ಬಳ್ಳಾರಿ

ಡಿಸೆಂಬರ್ ವೇಳೆಗೆ ಡಣಾಯಕನಕೆರೆ ಭರ್ತಿ

Published On :

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಆ. 28
ಡಣಾಯಕನಕೆರೆ ಏತ ನೀರಾವರಿ ಯೋಜನೆಯಿಂದ ಡಿಸೆಂಬರ್ ವೇಳೆಗೆ ಡಣಾಯಕನಕೆರೆಗೆ ಪೂರ್ತಿ ನೀರು ತುಂಬಿಸುವ ಕಾರ್ಯ ನಡೆಸಲಾಗುತ್ತದೆ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಸ್. ಭೀಮಾನಾಯ್ಕ ಹೇಳಿದರು.
ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಬುಧವಾರ ಪ್ರೌಢಶಾಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿದ ಅನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ತುಂಗಭದ್ರಾ ಜಲಾಶಯದಲ್ಲಿ ಸಾಕಷ್ಟು ನೀರು ಇರುವಾಗಲೇ ಕೆರೆ ತುಂಬಿಸುವ ಕೆಲಸವಾಗಬೇಕು. ಈ ಮಾರ್ಗದ ಪೈಪ್‌ಲೈನ್ ಕಾಮಗಾರಿ ಕಳಪೆಯಾಗಿದ್ದು, ಸೋರಿಕೆಯಾಗುತ್ತಿದೆ. ಪೈಪ್ ದುರಸ್ತಿ ಕಾರ್ಯ ನಡೆಸಲಾಗುತ್ತದೆ. ಜತೆಗೆ ಎರಡು ಮೂರು ದಿನಗಳಿಂದ ಕೆರೆಗೆ ನೀರು ತುಂಬಿಸುವ ಕಾರ್ಯವೂ ನಡೆಯುತ್ತಿದೆ ಎಂದು ಅವರು ವಿವರಿಸಿದರು.
ಕುಡಿಯುವ ನೀರು ಯೋಜನೆ: ತುಂಗಭದ್ರಾ ಜಲಾಶಯದಿಂದ ಶಾಶ್ವತ ಕುಡಿಯುವ ನೀರು ಒದಗಿಸುವ ಸಮುದಾಯ ಆಧಾರಿತ ಯೋಜನೆಯಲ್ಲಿ ಮರಿಯಮ್ಮನಹಳ್ಳಿ ಸೇರಿದಂತೆ ಕೇವಲ 9 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ರೂಪಿತವಾಗಿತ್ತು. ಇದೇ ರೀತಿಯಲ್ಲಿ ರು. 28.79 ಕೋಟಿ ವೆಚ್ಚದಲ್ಲಿ ತುಂಗಭದ್ರಾ ಜಲಾಶಯದಿಂದ ಮರಿಯಮ್ಮನಹಳ್ಳಿ ಸೇರಿದಂತೆ ಸುತ್ತಮುತ್ತಲಿನ 24 ಗ್ರಾಮಗಳಿಗೆ ಶುದ್ಧವಾದ ಕುಡಿಯುವ ನೀರು ಒದಗಿಸುವ ಯೋಜನೆಗೆ ಆದಷ್ಟು ಬೇಗನೆ ಚಾಲನೆ ನೀಡಲಾಗುತ್ತದೆ ಎಂದು ಅವರು ವಿವರಿಸಿದರು.
ಪಟ್ಟಣ ಪಂಚಾಯಿತಿ: ಮರಿಯಮ್ಮನಹಳ್ಳಿ ಗ್ರಾಮದ ಜನಸಂಖ್ಯೆ ಸಮೀಕ್ಷೆ ನಡೆಸಿದ ಬಳಿಕ ಪಟ್ಟಣ ಪಂಚಾಯಿತಿಗೆ ಒತ್ತಾಯಿಸಲಾಗುತ್ತದೆ. ಈಗಾಗಲೇ ಹಗರಿಬೊಮ್ಮನಹಳ್ಳಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಒತ್ತಾಯಿಸಲಾಗಿದೆ. ಇದೇ ರೀತಿಯಲ್ಲಿ ಮರಿಯಮ್ಮನಹಳ್ಳಿಯನ್ನು ಸಹ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಸದನದಲ್ಲಿ ಸಹ ಚರ್ಚಿಸಲಾಗಿದೆ ಎಂದು ಅವರು ವಿವರಿಸಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಕುರಿ ಶಿವಮೂರ್ತಿ, ತಾಪಂ ಸದಸ್ಯ ಎಚ್. ಲಕ್ಷ್ಮಣ, ಗ್ರಾಪಂ ಅಧ್ಯಕ್ಷ ಸುಭಾನ್, ಸ್ಥಳೀಯ ಮುಖಂಡರಾದ ಎಚ್. ಪಾಂಡುರಂಗ ಶೆಟ್ಟಿ, ಬಿ. ತಾಯಪ್ಪ, ಬಿ. ವಿಜಯಕುಮಾರ್, ಮಣಿಗಾರ್ ಮಂಜುನಾಥ, ಬಾಣದ ಯಮುನೂರ ಸುದ್ದಿಗೋಷ್ಠಿಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.