ಸೌಹಾರ್ದಕ್ಕಾಗಿ ಶ್ರಮಿಸಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಆ. 30
ಭಾರತ ದೇಶವು ವೈವಿಧ್ಯಮಯ ಜಾತಿ, ಧರ್ಮ, ಮತ ಮತ್ತು ಭಾಷೆಗಳನ್ನು ಹೊಂದಿದ್ದು, ವಿದ್ಯಾರ್ಥಿಗಳು ದೇಶದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಶ್ರಮಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕಿ ಡಾ. ಬಿ.ಜಿ. ಕಲಾವತಿ ಸಲಹೆ ನೀಡಿದರು.
ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೇಂಜರ್ಸ್ ಆಂಡ್ರೋವರ್ಸ್ ಘಟಕಗಳಿಂದ ಏರ್ಪಡಿಸಿದ್ದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ನಂತರ ಮಾತನಾಡಿದರು. ಯಾವುದೇ ಸಂದರ್ಭದಲ್ಲಿ ಎಲ್ಲಿಯೇ ಆಗಲಿ ಭೇದಭಾವಗಳನ್ನು ಮಾಡದೆ, ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನಾ ಮತ್ತು ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸಿಕೊಳ್ಳಬೇಕೆಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಪ್ರೊ. ಡಿ.ಗಂಗಣ್ಣ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ವಾಣಿಜ್ಯಶಾಸ್ತ್ರ ಮುಖ್ಯಸ್ಥ ಪ್ರೊ. ಎಂ. ಗೋಪಾಲ, ರೇಂಜರ್ಸ್ ಘಟಕದ ಸಂಚಾಲಕಿ ಶೋಭಾರಾಣಿ, ರೋವರ್ಸ್ ಘಟಕದ ಸಂಚಾಲಕ ಅಣ್ಣಪ್ಪಸ್ವಾಮಿ, ಕೆ.ಎನ್. ರಾಮಾಂಜನೇಯ, ಸಹಾಯಕ ಪ್ರಾಧ್ಯಾಪಕರಾದ ಸಿ.ಎಚ್. ಸೋಮನಾಥ, ಚನ್ನಬಸವಯ್ಯ, ಶಶಿಕಾಂತ, ದೈಹಿಕ ಶಿಕ್ಷಣ ಬೋಧಕ ಪಂಪನಗೌಡ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

