ್ವ: ಭೀಮಾನಾಯ್ಕ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಆ. 28
ಕ್ರೀಡೆಗಳು ಮನುಷ್ಯನ ಆರೋಗ್ಯ ವೃದ್ಧಿಸುವ ಜತೆಗೆ ಕ್ರಿಯಾಶೀಲ ವ್ಯಕ್ತಿತ್ವವನ್ನು ರೂಢಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಎಸ್. ಭೀಮಾನಾಯ್ಕ ಹೇಳಿದರು.
ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಪ್ರಾಢಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಚಟವಟಿಕೆಗಳೊಂದಿಗೆ ಕ್ರೀಡಾಕೂಟದಲ್ಲಿ ಸಹ ತೊಡಗಿಕೊಂಡು ಉತ್ತಮ ಕ್ರೀಡಾಪಟುಗಳಾಗಿ ಪ್ರತಿಭಾವಂತ ವಿದ್ಯಾರ್ಥಿಗಳಾಗಿ ಬೆಳೆಯಬೇಕು. ಕ್ರೀಡಾಪಟುಗಳಿಗೂ ಉದ್ಯೋಗದಲ್ಲಿ ಉತ್ತಮ ಅವಕಾಶಗಳಿವೆ. ಉತ್ತಮ ಕ್ರೀಡಾಪಟುಗಳಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು. ಕ್ರೀಡಾ ಮನೋಭಾವನೆಯಿಂದ ಭಾಗವಹಿಸಬೇಕು. ಕ್ರೀಡಾ ನಿರ್ಣಾಯಕರು ಪ್ರಮಾಣಿಕ ತೀರ್ಪು ನೀಡುವ ಮೂಲಕ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಎಸ್ಡಿಎಂಸಿ ಸದಸ್ಯ ಕೆ. ಲೊಕೇಶ್ ಮಾತನಾಡಿ, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ವಿಶೇಷ ಕಾಳಜಿ ವಹಿಸುವ ಮೂಲಕ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಶಿವಮೂರ್ತಿ, ಬಿಎಂಎಂ ಇಸ್ಪಾತ್ ಕಾರ್ಖಾನೆ ಮುಖ್ಯಸ್ಥ ಲಕ್ಷ್ಮಿನಾರಾಯಣ, ಸ್ಥಳೀಯ ಗ್ರಾಪಂ ಅಧ್ಯಕ್ಷ ಸುಭಾನ್, ತಾಪಂ ಸದಸ್ಯರಾದ ಬಾಣದ ಸೀತಮ್ಮ, ಯು. ಸೋಮಪ್ಪ, ಎಚ್. ಲಕ್ಷ್ಮಣ, ಎಸ್ಡಿಎಂಸಿ ಉಪಾಧ್ಯಕ್ಷ ಬಿ. ತಾಯಪ್ಪ, ಸದಸ್ಯರಾದ ಬಿ. ವಿಜಯಕುಮಾರ್, ಎಂ. ರಮೇಶ್ ಕುಮಾರ್ ಜೈನ್, ಎನ್.ಎಸ್. ಬುಡನೇನ್ ಸಾಹೇಬ್, ಎಚ್. ಪಾಂಡುರಂಗ ಶೆಟ್ಟಿ, ಕುರಿ ಹನುಮಂತಪ್ಪ ಮಣಿಗಾರ್ ಮಂಜುನಾಥ, ರೆಡ್ಡಿ ಮಾಬುಸಾಬ್, ನಾಗರಾಜ್ ನಾಯ್ಕ, ಎಂ. ವಿಶ್ವನಾಥ ಶೆಟ್ಟಿ, ತಳವಾರ ಹುಲುಗಪ್ಪ, ಚಿದ್ರಿ ಸತೀಶ್, ಗ್ರಾಪಂ ಸದಸ್ಯರಾದ ಬಾಣದ ಯಮುನೂರ, ಬಿ. ನಾಗೇಂದ್ರ, ಶಿಕ್ಷಣ ಇಲಾಖೆಯ ಅಧಿಕಾರಿ ಶರಣಪ್ಪ ವಟಗಲ್, ಬಸವರಾಜ್ ಜತ್ತಿ, ಪ್ರಾಚಾರ್ಯ ಕೆ. ಲಕ್ಷ್ಮಣ, ಉಪ ಪ್ರಚಾರ್ಯ ಬೆಂಜಮಿನ್ ರತ್ನಾಕರ, ಶಿಕ್ಷಕರ ಸಂಘದ ಅಧ್ಯಕ್ಷ ಮಾರ್ಗದಪ್ಪ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿದ್ದರು. ಶಿಕ್ಷಕ ಬಿ. ಅಲ್ಲಾಭಕ್ಷಿ ಸ್ವಾಗತಿಸಿ, ಸುಭಾಷ್ ವಂದಿಸಿದರು. ಕೆ. ವೀರೇಶ್ ಕಾರ್ಯಕ್ರಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

