ಬಳ್ಳಾರಿ

ಸುದ್ದಿ ಸಂಕ್ಷೇಪ

Published On :

ಹೊಸಪೇಟೆ: ಇಂದು ಅಡಿಗಲ್ಲು ಸಮಾರಂಭ
ಹೊಸಪೇಟೆ: ಹೊಸಪೇಟೆ ವಕೀಲರ ಸಂಘದ ಕಟ್ಟಡದ ಅಡಿಗಲ್ಲು ಸಮಾರಂಭ ನಗರದ ನ್ಯಾಯಾಲಯದ ಆವರಣದಲ್ಲಿ ಆ. 31ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಡಿ. ವಿಶ್ವೇಶ್ವರ ಭಟ್ ವಕೀಲರ ಸಂಘದ ಕಟ್ಟಡದ ಭೂಮಿಪೂಜೆ ನೆರವೇರಿಸುವರು. ಹೊಸಪೇಟೆ ವಕೀಲರ ಸಂಘದ ಅಧ್ಯಕ್ಷ ರತ್ನಾಕರ ರಾವ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವ ನಾಯ್ಕ, 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಶಿವಣ್ಣ, ಶಾಸಕ ಬಿ.ಎಸ್. ಆನಂದ್ ಸಿಂಗ್, ಬಳ್ಳಾರಿ ಸಂಸದೆ ಜೆ. ಶಾಂತಾ, ವಿಧಾನಪರಿಷತ್ ಸದಸ್ಯರಾದ ಮೃತ್ಯುಂಜಯ ಜಿನಗಾ, ಅಮರನಾಥ ಪಾಟೀಲ್, ಕರ್ನಾಟಕ ವಕೀಲರ ಪರಿಷತ್ ಸದಸ್ಯ ಜೆ.ಎಂ. ಅನಿಲ್‌ಕುಮಾರ್, ವಕೀಲರ ಸಂಘದ ಕಾರ್ಯದರ್ಶಿ ಕೊಟ್ರೇಶ್ ಹಿರೇಮಠ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ವಕೀಲರ ಸಂಘದ ಉಪಾಧ್ಯಕ್ಷ ಎಂ.ಕಾಳಿದಾಸ, ಜಂಟಿ ಕಾರ್ಯದರ್ಶಿ ಈ. ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಸೆ. 4ರಿಂದ ತಾಲೂಕು ಮಟ್ಟದ ಕ್ರೀಡಾಕೂಟ
ಹಗರಿಬೊಮ್ಮನಹಳ್ಳಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸೆ. 4 ಹಾಗೂ 6ರಂದು ಎರಡು ದಿನಗಳ ಕಾಲ ತಾಲೂಕಿನ ವಲ್ಲಭಾಪುರ ಗ್ರಾಮದಲ್ಲಿನ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟ ಜರುಗಲಿದೆ. ಸೆ. 4ರಂದು ಬೆಳಗ್ಗೆ 9ಕ್ಕೆ ಶಾಸಕ ಎಸ್. ಭೀಮಾನಾಯ್ಕ ಅಧ್ಯಕ್ಷತೆಯಲ್ಲಿ ಕ್ರೀಡಾಜ್ಯೋತಿ ಬೆಳಗಲಿದ್ದು, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಕ್ರೀಡಾಪಟುಗಳಿಂದ ವಂದನೆ ಸ್ವೀಕರಿಸಲಿದ್ದಾರೆ. ಹರಪ್ಪನಹಳ್ಳಿ ಶಾಸಕ ಎಂ.ಪಿ. ರವೀಂದ್ರ ಕ್ರೀಡಾ ಧ್ವಜಾರೋಹಣ ನೇರವೇರಿಸಿದರೆ, ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಪೂರ್ಯನಾಯ್ಕ ಸಮಾರಂಭ ಉದ್ಘಾಟಿಸಲಿದ್ದಾರೆ. ಚಿಂತ್ರಪಳ್ಳಿ ಗ್ರಾಪಂ ಅಧ್ಯಕ್ಷ ಎಂ. ಆನಂದ್ ಪ್ರತಿಜ್ಞಾವಿಧಿ ಬೋಧಿಸುವರು. ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ, ತಾಪಂ ಉಪಾಧ್ಯಕ್ಷೆ ನಾಗರತ್ನಾ ವೆಂಕಟೇಶ್, ಜಿಪಂ ಸದಸ್ಯರಾದ ಹೇಮ್ಲವ್ವ ಕೃಷ್ಣನಾಯ್ಕ, ಕರಿಬಸವನಗೌಡ್ರ ರತ್ನಮ್ಮ, ರೋಗಾಣಿ ಹುಲುಗಪ್ಪ, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ.ಎಸ್. ಪ್ರಕಾಶ್, ತಾಪಂ ಸದಸ್ಯರಾದ ಉಪ್ಪಾರ ಬಾಲಪ್ಪ, ಪವಾಡಿ ಗಂಗಮ್ಮ, ಎಪಿಎಂಸಿ ಅಧ್ಯಕ್ಷ ಟಿ. ಬುಳ್ಳಪ್ಪ, ಗ್ರಾಪಂ ಸದಸ್ಯರಾದ ಎಂ.ಪಿ. ರುದ್ರಮ್ಮ ಬಾಪೂಜಿ, ಎಚ್. ಕೊಟ್ರೇಶ್, ಯಶೋದಮ್ಮ ವೆಂಕಟೇಶ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಎನ್. ರಾಜಪ್ಪ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.