ಭಾರತರತ್ನ ನೀಡಲು ಆಗ್ರಹ
ಹೂವಿನಹಡಗಲಿ: ಭಾರತದ ರಾಷ್ಟ್ರೀಯ ಕ್ರೀಡೆ ಹಾಕಿಯ ದಂತಕಥೆ ಮೇಜರ್ ಧ್ಯಾನ್‌ಚಂದ್ ಸಿಂಗ್ ಅವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡಿ ಅವರ ಕ್ರೀಡಾ ಸಾಧನೆಯನ್ನು ಗೌರವಿಸುವಂತೆ ಸಹಾಯಕ ಕ್ರೀಡಾ ಅಧಿಕಾರಿ ರಫಿಅಹ್ಮದ್ ಖವಾಸ್ ಮನವಿ ಮಾಡಿದರು.
ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಮೇಜರ್ ಧ್ಯಾನ್‌ಚಂದ್ ಸಿಂಗ್ ಜನ್ಮದಿನಾಚರಣೆ ನಿಮಿತ್ತ ರಾಷ್ಟ್ರೀಯ ಕ್ರೀಡಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತಕ್ಕೆ ಸತತ ಮೂರು ಬಂಗಾರದ ಪದಕ ತಂದುಕೊಡುವ ಮೂಲಕ ದೇಶದ ಕ್ರೀಡಾ ಚರಿತ್ರೆಯಲ್ಲಿ ದಾಖಲೆ ಬರೆದಿದ್ದಾರೆ. ಪ್ರತಿಯೊಬ್ಬರನ್ನು ಒಗ್ಗೂಡಿಸುವ ಶಕ್ತಿ ಕ್ರೀಡೆಗೆ ಮಾತ್ರ ಇದೆ. ಮಹಾನ್ ಕ್ರೀಡಾ ಸಾಧಕರನ್ನು ಸ್ಮರಿಸುವ ನೆಪದಲ್ಲಿ ಕ್ರೀಡಾ ಪ್ರತಿಭೆಗಳಿಗೆ ಉತ್ತೇಜನ ನೀಡುವಂತಾಗಬೇಕೆಂದು ಹೇಳಿದರು.
ಕ್ರೀಡಾದರ್ಶಗಳನ್ನು ಮೆರೆದ ಮೇಜರ್ ಧ್ಯಾನ್‌ಚಂದ್ ಅವರ ಆದರ್ಶ ಗುಣಗಳನ್ನು ಯುವ ಕ್ರೀಡಾ ಪ್ರತಿಭೆಗಳು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಅಧೀಕ್ಷಕ ಎನ್. ಮಂಜುನಾಥ, ಕ್ರೀಡಾಪ್ರೇಮಿ ಯು. ಕೊಟ್ರೇಶ್ ನಾಯ್ಕ, ದೈಹಿಕ ಶಿಕ್ಷಕ ಮಂಜುನಾಥ, ಶೋಭಾ, ಮಂಜುಳಾ ಹಾಗೂ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

