ಬಳ್ಳಾರಿ

ಮಾತಿನ ಚಕಮಕಿ: ಗ್ರಾಮಸಭೆ ಮೊಟಕು

Published On :

ಹಗರಿಬೊಮ್ಮನಹಳ್ಳಿ: ಸರ್ಕಾರಿ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆ ಸಂಬಂಧಿಸಿದಂತೆ ಗ್ರಾಪಂ ಕಾರ್ಯದರ್ಶಿ ಮತ್ತು ನಾಗರಿಕರ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆದು, ಸಭೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿ ಪರಿಸ್ಥಿತಿ ತಹಬದಿಗೆ ಬರದ ಕಾರಣ ಗ್ರಾಮಸಭೆಯನ್ನೇ ಮುಂದೂಡಿದ ಘಟನೆ ಶುಕ್ರವಾರ ಮಧ್ಯಾಹ್ನ ತಾಲೂಕಿನ ಬಾಚಿಗೊಂಡನಹಳ್ಳಿ ಗ್ರಾಮದಲ್ಲಿ ಜರುಗಿದೆ. ಸರ್ಕಾರದಿಂದ ಮಂಜೂರಾಗುವ ವಸತಿ, ಸಿಸಿ ರಸ್ತೆ ನಿರ್ಮಾಣ ಸೇರಿದಂತೆ ಯಾವುದೇ ಸೌಲಭ್ಯಗಳ ಬಗ್ಗೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಗ್ರಾಮಸಭೆ ನಡೆಸದೇ ನಿಮಗೆ ಇಷ್ಟ ಬಂದಂತೆ ಆಯ್ಕೆ ಮಾಡುತ್ತೀರಿ. ಇದರ ಬಗ್ಗೆ ನಮಗೆ ಸ್ಪಷ್ಟನೆ ನೀಡುವ ತನಕ ಗ್ರಾಮಸಭೆ ಮುಂದುವರೆಸುವುದು ಬೇಡ ಎಂದು ಗ್ರಾಮಸ್ಥರು ಬಿಗಿಪಟ್ಟು ಹಿಡಿದಿದ್ದೇ ಸಭೆಯಲ್ಲಿ ಮಾತಿನ ಚಕಮಕಿಗೆ ಕಾರಣವಾಯಿತು. ಗಲಾಟೆ ಮಾಡುವವರನ್ನು ಸಭೆಯಿಂದ ಹೊರಗೆ ಹಾಕಿ ಸಭೆ ನಡೆಸುವುದಾಗಿ ಅಧಿಕಾರಿಗಳು ಹೇಳಿದ್ದರಿಂದ ವಾಗ್ವಾದ ತೀವ್ರಗೊಂಡಿತು. ಗ್ರಾಮಸಭೆ ಪಂಚಾಯತ್ ರಾಜ್ ಅಧಿನಿಯಮದ ಮೂಲ ಅಡಿಪಾಯವಿದ್ದಂತೆ. ಆದರೆ ಬಹುತೇಕ ಅಧಿಕಾರಿಗಳಿಗೆ ಗ್ರಾಮಸಭೆಗಳ ಮಹತ್ವವೇ ಗೊತ್ತಿಲ್ಲ. ಗ್ರಾಮಸಭೆಗಳಲ್ಲಿ ಭಾಗವಹಿಸುವ ಅಧಿಕಾರಿಗಳು ಬಹುಬೇಗನೆ ತಾಳ್ಮೆ ಕಳೆದುಕೊಳ್ಳುತ್ತಾರೆ. ನಾಗರಿಕರು, ರೈತರು ಎತ್ತುವ ಪ್ರಶ್ನೆ, ಅನುಮಾನಗಳಿಗೆ ಸಮರ್ಪಕ ಮಾಹಿತಿ, ಉತ್ತರ ನೀಡುವುದಿಲ್ಲ. ಸರ್ಕಾರದ ಆಶಯಗಳೆಲ್ಲವೂ ಗಾಳಿಗೆ ತೂರಲ್ಪಡುತ್ತಿವೆ ಎಂದು ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ಲೋಕಪ್ಪ ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.